Home
ಸುದ್ದಿಜಾಲ

ಹೈ ಎಂಡ್‌ ಕ್ಯಾಮೆರಾ ಫೋನ್‌ ಬೇಕಿದ್ರೆ, ಇಲ್ಲಿ ಗಮನಿಸಿ!..ಇವು 200ಎಂಪಿ ಫೋನ್‌!

ಪ್ರಸ್ತುತ ಸ್ಮಾರ್ಟ್‌ಫೋನ್‌ಗಳಲ್ಲಿ ಕ್ಯಾಮೆರಾ ಫೀಚರ್ ಅತೀ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಮೊಬೈಲ್‌ ಸಂಸ್ಥೆಗಳು ಅಧಿಕ ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೌಲಭ್ಯವನ್ನು ಇತ್ತೀಚಿನ ಸ್ಮಾರ್ಟ್‌ಫೋನ್‌ಗಳಲ್ಲಿ ನೀಡುತ್ತಿದ್ದಾರೆ. ಇನ್ನು ಕ್ಯಾಮೆರಾ ವಿಷಯದಲ್ಲಿ ಇದೀಗ ಡ್ಯುಯಲ್‌ ಮತ್ತು ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಸಾಮಾನ್ಯವಾಗಿದೆ. ಆದ್ರೆ ಕೆಲವು ಫೋನ್‌ಗಳ ಪ್ರಾಥಮಿಕ ಕ್ಯಾಮೆರಾ 200 ಮೆಗಾ ಪಿಕ್ಸಲ್‌ ಆಗಿದೆ.

ಹೌದು, ಇಂದಿನ ಬಹುತೇಕ ಕಂಪನಿಗಳ ಸ್ಮಾರ್ಟ್‌ಫೋನ್‌ಗಳು ಹೈ ಎಂಡ್ ಸೆನ್ಸಾರ್ ಪಡೆದಿರುತ್ತವೆ. ಮುಖ್ಯವಾಗಿ 200 ಮೆಗಾ ಪಿಕ್ಸಲ್‌ ಸೆನ್ಸಾರ್ ಕ್ಯಾಮೆರಾ ಆಯ್ಕೆ ಹೊಂದಿರುವ ಕೆಲವು ಫೋನ್‌ಗಳು ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್‌ ರೂಪಿಸಿವೆ. ಕ್ಯಾಮೆರಾ ಆಯ್ಕೆಗೆ ಹೆಚ್ಚಿನ ಮಹತ್ವ ನೀಡುವ ಹಾಗೂ ಮೊಬೈಲ್‌ ಫೋಟೋಗ್ರಫಿ ಆಸಕ್ತಿ ಇರುವ ಬಳಕೆದಾರರು ಇಂತಹ ಫೋನ್‌ಗಳತ್ತ ಮುಖ ಮಾಡುತ್ತಾರೆ. ಹಾಗಾದರೇ ಪ್ರಸ್ತುತ 200 ಮೆಗಾ ಪಿಕ್ಸಲ್‌ ಸೆನ್ಸಾರ್ ಕ್ಯಾಮೆರಾ ಆಯ್ಕೆಯ ಕೆಲವು ದೈತ್ಯ ಸ್ಮಾರ್ಟ್‌ಫೋನ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಹೈ ಎಂಡ್‌ ಕ್ಯಾಮೆರಾ ಫೋನ್‌ ಬೇಕಿದ್ರೆ, ಇಲ್ಲಿ ಗಮನಿಸಿ!..ಇವು 200ಎಂಪಿ ಫೋನ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್‌ 2X ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಡೈನಾಮಿಕ್ ರಿಫ್ರೆಶ್ ರೇಟ್ 1-120Hz ಬೆಂಬಲಿಸಲಿದೆ. ಜೊತೆಗೆ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ನ ಕಸ್ಟಮ್ ಆವೃತ್ತಿಯನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 13 One UI 5.1 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನಿನ ಮುಖ್ಯ ಕ್ಯಾಮೆರಾ 200 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿರುವುದು ಪ್ಲಸ್‌ ಪಾಯಿಂಟ್‌ ಎನಿಸಿದೆ. ಜೊತೆಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ : ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪೋಲ್ಡ್‌ ಕರ್ವ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಜೊತೆಗೆ ಇದು ಆಂಡ್ರಾಯ್ಡ್‌ 12 ಆಧಾರಿತ My UX ಸ್ಕಿನ್‌ ಬೆಂಬಲದೊಂದಿಗೆ ರನ್‌ ಆಗಲಿದೆ.

ಈ ಫೋನ್ ಹಿಂಬದಿಯಲ್ಲಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ 4,610mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಹೈ ಎಂಡ್‌ ಕ್ಯಾಮೆರಾ ಫೋನ್‌ ಬೇಕಿದ್ರೆ, ಇಲ್ಲಿ ಗಮನಿಸಿ!..ಇವು 200ಎಂಪಿ ಫೋನ್‌!

ಇನ್ಫಿನಿಕ್ಸ್‌ ಜಿರೋ ಅಲ್ಟ್ರಾ 5G : ಈ ಸ್ಮಾರ್ಟ್‌ಫೋನ್‌ 6.8 ಇಂಚಿನ 3D ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ ಮೀಡಿಯಾಟೆಕ್‌ ಡೈಮೆನ್ಸಿಟಿ 920 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಅದಕ್ಕೆ ಪೂರಕವಾಗಿ ಇದು ಆಂಡ್ರಾಯ್ಡ್‌ 12 ಆಧಾರಿತ XOS 12ನಲ್ಲಿ ರನ್‌ ಆಗಲಿದೆ.

ಹಾಗೆಯೇ 8GB RAM ಮತ್ತು 256GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಪಡೆದಿರುವ ಈ ಫೋನ್‌ ಹಿಂಬದಿಯಲ್ಲಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಆಗಿರುವುದು ಪ್ರಮುಖ ಹೈಲೈಟ್‌ ಆಗಿದೆ. ಜೊತೆಗೆ ಇದು 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Best Mobiles with 200 Megapixel Camera: Phones list and specifications details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+