ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಭಾರಿ ಟ್ರೆಂಡ್ ಸೃಷ್ಟಿಸಿವೆ!..ಇವುಗಳ ಮೇಲೆ ಯಾಕಿಷ್ಟು ವ್ಯಾಮೋಹ!
ಮೊಬೈಲ್ ಮಾರುಕಟ್ಟೆಯಲ್ಲಿ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಅತ್ಯುತ್ತಮವಾದ ಫೀಚರ್ಸ್‌ಗಳು, ಕ್ಯಾಮೆರಾ ಸೆನ್ಸಾರ್, ಉತ್ಕೃಷ್ಟವಾದ ಪ್ರೊಸೆಸರ್ ಕಾರ್ಯದಕ್ಷತೆ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆಯಿರುವಂತೆ ಮಾಡಿದೆ. ಅದರಂತೆ ಆಕ್ಟೋಬರ್ ತಿಂಗಳಿನಲ್ಲಿಯೂ ಸಹ ಹಲವು ಪ್ರೀಮಿಯಂ ಫೋನ್‌ಗಳು ಸದ್ದು ಮಾಡುತ್ತಿವೆ.
ಹೌದು, ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಯಲ್ಲಿ ಸಖತ್ ಸಂಚಲನ ಸೃಷ್ಟಿಸಿವೆ. ಆಕ್ಟೋಬರ್ ತಿಂಗಳಲ್ಲಿ ಸಹ ಇವುಗಳ ಆರ್ಭಟ ಮುಂದುವರೆದಿದೆ. ವೇಗದ ಚಾರ್ಜಿಂಗ್, ವಾಯರ್‌ಲೆಸ್ ಚಾರ್ಜಿಂಗ್ ಆಯ್ಕೆಗಳಿಂದಾಗಿ ಟೆಕ್ ವಲಯದಲ್ಲಿ ಧೂಳೆಬ್ಬಿಸಿವೆ. ಹಾಗಾದ್ರೆ ಆಕ್ಟೋಬರ್ ತಿಂಗಳಿನಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಪ್ರಮುಖ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಫೋನ್ 15 ಪ್ರೊ
ಐಫೋನ್ 15 ಪ್ರೊ ಆಕ್ಟೋಬರ್‌ನಲ್ಲಿ ಸಖತ್ ಟ್ರೆಂಡ್ ಸೃಷ್ಟಿಸಿರುವ ಪ್ರೀಮಿಯಂ ಫೋನ್ ಆಗಿದೆ. ಇದರ ಟೈಟಾನಿಯಂ ವಿನ್ಯಾಸ ಫೋನ್ ಅನ್ನು ಇನ್ನಷ್ಟು ಗಮನಸೆಳೆಯುವಂತೆ ಮಾಡಿದೆ. ಇದು 6.1 ಇಂಚಿನ ಸೂಪರ್ ರೆಟಿನಾ XDR ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಐಫೋನ್ 15 ಪ್ರೊ A17 ಪ್ರೊ ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಪ್ರತಿ ಸೆಕೆಂಡಿಗೆ 35 ಟ್ರಿಲಿಯನ್ ಕಾರ್ಯಾಚರಣೆಗಳಿಗೆ ಬೆಂಬಲಿಸುವ ಹೊಸ ಆರ್ಕಿಟೆಕ್ಚರ್‌ನೊಂದಿಗೆ ಸುಸಜ್ಜಿತವಾಗಿದೆ. ಐಫೋನ್ 15 ಪ್ರೊ 48 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಮುಖ್ಯ ಕ್ಯಾಮೆರಾವನ್ನು ಹೊಂದಿದೆ. ಇದು ಸೂಪರ್-ಹೈ-ರೆಸಲ್ಯೂಶನ್ ಫೋಟೋಗಳಿಗೆ ಬೆಂಬಲವನ್ನು ನೀಡಲಾಗಿದೆ. ಇದರೊಂದಿಗೆ 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಹಾಗೂ 12-ಮೆಗಾಪಿಕ್ಸೆಲ್ 3x ಟೆಲಿಫೋಟೋ ಕ್ಯಾಮೆರಾವನ್ನು ಸಹ ಒದಗಿಸಲಾಗಿದೆ. ಕ್ಯಾಮೆರಾದಲ್ಲಿ 15x ವರೆಗೆ ಡಿಜಿಟಲ್ ಜೂಮ್ ಆಯ್ಕೆ ನೀಡಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ. ಇನ್ನು ಈ ಫೋಲ್ಡಬಲ್ ಸ್ಮಾರ್ಟ್‌ಫೋನ್ 6.2 ಇಂಚಿನ ಕವರ್ ಡಿಸ್‌ಪ್ಲೇ ಹಾಗೂ 7.6 ಇಂಚಿನ ಇನರ್ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಹೊಸ ಫ್ಲೆಕ್ಸ್ ಹಿಂಜ್ ಅನ್ನು ಡ್ಯುಯಲ್ ರೈಲ್ ರಚನೆ ಹೊಂದಿವೆ. ಇದು ಸ್ನಾಪ್‌ಡ್ರಾಗನ್ 8 Gen 2 ಚಿಪ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕವರ್ ಡಿಸ್‌ಪ್ಲೇಯಲ್ಲಿ ಹಾಗೂ 4 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಅಂಡರ್ ಡಿಸ್ಪ್ಲೇಯಲ್ಲಿ ನೀಡಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ
ಸ್ಮಾರ್ಟ್‌ಫೋನ್ ಪ್ರಿಯರು ಅತಿ ಹೆಚ್ಚು ಇಷ್ಟಪಡುತ್ತಿರುವ ಫ್ಯಾನ್ಸಿ ಫೋನ್‌ಗಳಲ್ಲಿ ಒಂದಾಗಿದೆ. ಈ ಫೋನ್ 6.8 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 One UI 5.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ವೈಡ್ ಲೆನ್ಸ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ವೈರ್ಡ್ ಚಾರ್ಜಿಂಗ್ ಮತ್ತು ಫಾಸ್ಟ್ ವಾಯರ್‌ಲೆಸ್ ಚಾರ್ಜಿಂಗ್ 2.0 ಅನ್ನು ಬೆಂಬಲಿಸುತ್ತದೆ.
ಒನ್‌ಪ್ಲಸ್ 11 5G
ಒನ್‌ಪ್ಲಸ್ 11 5G ಸ್ಮಾರ್ಟ್‌ಫೋನ್ 6.7 ಇಂಚಿನ ಕ್ವಾಡ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 525ppi ಪಿಕ್ಸೆಲ್ ಸಾಂದ್ರತೆ, 1,000Hz ವರೆಗಿನ ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಒನ್‌ಪ್ಲಸ್ 11 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ OxygenOS 13 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 100W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








