ಈ ವರ್ಷ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡ ಫೋನ್‌ಗಳು!..ನಿಮ್ಮ ಬಳಿ ಇದೆಯಾ ಈ ಫೋನ್‌?

|

ಸದ್ಯ ಫೋನ್‌ ಇಲ್ಲದೇ ಜನರನ್ನು ಊಹಿಸುವುದು ಕಷ್ಟ ಸಾಧ್ಯ ಎನಿಸುತ್ತದೆ. ಏಕೆಂದರೇ ಸ್ಮಾರ್ಟ್‌ಫೋನ್ ಎಲ್ಲರಿಗೂ ಅಗತ್ಯ ಡಿವೈಸ್ ಆಗಿ ಕಾಣಿಸಿಕೊಂಡಿದೆ. ಮೊಬೈಲ್‌ ಕಂಪನಿಗಳು ಆಕರ್ಷಕ ಫೀಚರ್ಸ್‌ಗಳೊಂದಿಗೆ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಲೇ ಮುನ್ನಡೆದಿವೆ. ಅದಾಗ್ಯೂ ಬಿಡುಗಡೆ ಆಗುವ ಪ್ರತಿಯೊಂದು ಫೋನ್ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುವುದಿಲ್ಲ. ಕೆಲವೇ ಕೆಲವು ಸ್ಮಾರ್ಟ್‌ಫೋನ್‌ಗಳು ಕೆಲವೊಂದು ಕಾರಣಗಳಿಗೆ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಳ್ಳುತ್ತವೆ.

ಮಾರುಕಟ್ಟೆಯಲ್ಲಿ

ಹೌದು, ದೇಶಿಯ ಮೊಬೈಲ್‌ ಮಾರುಕಟ್ಟೆಯಲ್ಲಿ ಪ್ರಸಕ್ತ (2022) ವರ್ಷ ಹಲವು ಸ್ಮಾರ್ಟ್‌ಫೋನ್‌ಗಳು ಲಗ್ಗೆ ಇಟ್ಟಿದ್ದು, ಫೋನ್‌ ಪ್ರಿಯರ ಗಮನ ಸೆಳೆದಿವೆ. ಆದ್ರೆ ಆ ಪೈಕಿ ಸುಮಾರು 15,000ರೂ. ಒಳಗೆ ಕೆಲವು ಫೋನ್‌ಗಳು ಭಾರೀ ಸದ್ದು ಮಾಡಿವೆ. ಸ್ಯಾಮ್‌ಸಂಗ್, ಪೊಕೊ, ರಿಯಲ್‌ಮಿ, ಐಕ್ಯೂ ಹಾಗೂ ಮೊಟೊ ಸಂಸ್ಥೆಯ ಆಕರ್ಷಕ ಫೀಚರ್ಸ್‌ ಒಳಗೊಂಡ ಬಜೆಟ್‌ ಸ್ನೇಹಿ ದರದ ಫೋನ್‌ಗಳು ಈ ವರ್ಷ ಸಿಕ್ಕಾಪಟ್ಟೆ ಸದ್ದು ಮಾಡಿವೆ. ಹಾಗಾದರೆ ಈ ವರ್ಷ ಭಾರೀ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡ 5 ಬಜೆಟ್‌ ದರದ ಫೋನ್‌ಗಳ ಲಿಸ್ಟ್‌ ಒಮ್ಮೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಫೋನ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇನ್ನು ಈ ಫೋನ್‌ ಎಕ್ಸಿನೋಸ್‌ 850 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್‌ 4GB RAM ಮತ್ತು 64GB ಹಾಗೂ 6GB RAM ಮತ್ತು 128GB ಸ್ಟೋರೇಜ್‌ ಆಯ್ಕೆ ಪಡೆದಿದೆ. ಹಾಗೆಯೇ ಟ್ರಿಪಲ್‌ ಕ್ಯಾಮೆರಾ ಜೊತೆಗೆ 6000mAh ಬ್ಯಾಟರಿ ಆಯ್ಕೆ ಪಡೆದಿದೆ. ಈ ಫೋನಿನಲ್ಲಿ 5G ವೇರಿಯಂಟ್‌ ಆಯ್ಕೆ ಸಹ ಇದೆ.

ಐಕ್ಯೂ Z6 ಲೈಟ್‌ 5G ಫೋನ್

ಐಕ್ಯೂ Z6 ಲೈಟ್‌ 5G ಫೋನ್

ಐಕ್ಯೂ Z6 ಲೈಟ್‌ 5G ಫೋನ್ 6.68 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಡಿಸ್‌ಪ್ಲೇಯು 120Hz ರಿಫ್ರೆಶ್‌ ರೇಟ್‌ ಪಡೆದಿದೆ. ಇದರ ಜೊತೆಗೆ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 4 ಜೆನ್‌ 1 ಪ್ರೊಸೆಸರ್ ಪಡೆದಿದ್ದು, ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ರಚನೆ ಹೊಂದಿದ್ದು, ಇದಲ್ಲದೇ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಹೊಂದಿದೆ.

ಮೊಟೊ G42 ಸ್ಮಾರ್ಟ್‌ಫೋನ್‌

ಮೊಟೊ G42 ಸ್ಮಾರ್ಟ್‌ಫೋನ್‌

ಮೊಟೊ G42 ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದರೊಂದಿಗೆ ಈ ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾಯರ್ಯನಿರ್ವಹಿಸಲಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ಟರ್ಬೊಪವರ್‌ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಪೊಕೊ M4 5G ಸ್ಮಾರ್ಟ್‌ಫೋನ್‌

ಪೊಕೊ M4 5G ಸ್ಮಾರ್ಟ್‌ಫೋನ್‌

ಪೊಕೊ M4 5G ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು MIUI 13 ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲವನ್ನು ಪಡೆದಿದೆ. ಜೊತೆಗೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದಲ್ಲದೇ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಕ್ವಿಕ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

Best Mobiles in India

English summary
Best in 2022: Trending Mobiles under Rs 15,000 this year.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X