ಭಾರತದಲ್ಲಿ ಲಭ್ಯವಿರುವ ಐದು ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳು!

|

ಇತ್ತೀಚಿನ ದಿನಗಳಲ್ಲಿ ಬಿಡುಗಡೆಯಾಗುತ್ತಿರುವ ಹೆಚ್ಚಿನ ಸ್ಮಾರ್ಟ್‌ಫೋನ್‌ಗಳು 5G ನೆಟ್‌ವರ್ಕ್‌ ಬೆಂಬಲಿಸುವ ಸಾಮರ್ಥ್ಯವನ್ನು ಹೊಂದಿದೆ. ಭಾರತದಲ್ಲಿ 5G ಇಲ್ಲದೆ ಹೋದರೂ 5G ಸ್ಮಾರ್ಟ್‌ಫೋನ್‌ಗಳು ಮಾತ್ರ ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೇ ಇವೆ. ಭವಿಷ್ಯದಲ್ಲಿ ಭಾರತದಲ್ಲಿ 5G ನೆಟ್‌ವರ್ಕ್‌ ಲಭ್ಯವಾಗುವುದರಿಂದ ಎಲ್ಲಾ ಸ್ಮಾರ್ಟ್‌ಫೋನ್‌ ಕಂಪೆನಿಗಳು 5G ಸ್ಮಾರ್ಟ್‌ಫೋನ್‌ ಪರಿಚಯಿಸುತ್ತಿವೆ. ಇನ್ನು ಈ ವರ್ಷ, ಅನೇಕ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳು ಭಾರತದಲ್ಲಿ 5G ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

5G

ಹೌದು, ಭಾರತದಲ್ಲಿ 5G ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಬಿಡುಗಡೆ ಆಗುತ್ತಿವೆ. 5G ಸ್ಮಾರ್ಟ್‌ಫೋನ್‌ಗಳು ಉತ್ತಮ ಪ್ರೊಸೆಸರ್‌ ಸಾಮರ್ಥ್ಯ, ಬಿಗ್‌ ಬ್ಯಾಟರಿ ಸಾಮರ್ಥ್ಯವನ್ನು ಹೊಂದಿರುವುದರಿಂದ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಆಕರ್ಷಿಸುತ್ತಿವೆ. ಸದ್ಯ ಭಾರತ ಮಾರುಕಟ್ಟೆಯಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳ ಬಗ್ಗೆ ತಿಳಿಸಿಕೊಡ್ತೀವಿ ಈ ಲೇಖನವನ್ನು ಓದಿರಿ.

ರಿಯಲ್‌ಮಿ X7

ರಿಯಲ್‌ಮಿ X7

ರಿಯಲ್‌ಮಿ ಕಂಪೆನಿ ಇತ್ತೀಚಿಗೆ ಲಾಂಚ್‌ ಮಾಡಿದ ರಿಯಲ್‌ಮಿ X7 ಸ್ಮಾರ್ಟ್‌ಫೋನ್‌ 5G ಬೆಂಬಲಿಸುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇದು 6.4-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇ 600nits ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಜೊತೆಗೆ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾ ಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇದು 4,310mAh ಬ್ಯಾಟರಿಯನ್ನು ಹೊಂದಿದ್ದು, 50W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ 19,999 ರೂ. ಆಗಿದೆ.

ಶಿಯೋಮಿ ಮಿ10i

ಶಿಯೋಮಿ ಮಿ10i

ಈ ದಿನಗಳಲ್ಲಿ ಮಧ್ಯ ಶ್ರೇಣಿಯ ಡಿವೈಸ್‌ಗಳು ಸಹ ಪ್ರಬಲ ಪ್ರೊಸೆಸರ್ ಅನ್ನು ನೀಡುತ್ತವೆ. ಇದರಲ್ಲಿ ಶಿಯೋಮಿ ಮಿ10I ಸ್ಮಾರ್ಟ್‌ಫೋನ್‌ ಕೂಡ ಸೇರಿದೆ. ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ದರ ಮತ್ತು HDR10 + ಅನ್ನು ಬೆಂಬಲಿಸಲಿದೆ. ಇದು ಐ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 750G ಪ್ರೊಸೆಸರ್ ಹೊಂದಿದೆ. ಆದಾಗ್ಯೂ, ಈ 5G ಸ್ಮಾರ್ಟ್‌ಫೋನ್‌ನೊಂದಿಗೆ ನೀವು ಕೆಲವು ಬ್ಲೋಟ್‌ವೇರ್ ಅನ್ನು ಪಡೆಯುತ್ತೀರಿ. ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದು 4,820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದರ ಬೆಲೆ 20,999 ರೂ.ಆಗಿದೆ.

ಒನ್‌ಪ್ಲಸ್ ನಾರ್ಡ್

ಒನ್‌ಪ್ಲಸ್ ನಾರ್ಡ್

ಒನ್‌ಪ್ಲಸ್ ನಾರ್ಡ್ ಸ್ಮಾರ್ಟ್‌ಫೋನ್‌ ಕೂಡ ನಿಮಗೆ ಉತ್ತಮ ಕಾರ್ಯಕ್ಷಮತೆಯನ್ನು ನೀಡುತ್ತದೆ. ಈ ಸ್ಮಾರ್ಟ್‌ಫೋನ್‌ 6.44-ಇಂಚಿನ ಫುಲ್‌-ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಜೊತಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ. ಇದು ಮಧ್ಯ ಶ್ರೇಣಿಯ 5G ಕ್ವಾಲ್ಕಾಮ್‌ನ ಶಕ್ತಿಯುತ ಸ್ನಾಪ್‌ಡ್ರಾಗನ್ 765G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೋನಿ ಐಎಂಎಕ್ಸ್ 586 ಸೆನ್ಸಾರ್ ಹೊಂದಿದೆ. ಜೊತೆಗೆ ಇದು 4,115mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ಚಾರ್ಜರ್ ಅನ್ನು ಬೆಂಬಲಿಸಲಿದೆ. ಇದರ ಬೆಲೆ 27,999 ರೂ.ಆಗಿದೆ.

ರಿಯಲ್‌ಮಿ X7 ಪ್ರೊ 5G

ರಿಯಲ್‌ಮಿ X7 ಪ್ರೊ 5G

ರಿಯಲ್‌ಮಿ X7 ಪ್ರೊ ಸ್ಮಾರ್ಟ್‌ಫೋನ್‌ ಮತ್ತೊಂದು ಅತ್ಯುತ್ತಮ 5G ಮಧ್ಯ ಶ್ರೇಣಿಯ ಫೋನ್ ಆಗಿದೆ. ಇದು ಸ್ಟ್ಯಾಂಡರ್ಡ್ 6.55-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಹಾಗೂ 1,200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಡೈಮೆನ್ಸಿಟಿ 1000+ ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್‌ಗೆ ಅನ್ನು ಬೆಂಬಲಿಸಲಿದೆ. ಇದು 29,999 ರೂಗಳಿಗೆ ಲಭ್ಯವಿದೆ.

ವಿವೋ ವಿ 20 ಪ್ರೊ

ವಿವೋ ವಿ 20 ಪ್ರೊ

ವಿವೊ ವಿ20 ಪ್ರೊ ಸ್ಮಾರ್ಟ್‌ಫೋನ್ ಕೂಡ ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G ಪ್ರೊಸೆಸರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 44MP + 8MP ಸಾಮರ್ಥ್ಯದ ಡ್ಯುಯಲ್ ಫ್ರಂಟ್-ಫೇಸಿಂಗ್ ಸೆಲ್ಫಿ ಕ್ಯಾಮೆರಾಗಳನ್ನು ಹೊಂದಿದೆ. ಇದು 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜರ್ ಅನ್ನು ಬೆಂಬಲಿಸಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ನಲ್ಲಿ 29,990 ರೂಗಳಿಗೆ ಖರೀದಿಸಬಹುದಾಗಿದೆ.

Best Mobiles in India

English summary
Best Five 5G smartphones Available In India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X