ಫಾಸ್ಟ್ ಚಾರ್ಜಿಂಗ್ ಫೋನ್ ಖರೀದಿಸುವ ಗ್ರಾಹಕರೇ ಗಮನಿಸಿ!..ಇವೇ ಬೆಸ್ಟ್!
ಸದ್ಯ ಸ್ಮಾರ್ಟ್‌ಫೋನ್ ಎಲ್ಲರಿಗೂ ಅನಿವಾರ್ಯ ಡಿವೈಸ್ ಎನ್ನುವುದರಲ್ಲಿ ಎರಡು ಮಾತಿಲ್ಲ. ಏಕೆಂದರೆ ಬಹುತೇಕ ಕೆಲಸಗಳು ಆನ್‌ಲೈನ್ ಮೂಲಕವೇ ನಡೆಯುತ್ತವೆ. ಈ ನಿಟ್ಟಿನಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್ ಅವಶ್ಯ ಎನಿಸಿರುತ್ತದೆ. ಅದರಲ್ಲಿಯೂ ಇತ್ತೀಚಿನ ಫೋನ್‌ಗಳು ಉಪಯುಕ್ತ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಎಂಟ್ರಿ ನೀಡುತ್ತಿವೆ. ಆ ಪೈಕಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೆಚ್ಚಿನ ಗಮನ ಸೆಳೆದಿದೆ.
ಹೊಸ ಫೋನ್ ಖರೀದಿಸುವಾಗ ಅನೇಕ ಜನರು ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಇರುವ ಫೋನ್‌ಗಳನ್ನು ಖರೀದಿಸಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಪ್ರಮುಖ ಮೊಬೈಲ್ ಕಂಪನಿಗಳು ಸಹ ಅತ್ಯುತ್ತಮ ಫಾಸ್ಟ್ ಚಾರ್ಜಿಂಗ್ ಆಯ್ಕೆಗಳನ್ನು ಪರಿಚಯಿಸುತ್ತ ಮುನ್ನಡೆದಿವೆ. ಇತ್ತೀಚಿನ ಹಲವು ಫೋನ್‌ಗಳಲ್ಲಿ ಫ್ಲ್ಯಾಶ್ ಚಾರ್ಜಿಂಗ್, ಸೂಪರ್‌ವೂಕ್ ಚಾರ್ಜಿಂಗ್, ಟರ್ಬೋ ಚಾರ್ಜಿಂಗ್ ಆಯ್ಕೆಗಳನ್ನು ಕಾಣಬಹುದಾಗಿದೆ. ಅಂತಹ ಕೆಲವು ಬೆಸ್ಟ್ ಫೋನ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ.

ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G : ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 67W ಸೂಪರ್ ವೂಕ್ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಹಾಗೆಯೇ ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದರೊಂದಿಗೆ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಅಲ್ಲದೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ.

ವಿವೋ Y100 5G : ಈ ಸ್ಮಾರ್ಟ್‌ಫೋನ್ 44W ವೇಗದ ಚಾರ್ಜಿಂಗ್ ಬೆಂಬಲಿಸುವ 4,500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಜೊತೆಗೆ 6.38 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.
ಒನ್‌ಪ್ಲಸ್ 11R ಸ್ಮಾರ್ಟ್‌ಫೋನ್ : ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 100W SUPERVOOC S ಫ್ಲಾಶ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಜೊತೆಗೆ 6.74 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, ಡಿಸ್‌ಪ್ಲೇ 2772 x 1240 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಅಲ್ಲದೇ ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 5G SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G : ಈ ನೂತನ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 25W ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಹಾಗೆಯೇ 6.4 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್ ನೀಡಲಿದೆ. ಇದರೊಂದಿಗೆ ಎಕ್ಸಿನೋಸ್ 1380 SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಇನ್ನು ಈ ಫೋನ್ 8 GB + 128 GB ವೇರಿಯಂಟ್ ಹಾಗೂ 8 GB + 256 GB ವೇರಿಯಂಟ್ ಆಯ್ಕೆ ಪಡೆದಿವೆ.


Click it and Unblock the Notifications








