ಭಾರತದಲ್ಲಿ 20,000 ರೂ ಒಳಗೆ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಇಲ್ಲದೆ ಮನೆಯಿಂದ ಹೊರಹೋಗುವುದು ಕೂಡ ಕಷ್ಟ ಎನ್ನುವ ಮಟ್ಟಿಗೆ ಕಾಲ ಬದಲಾಗಿದೆ. ಸದ್ಯ ದೈನಂದಿನ ಬದುಕಿನಲ್ಲಿ ಸ್ಮಾರ್ಟ್‌ಫೋನ್‌ಗಳ ಬಳಕೆ ಹೆಚ್ಚುತ್ತಲೇ ಇದೆ. ಇದಕ್ಕೆ ಅನುಗುಣವಾಗಿ ಟೆಕ್‌ ವಲಯದಲ್ಲಿ ಸಹ ಸ್ಮಾರ್ಟ್‌ಫೋನ್‌ಗಳ ಭರಾಟೆ ಕೂಡ ಜೋರಾಗಿಯೇ ಇದೆ. ಆದರೂ ಗ್ರಾಹಕರು ಮಾತ್ರ ತಮ್ಮ ನೆಚ್ಚಿನ ಕಂಪೆನಿಗಳನ್ನ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸುತ್ತಾರೆ.

ಸ್ಮಾರ್ಟ್‌ಫೋನ್‌

ಹೌದು, ಮಾರುಕಟ್ಟೆಯಲ್ಲಿ ಹಲವು ಕಂಪೆನಿಗಳ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಯುವಕರಿಂದ ಹಿಡಿದು ಹಿರಿಯ ವಯಸ್ಸಿನವರಿಗೂ ಕೂಡ ಸ್ಮಾರ್ಟ್‌ಫೋನ್‌ ಇರಲೇಬೇಕು ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಸದ್ಯ ಮಾರುಕಟ್ಟೆಯಲ್ಲಿ 20,000 ರೂ ಒಳಗೆ ಲಭ್ಯವಾಗುವ ಮಲ್ಟಿ ಆಕ್ಟಿವಿಟಿ ಮಾಡಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಶಿಯೋಮಿ ರೆಡ್‌ಮಿ ನೋಟ್ 9 ಪ್ರೊ ಮ್ಯಾಕ್ಸ್

ಶಿಯೋಮಿ ರೆಡ್‌ಮಿ ನೋಟ್ 9 ಪ್ರೊ ಮ್ಯಾಕ್ಸ್

ಮಾರುಕಟ್ಟೆಯಲ್ಲಿ ಲಭ್ಯವಿರುವ ಅತ್ಯುತ್ತಮ ಮಲ್ಟಿ-ಟಾಸ್ಕಿಂಗ್ ಫೋನ್‌ಗಳಲ್ಲಿ ಶಿಯೋಮಿ ರೆಡ್‌ಮಿ ನೋಟ್‌ 9 ಪ್ರೊ ಮ್ಯಾಕ್ಸ್‌ ಕೂಡ ಒಂದಾಗಿದೆ. ಇದು 6.6-ಇಂಚಿನ ಫುಲ್‌ ಹೆಚ್‌ಡಿ + ರೆಸಲ್ಯೂಶನ್ ಡಾಟ್‌ಡಿಸ್‌ಪ್ಲೇಯನ್ನು ಹೊಂದಿದೆ. ವೀಡಿಯೋ ವೀಕ್ಷಣೆಗೆ ಹಾಗೂ ಗೇಮಿಂಗ್‌ ಗೆ ಯೋಗ್ಯವಾದ ಸ್ಮಾರ್ಟ್‌ಫೋನ್‌ ಇದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾರೆವನ್ನು ಸಹ ಹೊಂದಿದೆ. ಇದು 5020mAh ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜರ್ ಅನ್ನು ಸಹ ಬೆಂಬಲಿಸುತ್ತದೆ. ಇದರ ಬೆಲೆ 16,999 ರೂ ಆಗಿದೆ.

ರಿಯಲ್‌ಮಿ 7

ರಿಯಲ್‌ಮಿ 7

ಬಹು ಕಾರ್ಯ ನಿರ್ವಹಿಸುವ ಸ್ಮಾರ್ಟ್‌ಫೋನ್‌ಗಳಲ್ಲಿ ರಿಯಲ್‌ಮಿ 7 ಕೂಡ ಒಂದಾಗಿದೆ. ಇದು 6.5 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G95 ಗೇಮಿಂಗ್ ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಡಾರ್ಟ್ ಚಾರ್ಜರ್ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡಾಕ್ಯುಮೆಂಟ್‌ಗಳು, ಸ್ಟ್ರೀಮಿಂಗ್ ಮೀಡಿಯಾ ಮತ್ತು ಗೇಮ್‌ಗಳನ್ನು ಆಡುವಾಗ ಉತ್ತಮ ಅನುಭವವನ್ನು ನೀಡಲಿದೆ. ಇದರ ಬೆಲೆ 14,999 ರೂ.ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಸ್ಟ್ರೀಮಿಂಗ್ ಮತ್ತು ಗೇಮಿಂಗ್ ಅನ್ನು ಉತ್ತಮ ಅನುಭವವಾಗಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 9611 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದು 6,000mAh ಬ್ಯಾಟರಿ ಪ್ಯಾಕಪ್‌ ಅನ್ನು ಹೊಂದಿದೆ. ಇದು 19,000 ರೂ ಬೆಲೆಯನ್ನು ಹೊಂದಿದೆ.

ವಿವೋ Y51

ವಿವೋ Y51

20,000 ಸಾವಿರ ರೂ ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ವಿವೋ Y51 ಕೂಡ ಒಂದಾಗಿದೆ. ಇದು 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 665 ಪ್ರೊಸೆಸರ್ ಅನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಅನ್ನು ಹೊಂದಿದೆ. ಇದರ ಬೆಲೆ 17,990 ರೂ.ಆಗಿದೆ.

ಒಪ್ಪೋ F17

ಒಪ್ಪೋ F17

ಒಪ್ಪೊ F17 ಗೇಮಿಂಗ್, ಬಹು ಅಪ್ಲಿಕೇಶನ್‌ಗಳಲ್ಲಿ ವರ್ಕ್‌ ಮಾಡುವುದರಲ್ಲಿ ಉತ್ತಮ ಸ್ಮಾರ್ಟ್‌ಫೋನ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 662 ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ 4000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರ ಬೆಲೆ 16,990 ರಿಂದ ಪ್ರಾರಂಭವಾಗುತ್ತದೆ.

Best Mobiles in India

English summary
Here’s a list of best multi-tasking handsets under ₹20,000 in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X