ಅಮೆಜಾನ್‌ನಲ್ಲಿ 30,000ರೂ ಒಳಗೆ ಲಭ್ಯವಾಗುವ ಅತ್ಯುತ್ತಮ ಲ್ಯಾಪ್‌ಟಾಪ್‌ಗಳು!

|

ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣ ಎನಿಸಿಕೊಂಡಿದೆ. ತನ್ನ ಆನ್‌ಲೈನ್‌ ಗ್ರಾಹಕರಿಗಾಗಿ ವಿಶೇಷ ಸೇಲ್‌, ರಿಯಾಯಿತಿ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ಇದೀಗ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ ಮೂಲಕ ಮತ್ತೊಮ್ಮೆ ಬಂದಿದೆ. ಇನ್ನು ಈ ಬಾರಿಯ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ ಸೇರಿದಂತೆ ಹಲವು ಗ್ಯಾಜೆಟ್ಸ್‌ಗಳ ಮೇಲೆ ಬಿಗ್‌ ಡಿಸ್ಕೌಂಟ್‌ ಅನ್ನು ಘೋಷಿಸಲಾಗಿದೆ.

ಅಮೆಜಾನ್‌

ಹೌದು, ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ನಲ್ಲಿ ಲ್ಯಾಪ್‌ಟಾಪ್‌ಗಳಿಗೆ ವಿಶೇಷ ರಿಯಾಯಿತಿ ಘೋಷಿಸಲಾಗಿದೆ. ಅಮೆಜಾನ್‌ ಪ್ಲಾಟ್‌ಫಾರ್ಮ್‌ನಲ್ಲಿ ಹಲವು ಆಕರ್ಷಕ ಲ್ಯಾಪ್‌ಟಾಪ್‌ಗಳು ರಿಯಾಯಿತಿ ದರದಲ್ಲಿ ದೊರೆಯಲಿವೆ. ಇನ್ನು ಅಮೆಜಾನ್‌ನಲ್ಲಿ 30,000 ಕ್ಕಿಂತ ಕಡಿಮೆ ಬೆಲೆಗೆ ಲ್ಯಾಪ್‌ಟಾಪ್‌ ಖರೀದಿಸಿಲು ಬಯಸಿದರೆ ಹಲವು ಆಯ್ಕೆಯ ಲ್ಯಾಪ್‌ಟಾಪ್‌ ಲಬ್ಯವಿದೆ. ಹಾಗಾದರೆ ಅಮೆಜಾನ್‌ನಲ್ಲಿ 30,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಲ್ಯಾಪ್‌ಟಾಪ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹೆಚ್‌ಪಿ ಕ್ರೋಮ್‌ಬುಕ್‌ 14 ಇಂಚು

ಹೆಚ್‌ಪಿ ಕ್ರೋಮ್‌ಬುಕ್‌ 14 ಇಂಚು

30,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಲ್ಯಾಪ್‌ಟಾಪ್‌ಗಳಲ್ಲಿ ಹೆಚ್‌ಪಿ ಕ್ರೋಮ್‌ಬುಕ್‌ 14 ಇಂಚಿನ ಲ್ಯಾಪ್‌ಟಾಪ್‌ ಕೂಡ ಅತ್ಯುತ್ತಮ ಆಯ್ಕೆಯಾಗಿದೆ. ಇನ್ನು ಈ ಲ್ಯಾಪ್‌ಟಾಪ್‌ ಅಮೆಜಾನ್‌ನಲ್ಲಿ 27,990ರೂ ಗಳಿಗೆ ಲಭ್ಯವಾಗಲಿದೆ. ಈ ಲ್ಯಾಪ್ಟಾಪ್ 14 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟಚ್ ಸ್ಕ್ರೀನ್ ಡಿಸ್ಪ್ಲೇ ಹೊಂದಿರುವ ತೆಳುವಾದ ಮತ್ತು ಹಗುರವಾದ ಲ್ಯಾಪ್ ಟಾಪ್ ಆಗಿದೆ. ಇನ್ನು ಈ ಲ್ಯಾಪ್‌ಟಾಪ್‌ ಇಂಟೆಲ್ ಸೆಲೆರಾನ್ ಎನ್ 4020 ಪ್ರೊಸೆಸರ್ ಹೊಂದಿದೆ. ಈ ಲ್ಯಾಪ್‌ಟಾಪ್‌ ನಲ್ಲಿ ಮೈಕ್ರೊ ಎಸ್ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ವಿಸ್ತರಿಸಬಹುದಾದ 64ಜಿಬಿ ಇಂಟರ್‌ ಸ್ಟೋರೇಜ್‌ ಹೊಂದಿದೆ.

ಲೆನೊವೊ V15 AMD 15.6 ಇಂಚು

ಲೆನೊವೊ V15 AMD 15.6 ಇಂಚು

ಲೆನೊವೊ V15 ಲ್ಯಾಪ್‌ಟಾಪ್‌ 1920 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 15.6 ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಲ್ಯಾಪ್‌ಟಾಪ್‌ ಎಎಮ್‌ಡಿ ಅಥ್ಲಾನ್ ಗೋಲ್ಡ್ 3150 ಯು ಪ್ರೊಸೆಸರ್ ಹೊಂದಿದೆ. ಜೊತೆಗೆ ಈ ಲ್ಯಾಪ್‌ಟಾಪ್‌ 4GB RAM ಮತ್ತು 1TB HDD ಸ್ಟೋರೇಜ್‌ ಅನ್ನು ಹೊಂದಿದೆ. ಇದು 5.5 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಸದ್ಯ ಅಮೆಜಾನ್‌ನಲ್ಲಿ ಈ ಲ್ಯಾಪ್‌ಟಾಪ್ 29,990ರೂ ಗಳಿಗೆ ಲಭ್ಯವಿದೆ.

ಆಸುಸ್ ಕ್ರೋಮ್ ಬುಕ್ ಫ್ಲಿಪ್

ಆಸುಸ್ ಕ್ರೋಮ್ ಬುಕ್ ಫ್ಲಿಪ್

ಆಸುಸ್ ಕ್ರೋಮ್ ಬುಕ್ ಫ್ಲಿಪ್ ಲ್ಯಾಪ್‌ಟಾಪ್‌ ಕೂಡ ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ ಲ್ಯಾಪ್‌ಟಾಪ್‌ ಆಗಿದೆ. ಇದು ಸೆಲೆರಾನ್ ಡ್ಯುಯಲ್-ಕೋರ್ ಪ್ರೊಸೆಸರ್‌ ಹೊಂದಿದೆ. ಇನ್ನು ಈ ಲ್ಯಾಪ್‌ಟಾಪ್‌ 11.6 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು 4GB RAM ಮತ್ತು 64GB ಇಂಟರ್ನಲ್ ಸ್ಟೋರೇಜ್ ಹೊಂದಿದೆ. ಜೊತೆಗೆ ಮೈಕ್ರೋ SD ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದು ಅಮೆಜಾನ್‌ನಲ್ಲಿ 24,999ರೂ ಬೆಲೆಯಲ್ಲಿ ಲಭ್ಯವಿದೆ.

ಲೆನೊವೊ ಐಡಿಯಾಪ್ಯಾಡ್ ಸ್ಲಿಮ್ 3

ಲೆನೊವೊ ಐಡಿಯಾಪ್ಯಾಡ್ ಸ್ಲಿಮ್ 3

ಲೆನೊವೊ ಐಡಿಯಾಪ್ಯಾಡ್ ಸ್ಲಿಮ್ 3 1366x768 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 15.6-ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇಂಟೆಲ್ ಸೆಲೆರಾನ್ N4020 ಪ್ರೊಸೆಸರ್ ಅನ್ನು ಬಳಸುತ್ತದೆ. ಇನ್ನು ಈ ಲ್ಯಾಪ್‌ಟಾಪ್‌ 4GB RAM ಮತ್ತು 256GB SSD ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಜೊತೆಗೆ ಇದು 35Wh ಬ್ಯಾಟರಿಯನ್ನು ಹೊಂದಿದ್ದು, ಒಂದು ಬಾರಿ ಚಾರ್ಜ್ ಮಾಡಿದರೆ 8 ಗಂಟೆಗಳವರೆಗೆ ಬಾಳಿಕೆ ಬರುತ್ತದೆ. ಅಮೆಜಾನ್‌ನಲ್ಲಿ ಈ ಲ್ಯಾಪ್‌ಟಾಪ್‌ 29,990ರೂ. ಬೆಲೆಯಲ್ಲಿ ಲಭ್ಯವಿದೆ.

Most Read Articles
Best Mobiles in India

English summary
here is a curated list of the best laptops available under Rs 30,000 on Amazon.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X