Home
ಸುದ್ದಿಜಾಲ

ಭಾರತದಲ್ಲಿ 20,000 ರೂ ಒಳಗೆ ನೀವು ಖರೀದಿಸಬಹುದಾದ ಟಾಪ್‌ 5 ಸ್ಮಾರ್ಟ್‌ಫೋನ್‌ಗಳು!

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ವಲಯದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿವೆ. ಸ್ಮಾರ್ಟ್‌ಫೋನ್‌ ಕಂಪೆನಿಗಳು ಹೊಸ ಹೊಸ ಪ್ರಯೋಗಗಳನ್ನ ನಡೆಸುತ್ತಲೇ ಬಂದಿವೆ. ಡಿಸ್‌ಪ್ಲೇ, ಕ್ಯಾಮೆರಾ ವಿನ್ಯಾಸ, ಬ್ಯಾಟರಿ ಸಾಮರ್ಥ್ಯದ ವಿಚಾರದಲ್ಲಿ ಸಾಕಷ್ಟು ಹೊಸ ಪ್ರಯತ್ನಗಳನ್ನ ನಡೆಸುತ್ತಲೇ ಬಂದಿವೆ. ಅಷ್ಟೇ ಅಲ್ಲ ಸ್ಮಾರ್ಟ್‌ಫೋನ್‌ ಪ್ರಿಯರನ್ನ ಸೆಳೆಯುವುದಕ್ಕೆ ಬೆಲೆ ವಿಚಾರದಲ್ಲೂ ಸಾಕಷ್ಟು ಪೈಪೋಟಿಯ್ನ ನಡೆಸುತ್ತಲೇ ಬಂದಿವೆ. ಸದ್ಯ ಮಾರುಕಟ್ಟೆಯಲ್ಲಿ ಬಜೆಟ್‌ ಬೆಲೆಯಿಂದ ಹಿಡಿದು ಹೈ ಎಂಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳು ಕೂಡ ಲಭ್ಯವಿವೆ. ಇದೇ ಕಾರಣಕ್ಕೆ ಯಾವ ಬೆಲೆಯ ಸ್ಮಾರ್ಟ್‌ಫೋನ್‌ಗಳ ಖರೀದಿಸುವುದು ಅನ್ನೊ ಗೊಂದಲ ಇದ್ದೆ ಇರುತ್ತೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವೈವಿಧ್ಯಮಯ ಬೆಲೆಯನ್ನ ಒಳಗೊಂಡ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಅದರಲ್ಲೂ ಆಕರ್ಷಕ ಡಿಸ್‌ಪ್ಲೇ ವಿನ್ಯಾಸ, ಕ್ಯಾಮೆರಾ ಫೀಚರ್ಸ್‌, ಅತ್ಯುತ್ತಮ ಪ್ರೊಸೆಸರ್‌ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳನ್ನ ನಾವಿಂದು ಮಾರುಕಟ್ಟೆಯಲ್ಲಿ ಕಾಣಬಹುದಾಗಿದೆ. ಸದ್ಯ ಮಾರುಕಟ್ಟೆಯಲ್ಲಿ 20,000 ರೂ ಒಳಗೆ ಲಭ್ಯವಾಗುವ ಐದು ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ 7 ಪ್ರೊ

ರಿಯಲ್‌ಮಿ 7 ಪ್ರೊ

ರಿಯಲ್‌ಮಿ 7 ಪ್ರೊ ಸ್ಮಾರ್ಟ್‌ಫೋನ್‌ ಪ್ರೀಮಿಯಂ ಮಾದರಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.40 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾನ್‌ 720G SoC ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೇಯೇ 8GB RAM + 128GB ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೆ ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇನ್ನು 4,500mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 65W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಸದ್ಯ ಮಾರುಕಟ್ಟೆಯಲ್ಲಿ ಇದರ ಬೆಲೆ 19,999.ರೂ,ಆಗಿದೆ.

ರೆಡ್ಮಿ K20

ರೆಡ್ಮಿ K20

ರೆಡ್ಮಿ K20 ಸ್ಮಾರ್ಟ್‌ಫೋನ್‌ 1080 X 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.39 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 730 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಅಲ್ಲದೆ ರೆಡ್ಮಿ K20 ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 4000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇ-ಕಾಮರ್ಸ್‌ ತಾಣ ಅಮೆಜಾನ್‌ನಲ್ಲಿ 19,784 ರೂ,ಬೆಲೆಯನ್ನು ಹೊಂದಿದೆ.

ಪೊಕೊ X2

ಪೊಕೊ X2

ಶಿಯೋಮಿಯಿಂದ ಸ್ವತಂತ್ರಗೊಂಡ ನಂತರ ಪೊಕೊ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಸೌಂಡ್‌ ಮಾಡುತ್ತಿದೆ. ಇದರಲ್ಲಿ ಪೊಕೊ X2 ಸ್ಮಾರ್ಟ್‌ಫೋನ್‌ ಕೂಡ ಒಂದು. ಇನ್ನು ಪೊಕೊ X2 ಸ್ಮಾರ್ಟ್‌ಫೋನ್‌ 6.67 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಅಲ್ಲದೆ ಡಿಸ್‌ಪ್ಲೇಯ ರಚನೆ ಅನುಪಾತ 20:9 ಹೊಂದಿದೆ. ಇದಲ್ಲದೆ ಪೊಕೊ X2 ಮುಂಭಾಗದಲ್ಲಿ ಡ್ಯುಯಲ್-ಕ್ಯಾಮೆರಾ ಪಂಚ್-ಹೋಲ್ ಮತ್ತು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಇದರ ಬೇಸ್ ಮಾಡೆಲ್‌ 6GB RAM + 64GB ರೂಪಾಂತರವು ಈಗ 17,499 ರೂ ಬೆಲೆಯಲ್ಲಿ ಲಭ್ಯವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M31

ಸ್ಯಾಮ್‌ಸಂಗ್ ಗ್ಯಾಲಕ್ಸಿ M31

ಸ್ಯಾಮ್‌ಸಂಗ್ ಗ್ಯಾಲಕ್ಸಿ ತನ್ನ M ಸರಣಿಯಲ್ಲಿ ಪರಿಚಯಿಸಿರುವ ಗ್ಯಾಲಕ್ಸಿ M31 ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್ ಶ್ರೇಣಿಯಲ್ಲಿ ಉತ್ತಮ ಆಯ್ಕೆಯಾಗಿದೆ. ಗ್ಯಾಲಕ್ಸಿ M31 6.4-ಇಂಚಿನ ಫುಲ್‌ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಎಕ್ಸಿನೋಸ್‌ 9611 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6GB RAM ಮತ್ತು 64GB ಮತ್ತು 128GB ವೇರಿಯೆಂಟ್‌ ಆಯ್ಕೆಯ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.ಜೊತೆಗೆ ಇದು 6,000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಮೂಲ ಮಾದರಿಗೆ 16,499 ರೂ. ಹೆಚ್ಚಿನ ಮಾದರಿಯ ಬೆಲೆ 18,999.ರೂ,ಆಗಿದೆ.

ರಿಯಲ್‌ಮಿ X2

ರಿಯಲ್‌ಮಿ X2

ರಿಯಲ್‌ಮಿ X2 ಸ್ಮಾರ್ಟ್‌ಫೋನ್‌ 6.4-ಇಂಚಿನ ಆಮೋಲೆಡ್‌ ಡಿಸ್ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 730G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೇಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್-ಕ್ಯಾಮೆರಾ ಸೆಟ್‌ಅಪ್ ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 4000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 30W ವೇಗದ ಚಾರ್ಜರ್ ಅನ್ನು ಬೆಂಬಲಿಸುತ್ತದೆ. ಇನ್ನು ಇದರ 4GB RAM ಮತ್ತು 64GB ಇಂಟರ್‌ ಸ್ಟೋರೇಜ್ ಬೇಸ್ ವೇರಿಯಂಟ್ ಬೆಲೆ 17,999.ರೂ. ಹೊಂದಿದೆ.

Best Mobiles in India

English summary
Best phones under Rs 20,000 in India are now more capable than ever.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+