Home
ಸುದ್ದಿಜಾಲ

ಜಿಯೋ ಚಂದಾದಾರರೇ, ನಿಮಗೆ ಅಧಿಕ ಡೇಟಾ ಬೇಕಿದ್ರೆ, ಈ ಪ್ಲ್ಯಾನ್‌ ಬೆಸ್ಟ್!

ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಟೆಲಿಕಾಂಗಳು ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಆ ಪೈಕಿ ಜಿಯೋ ಟೆಲಿಕಾಂ ಕೆಲವು ಆಕರ್ಷಕ ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸಂಸ್ಥೆಯು ಬಹುತೇಕ ಯೋಜನೆಗಳು ಅಧಿಕ ಡೇಟಾ ಸೌಲಭ್ಯ ಹಾಗೂ ಆಕರ್ಷಕ ವ್ಯಾಲಿಡಿಟಿ ಸೌಲಭ್ಯವನ್ನು ಹೊಂದಿವೆ.

ಹೌದು, ಪ್ರತಿದಿನ ಡೇಟಾ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿ ಪ್ರಯೋಜನದ ಜಿಯೋ ಪ್ರಿಪೇಯ್ಡ್‌ ಪ್ಲ್ಯಾನ್‌ಗಳಿಗೆ ಡಿಮ್ಯಾಂಡ್‌ ಹೆಚ್ಚು. ಈ ನಿಟ್ಟಿನಲ್ಲಿ ಜಿಯೋ ಪ್ರತಿದಿನ 1GB, 1.5GB, 2GB ಮತ್ತು 3GB ಡೇಟಾ ಪ್ರಯೋಜನಗಳ ಪ್ಲ್ಯಾನ್‌ಗಳ ಆಯ್ಕೆ ಹೊಂದಿವೆ. ಅವುಗಳಲ್ಲಿ ಬಹುತೇಕ ಚಂದಾದಾರರಿಗೆ ಪ್ರತಿದಿನ 2GB ಡೇಟಾ ಸೂಕ್ತ ಎನಿಸುತ್ತದೆ. ಹಾಗಾದರೇ ಪ್ರತಿದಿನ 2GB ಡೇಟಾ ಪ್ರಯೋಜನ ಒಳಗೊಂಡ ಜಿಯೋ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಜಿಯೋ ಚಂದಾದಾರರೇ, ನಿಮಗೆ ಅಧಿಕ ಡೇಟಾ ಬೇಕಿದ್ರೆ, ಈ ಪ್ಲ್ಯಾನ್‌ ಬೆಸ್ಟ್!

ಜಿಯೋದ 299ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು : ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್‌ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್‌ ಸಹ ಲಭ್ಯ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು : ಜಿಯೋ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ.

ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 168 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಜಿಯೋ ಚಂದಾದಾರರೇ, ನಿಮಗೆ ಅಧಿಕ ಡೇಟಾ ಬೇಕಿದ್ರೆ, ಈ ಪ್ಲ್ಯಾನ್‌ ಬೆಸ್ಟ್!

ಜಿಯೋದ 749ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು : ಜಿಯೋ ಟೆಲಿಕಾಂನ 749ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ.

ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 180 GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಜಿಯೋ ಆಪ್‌ಗಳ ಸೌಲಭ್ಯ ದೊರೆಯುತ್ತದೆ.

ಜಿಯೋ ಚಂದಾದಾರರೇ, ನಿಮಗೆ ಅಧಿಕ ಡೇಟಾ ಬೇಕಿದ್ರೆ, ಈ ಪ್ಲ್ಯಾನ್‌ ಬೆಸ್ಟ್!

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು : ಜಿಯೋ ಟೆಲಿಕಾಂನ 1066ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ.

ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173 GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

Best Mobiles in India

English summary
These Jio Prepaid Plan offers Daily 2GB Data: details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+