Best Gaming Mobile Phones Under 30000 : ಗೇಮಿಂಗ್ ಸ್ಮಾರ್ಟ್‌ಫೋನ್ ಖರೀದಿಸಬೇಕೆ? ಇಲ್ಲಿವೇ ನೋಡಿ ಬೆಸ್ಟ್ ಫೋನ್‌ಗಳು!
ಇಂದಿನ ಜಮಾನದಲ್ಲಿ ಗೇಮಿಂಗ್ ಬೆಂಬಲಿಸುವ ಸ್ಮಾರ್ಟ್‌ಫೋನ್ ಯವಜನತೆಯ ಹಾಟ್‌ಫೇವರಿಟ್ ಎನಿಸಿಕೊಂಡಿವೆ. ಯುವಜನರ ಆಶಯಗಳಿಗೆ ತಕ್ಕಂತೆ ಗೇಮಿಂಗ್ ಸ್ಮಾರ್ಟ್‌ಫೋನ್ ವಿನ್ಯಾಸ ಕೂಡ ಇರಲಿದೆ. ಇದೇ ಕಾರಣಕ್ಕೆ ಗೇಮಿಂಗ್ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿವೆ. ಸದ್ಯ ಭಾರತದ ಮಾರುಕಟ್ಟೆಯಲ್ಲಿ ಕೂಡ ಗೇಮಿಂಗ್ ಬೆಂಬಲಿಸುವ ಸ್ಮಾರ್ಟ್‌ಫೋನ್ ಸಾಕಷ್ಟು ಸೌಂಡ್ ಮಾಡುತ್ತಿವೆ. ಇದರಲ್ಲಿ ಇತ್ತೀಚಿಗೆ ಬಿಡುಗಡೆಯಾದ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿರೋದು ಕೂಡ ವಿಶೇಷ.

ಹೌದು, ಮೊಬೈಲ್ ಗೇಮಿಂಗ್ ಸ್ಮಾರ್ಟ್‌ಫೋನ್‌ಗಳು ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದುಕೊಂಡಿವೆ. ಅದರಂತೆ ಫೆಬ್ರವರಿ ತಿಂಗಳಿನಲ್ಲಿಯೂ ಅನೇಕ ಸ್ಮಾರ್ಟ್‌ಫೋನ್‌ಗಳು ಅನಾವರಣಗೊಂಡಿವೆ. ಇದರಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು 30,000ರೂ. ಒಳಗೆ ಲಭ್ಯವಾಗಲಿವೆ. ಈ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಎಫ್‌ಪಿಎಸ್‌ನಲ್ಲಿ ನ್ಯೂ ಗೇಮ್‌ಗಳನ್ನು ಕೂಡ ಪ್ಲೇ ಮಾಡಲು ಅವಕಾಶ ನೀಡಲಿದೆ. ಹಾಗಾದ್ರೆ ಭಾರತದ ಮಾರುಕಟ್ಟೆಯಲ್ಲಿ ನೀವು ಮಿಡ್‌ರೇಂಜ್‌ನಲ್ಲಿ ಖರೀದಿಸಬಹುದಾದ ಬೆಸ್ಟ್ ಗೇಮಿಂಗ್ ಸ್ಮಾರ್ಟ್‌ಫೋನ್‌ಗಳ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.
ಐಕ್ಯೂ ನಿಯೋ 7
ಐಕ್ಯೂ ನಿಯೋ 7 ಸ್ಮಾರ್ಟ್‌ಫೋನ್ ಫೆಬ್ರವರಿ ತಿಂಗಳಿನಲ್ಲಿ ನೀವು ಖರೀದಿಸಬಹುದಾದ ಗೇಮಿಂಗ್ ಬೆಂಬಲಿತ ಬೆಸ್ಟ್ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 6.78-ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್ ಹೊಂದಿದೆ. ಜೊತೆಗೆ 120W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ. ಇದರ ಆರಂಭಿಕ ಬೆಲೆ 29,999ರೂ. ಆಗಿದೆ.

ರೆಡ್ಮಿ K50i
ರೆಡ್ಮಿ K50i ಸ್ಮಾರ್ಟ್‌ಫೋನ್ ಕೂಡ ಗೇಮಿಂಗ್ ಬೆಂಬಲಿಸುವ ಬೆಸ್ಟ್ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದೆನಿಸಿದೆ. ಈ ಸ್ಮಾರ್ಟ್‌ಫೋನ್ ಗೇಮಿಂಗ್‌ಗೆ ಪೂರಕವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 8100 ಚಿಪ್‌ಸೆಟ್ ಅನ್ನು ಒಳಗೊಂಡಿದೆ. ಇದು ಗೇಮ್ ಮತ್ತು ಅಪ್ಲಿಕೇಶನ್ ಲೋಡಿಂಗ್ ಸಮಯವನ್ನು ಕಡಿಮೆ ಮಾಡಲು ಸಹಾಯ ಮಾಡಲಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್ ಪಡೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಬೆಲೆ 24,698ರೂ.ಗಳಿಂದ ಪ್ರಾರಂಭವಾಗಲಿದೆ.
ಪೊಕೊ F4
ಪೊಕೊ F4 ಸ್ಮಾರ್ಟ್‌ಫೋನ್ ಕೂಡ ಗೇಮಿಂಗ್ ಬಂಬಲಿತ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 870 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 25,999ರೂ.ಗಳಿಂದ ಪ್ರಾರಂಭವಾಗಲಿದೆ.

ರಿಯಲ್‌ಮಿ GT ನಿಯೋ 3T
ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿರಲಿದೆ. ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ 26,499ರೂ.ಗಳಿಂದ ಪ್ರಾರಂಭವಾಗಲಿದೆ.
ನಥಿಂಗ್ ಫೋನ್ (1)
ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ 8GB RAM ಮತ್ತು 128GB ಸ್ಟೋರೇಜ್ ಆವೃತ್ತಿಯಲ್ಲಿ ಕೂಡ ಲಭ್ಯವಾಗಲಿದೆ. ಈ ಆವೃತ್ತಿಯ ಬೆಲೆ 27,999ರೂ. ಆಗಿದೆ.


Click it and Unblock the Notifications








