ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳು!

|

ಮೊಬೈಲ್‌ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ವಿಭಿನ್ನ ಬೆಲೆಗಳಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳು ಖರೀದಿಸುವುದಕ್ಕೆ ಸಾಧ್ಯವಿದೆ. ಆದರೆ ಗ್ರಾಹಕರು ಮಾತ್ರ ಬ್ರ್ಯಾಂಡ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವುದಕ್ಕೆ ಹೆಚ್ಚು ಇಷ್ಟಪಡುತ್ತಾರೆ. ಇದೇ ಕಾರಣಕ್ಕೆ ಮಾರುಕಟ್ಟೆಯಲ್ಲಿ ಬ್ರ್ಯಾಂಡ್‌ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಸೌಂಡ್‌ ಮಾಡುತ್ತವೆ. ಇದರಲ್ಲಿ ಮೊಟೊರೊಲಾ ಕಂಪೆನಿ ಕೂಡ ಒಂದು ಪ್ರಮುಖ ಬ್ರ್ಯಾಂಡ್‌ ಎನಿಸಿಕೊಂಡಿದೆ.

ಸ್ಮಾರ್ಟ್‌ಫೋನ್‌

ಹೌದು, ಪ್ರಮುಖ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿಗಳಲ್ಲಿ ಮೊಟೊರೊಲಾ ಕಂಪೆನಿ ಕೂಡ ಒಂದಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನಸೆಳೆದಿದೆ. ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳ ಜೊತೆಗೆ ಪ್ರೀಮಿಯಂ ಪ್ರೈಸ್‌ಟ್ಯಾಗ್‌ ಸ್ಮಾರ್ಟ್‌ಫೋನ್‌ಗಳನ್ನು ಕೂಡ ಪರಿಚಯಿಸಿ ಸೈ ಎನಿಸಿಕೊಂಡಿದೆ. ತನ್ನ ಆಕರ್ಷಕ ಕ್ಯಾಮೆರಾ ವಿನ್ಯಾಸ ಹಾಗೂ ಡಿಸ್‌ಪ್ಲೇ ರಚನೆ ಹೊಂದಿರುವ ಸ್ಮಾರ್ಟ್‌ಫೋನ್‌ಗಳಿಗೆ ಮೊಟೊರೊಲಾ ಪ್ರಸಿದ್ಧಿ ಪಡೆದಿದೆ.

ಮೊಟೊರೊಲಾ

ಇನ್ನು ಮೊಟೊರೊಲಾ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಹೆಚ್ಚಿನ ಜನರು ಬಜೆಟ್‌ ಬೆಲೆಯ ಫೋನ್‌ಗಳನ್ನು ಇಷ್ಟ ಪಡುತ್ತಾರೆ. ಇದನ್ನೇ ಗಮನದಲ್ಲಿಟ್ಟುಕೊಂಡು ಮೊಟೊರೊಲಾ ಕಂಪೆನಿ ಕೂಡ ಹಲವು ಸ್ಮಾರ್ಟ್‌ಫೋನ್‌ಗಳನ್ನು 15,000ರೂ.ಗಿಂತ ಕಡಿಮೆ ಬೆಲೆಯಲ್ಲಿ ಪರಿಚಯಿಸಿದೆ. ಪ್ರಸ್ತುತ ನೀವು ಕೂಡ 15,000ರೂ.ಒಳಗಿನ ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸಿದರೆ ಹಲವು ಆಯ್ಕೆಗಳನ್ನು ಕಾಣಬಹುದಾಗಿದೆ. ಹಾಗಾದ್ರೆ 15,000ರೂ. ಒಳಗೆ ಲಭ್ಯವಾಗುವ ಮೊಟೊರೊಲಾ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೊಟೊರೊಲಾ G40 ಫ್ಯೂಷನ್

ಮೊಟೊರೊಲಾ G40 ಫ್ಯೂಷನ್

15,000ರೂ. ಒಳಗೆ ನೀವು ಮೊಟೊರೊಲಾ ಸ್ಮಾರ್ಟ್‌ಫೋನ್‌ ಖರೀದಿಸುವುದಾದರೆ ನಿಮಗೆ ಮೊಟೊ G40 ಫ್ಯೂಷನ್ ಸ್ಮಾರ್ಟ್‌ಫೋನ್‌ ಉತ್ತಮ ಆಯ್ಕೆಯಾಗಲಿದೆ. ಈ ಸ್ಮಾರ್ಟ್‌ಫೋನ್‌ 6.8 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಟರ್ಬೋ ಪವರ್ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಬೆಲೆ 14,490ರೂ.ಆಗಿದೆ.

ಮೊಟೊರೊಲಾ ಮೋಟೋ G22

ಮೊಟೊರೊಲಾ ಮೋಟೋ G22

ಮೋಟೋ G22 ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಪ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಮಿಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ರಿಯರ್‌ ಕ್ಯಾಮೆರಾ ಸೆಟಪ್‌ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಇದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದು 20W ಟರ್ಬೋಪವರ್ ಚಾರ್ಜಿಂಗ್ ಬೆಂಬಲಿಸುತ್ತದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ನಿಮಗೆ 10,490ರೂ.ಬೆಲೆಯಲ್ಲಿ ಲಭ್ಯವಾಗಲಿದೆ.

ಮೊಟೊರೊಲಾ E40

ಮೊಟೊರೊಲಾ E40

ಮೋಟೋ E40 ಸ್ಮಾರ್ಟ್‌ಫೋನ್‌ 6.5-ಇಂಚಿನ ಮ್ಯಾಕ್ಸ್ ವಿಷನ್ ಹೆಚ್‌ಡಿ+ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಯೂನಿಸೋಕ್ T700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸಾರ್ ಜೊತೆಗೆ f/1.79 ಲೆನ್ಸ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ನಲ್ಲಿ 10,290ರೂ.ಬೆಲೆಗೆ ಲಭ್ಯವಿದೆ.

ಮೊಟೊರೊಲಾ G31

ಮೊಟೊರೊಲಾ G31

ಮೋಟೋ G31 ಸ್ಮಾರ್ಟ್‌ಫೋನ್‌ ಮೊಟೊ G31 ಸ್ಮಾರ್ಟ್‌ಫೋನ್‌ 6.4 ಇಂಚಿನ ಪೂರ್ಣ ಹೆಚ್‌ಡಿ OLED ಡಿಸ್‌ಪ್ಲೇ ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.

ಮೊಟೊರೊಲಾ G30

ಮೊಟೊರೊಲಾ G30

ಮೊಟೊ G30 ಸ್ಮಾರ್ಟ್‌ಫೋನ್‌ 6.5 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 20W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಈ ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 10,999ರೂ.ಬೆಲೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 10,499ರೂ.ಬೆಲೆಯಲ್ಲಿ ಲಭ್ಯವಾಗಲಿದೆ.

ಮೊಟೊರೊಲಾ E7 ಪವರ್

ಮೊಟೊರೊಲಾ E7 ಪವರ್

ಮೊಟೊ E7 ಪವರ್ ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G25 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 10 ಓಎಸ್‌ ಸಪೋರ್ಟ್‌ ಇರಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಪವರ್‌ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 10W ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 8,999ರೂ.ಬೆಲೆಗೆ ಲಭ್ಯವಿದೆ.

Best Mobiles in India

English summary
Best motorola smartphones under Rs. 15,000 in india: 2022

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X