Home
ಸುದ್ದಿಜಾಲ

ಈ ತಿಂಗಳಲ್ಲಿ ನೀವು ಖರೀದಿಸಬಹುದಾದ 40000ರೂ. ಒಳಗಿನ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

2022ನೇ ವರ್ಷ ಆರಂಭವಾಗ್ತಿದ್ದ ಹಾಗೇ ಎಲ್ಲಾ ವಲಯದಲ್ಲೂ ಸಾಕಷ್ಟು ನಿರೀಕ್ಷೆಗಳು ಗರಿಗೆದರಿವೆ. ಇದಕ್ಕೆ ಸ್ಮಾರ್ಟ್‌ಫೋನ್‌ ಮಾರುಕಟ್ಟೆ ಕೂಡ ಹೊರತಾಗಿಲ್ಲ. ಹೊಸ ವರ್ಷದ ಸಮಯದಲ್ಲಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆ ಸಾಕಷ್ಟು ಭರವಸೆಯನ್ನು ಮೂಡಿಸಿದೆ. ಸದ್ಯ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳು ಖರೀದಿಗೆ ಲಭ್ಯವಿದೆ. ಅಲ್ಲದೆ ಅನೇಕ ಹೊಸ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಗೆ ದಿನಾಂಕವನ್ನು ನಿಗದಿಪಡಿಸಿವೆ. ಇನ್ನು ಇದೇ ಸಂದರ್ಭದಲ್ಲಿ ಶಿಯೋಮಿ, ಒನ್‌ಪ್ಲಸ್‌, ಒಪ್ಪೋ ಕಂಪೆನಿಯ ಹಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹಲವು ಆಫರ್‌ಗಳನ್ನು ಪಡೆದುಕೊಂಡಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಖರೀದಿಗೆ ಲಭ್ಯವಿದೆ. ಸದ್ಯ ಹೊಸ ವರ್ಷದ ಈ ಸಂದರ್ಭದಲ್ಲಿ 40,000ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವವರಿಗೆ ಹಲವು ಉತ್ತಮ ಆಯ್ಕೆಗಳನ್ನು ಕಾಣಬಹುದಾಗಿದೆ. 40,000ರೂ.ಗಳ ಬೆಲೆಯಲ್ಲಿ ಶೀಯೋಮಿ, ಒಪ್ಪೋ, ಒನ್‌ಪ್ಲಸ್‌ ಕಂಪೆನಿಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದಾಗಿದೆ. ಹಾಗಾದ್ರೆ ಭಾರತದಲ್ಲಿ ನೀವು 2022ರಲ್ಲಿ 40,000ರೂ.ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

iQOO 7 ಲೆಜೆಂಡ್

iQOO 7 ಲೆಜೆಂಡ್

iQOO 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಅನ್ನು ನೀವು 39,990ರೂ.ಗಳಿಗೆ ಖರೀದಿಸಬಹುದಾಗಿದೆ. ಹೊಸ ವರ್ಷದ ಈ ಸಮಯದಲ್ಲಿ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಇದು ಕೂಡ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.62 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೇಶ್‌ ರೇಟ್‌ ಹೊಂದಿದ್ದು, 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಒನ್‌ಪ್ಲಸ್‌ 9R

ಒನ್‌ಪ್ಲಸ್‌ 9R

ಒನ್‌ಪ್ಲಸ್‌ 9R ಸ್ಮಾರ್ಟ್‌ಫೋನ್‌ ಪ್ರಸ್ತುತ 39,990ರೂ.ಗಳಿಗೆ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.55-ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸುತ್ತದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಆಪರೇಟಿಂಗ್‌ ಸಿಸ್ಟಮ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಜೊತೆಗೆ ಈ ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಮಿ 11X ಪ್ರೊ

ಮಿ 11X ಪ್ರೊ

ಮಿ 11X ಪ್ರೊ ಸ್ಮಾರ್ಟ್‌ಫೋನ್‌ ಹೊಸ ವರ್ಷದ ಪ್ರಯುಕ್ತ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಪ್ರಸ್ತುತ 36,999ರೂ.ಗೆ ಲಭ್ಯವಿದೆ. ಇದು 6.67-ಇಂಚಿನ ಫುಲ್‌ ಹೆಚ್‌ಡಿ+ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 33W ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 4520 mAh ಬ್ಯಾಟರಿಯನ್ನು ಒಳಗೊಂಡಿದೆ.

ಒಪ್ಪೋ ರೆನೊ 6 ಪ್ರೊ

ಒಪ್ಪೋ ರೆನೊ 6 ಪ್ರೊ

ಒಪ್ಪೋ ರೆನೋ 6 ಪ್ರೊ 5G ಸ್ಮಾರ್ಟ್‌ಫೋನ್‌ 6.55-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ ಓಎಸ್ 11.3 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಸಂಗ್ರಹದೊಂದಿಗೆ ಜೋಡಿಸಲ್ಪಟ್ಟಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಸದ್ಯ ಈ ಸ್ಮಾರ್ಟ್‌ಫೋನ್‌ 39,990ರೂ.ಗಳಿಗೆ ಲಭ್ಯವಾಗಲಿದೆ.

Best Mobiles in India

English summary
most of these smartphones, under Rs 40,000 offer users some great features.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+