Home
ಸುದ್ದಿಜಾಲ

ಹೊಸ ಐಫೋನ್‌ 15 ಖರೀದಿಸಲು ಇಷ್ಟ ಇಲ್ಲವೇ?.. ಹಾಗಿದ್ರೆ, ಈ ಫೋನ್‌ ಖರೀದಿಸಿ!

ಟೆಕ್ ದೈತ್ಯ ಸಂಸ್ಥೆ ಆಪಲ್‌ ಇತ್ತೀಚಿಗೆ ತನ್ನ ಬಹುನಿರೀಕ್ಷಿತ ಐಫೋನ್ 15 ಸರಣಿಯನ್ನು ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಹೊಸ ಅಲೆ ಎಬ್ಬಿಸಿದೆ. ಅನೇಕ ಐಫೋನ್‌ ಪ್ರಿಯರು ಈ ಹೊಸ ಐಫೋನ್‌ ಖರೀದಿಸಲು ಮುಗಿಬಿದ್ದಿದ್ದಾರೆ. ಅದಾಗ್ಯೂ, ಹೊಸ ಐಫೋನ್‌ 15 ಖರೀದಿಸಲು ಇಷ್ಟ ಇಲ್ಲದ ಗ್ರಾಹಕರು ಇದ್ದಾರೆ. ಅಂತಹವರಿಗೆ ಇಲ್ಲಿದೆ ಪರ್ಯಾಯ ಆಯ್ಕೆ.

ಹೌದು, ಐಫೋನ್‌ 15 ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವುದಂತೂ ಸುಳ್ಳಲ್ಲ. ಆದರೆ ಮೊಬೈಲ್‌ಗಾಗಿ ಹೆಚ್ಚು ಹಣ ಖರ್ಚು ಮಾಡುವ ಇಚ್ಛೆ ಇದ್ದರೂ, ಐಫೋನ್‌ 15 ಖರೀದಿಸಲು ಅವರಿಗೆ ಮನಸ್ಸಿರಲ್ಲ. ಹೀಗೆ ನಿಮಗೂ ಹೊಸ ಐಫೋನ್‌ 15 ಖರೀದಿಸಲು ಇಷ್ಟ ಇಲ್ಲದಿದ್ದರೆ, ಈ ಲೇಖನದಲ್ಲಿ ತಿಳಿಸಲಾದ ಕೆಲವು ಅತ್ಯುತ್ತಮ ಪರ್ಯಾಯ ಫೋನ್‌ಗಳ ಬಗ್ಗೆ ನೋಡಿ.

ಹೊಸ ಐಫೋನ್‌ 15 ಖರೀದಿಸಲು ಇಷ್ಟ ಇಲ್ಲವೇ?.. ಹಾಗಿದ್ರೆ, ಈ ಫೋನ್‌ ಖರೀದಿಸಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಮೊಬೈಲ್‌ ಫೋನ್‌ 6.1 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡೈನಾಮಿಕ್‌ ಅಮೋಲೆಡ್‌ 2X ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 48Hz ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 13 ಓಎಸ್‌ ನಲ್ಲಿ ಕೆಲಸ ನಿರ್ವಹಿಸಲಿದೆ.

ಹಾಗೆಯೇ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಅಪ್‌ಗ್ರೇಡ್‌ ಕ್ಯಾಮೆರಾ ಅಪ್ಲಿಕೇಶನ್ ಅನ್ನು ಹೊಂದಿದ್ದು, ಇದರ ಮೂಲಕ ಸೆಕೆಂಡಿಗೆ 30 ಫ್ರೇಮ್‌ಗಳಲ್ಲಿ 8K ವೀಡಿಯೊ ರೆಕಾರ್ಡಿಂಗ್ ಮಾಡಬಹುದಾಗಿದೆ.

ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್‌
ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಕ್ವಾಡ್ ಹೆಚ್‌ಡಿ ಡಿಸ್‌ಪ್ಲೇ ಪಡೆದುಕೊಂಡಿದ್ದು. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಬಲದಲ್ಲಿ ಕೆಲಸ ಮಾಡಲಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಅಲ್ಲದೇ 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ಹಾಗೆಯೇ ಗೂಗಲ್‌ ಪಿಕ್ಸೆಲ್‌ 7 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಮಡಿದ್ದು, 30W ಫಾಸ್ಟ್‌ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಸಪೋರ್ಟ್‌ ಕೂಡಾ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಒಳಗೊಂಡಿದೆ.

ಒನ್‌ಪ್ಲಸ್‌ 11 5G ಸ್ಮಾರ್ಟ್‌ಫೋನ್‌
ಒನ್‌ಪ್ಲಸ್‌ 11 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಕ್ವಾಡ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಈ ಡಿಸ್‌ಪ್ಲೇ 1,440x3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಡಿಸ್‌ಪ್ಲೇ 10 ಬಿಟ್ LTPO 3.0 ಅಮೋಲೆಡ್‌ ಸ್ಕ್ರೀನ್‌ ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಅಲ್ಲದೇ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ಬಲ ಹೊಂದಿದೆ.

ಇದರೊಂದಿಗೆ ಒನ್‌ಪ್ಲಸ್‌ 11 5G ಫೋನ್‌ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ನೊಂದಿಗೆ ಕೆಲಸ ಮಾಡಲಿದ್ದು, 16GB RAM + 256GB ಆಂತರೀಕ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದ್ದು, 100W SuperVOOC ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
best alternative iPhone 15 you can buy in India. all details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+