10,000 ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಟಾಪ್ 10 ಸ್ಮಾರ್ಟ್‌ಫೋನ್‌ಗಳು!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ನಾನಾ ವಿಧದ ಸ್ಮಾರ್ಟ್‌ಫೋನ್‌ಗಳು ಲಬ್ಯವಿವೆ. ದೊಡ್ಡ ಮೊತ್ತದ ಸ್ಮಾರ್ಟ್‌ಗಳಿಂದ ಹಿಡಿದು ಬಜೆಟ್ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು ಕೂಡ ಲಬ್ಯವಾಗುತ್ತಿವೆ. ಸದ್ಯ ಕೊರೊನಾ ವೈರಸ್‌ನ ಭಿತಿಯಿಂದಾಗಿ ಲಾಕ್‌ಡೌನ್ ಬಿಸಿ ತಟ್ಟುತ್ತಿದೆ. ಆದರು ಟೆಕ್ ವಲಯದ ಸ್ಮಾರ್ಟ್‌ಫೋನ್‌ಗಳ ಭರಾಟೆ ಕಡಿಮಡೆಯಾಗಿಲ್ಲ. ಸದ್ಯ ನಾನಾ ವಿದದ ಸ್ಮಾರ್ಟ್‌ಫೋನ್‌ಗಳು ಲಬ್ಯವಿದ್ದರೂ ಸ್ಮಾರ್ಟ್‌ಫೋನ್ ಪ್ರಿಯರು ಮಾತ್ರ ತಮ್ಮನೆಚ್ಚಿನ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸುತ್ತಾರೆ. ಸದ್ಯ ಮಾರುಕಟ್ಟೆಯಲ್ಲಿ 10,000 ರು ಒಳಗೆ ಲಬ್ಯವಿರುವ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದರ ವಿವರ ನಿಡ್ತಿವಿ ಓದಿ.

ಹೌದು, ಮಾರುಕಟ್ಟೆಯಲ್ಲಿ ಹಲವು ಕಂಪೆನಿಗಳ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಬ್ಯವಿವೆ. ಅದರಲ್ಲಿ ಹಲವು ವಿಧದ ಬೆಲೆಯ ಶ್ರೇಣಿಯನ್ನ ಹೊಂದಿರುವ ಸ್ಮಾರ್ಟ್‌ಫೋನ್‌ಗಳು ಖರೀದಿಸಬಹುದಾಗಿದೆ. ಆದರೂ ಹೆಚ್ಚಿನ ಪ್ರಮಾಣದಲ್ಲಿ ಜನರು ಬಜೆಟ್ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಗೆ ಒಲವು ತೊರುತ್ತಾರೆ. ಇದೇ ಕಾರಣಕ್ಕೆ ಕೆಲವು ಸ್ಮಾರ್ಟ್‌ಫೋನ್ ಕಂಪೆನಿಗಳು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಮಡಿವೆ. ಇವುಗಳಲ್ಲಿ ನೀವು ಖರೀದಿಸಬಹುದಾದ ಹಾಗೂ ನಿಮಗೆ ಹತ್ತು ಸಾವಿರಗಿಂತ ಕಡಿಮೆ ಬೆಲೆಯಲ್ಲಿ ಲಬ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನ ನೀಡ್ತಿವಿ ಓದಿರಿ.

ರಿಯಲ್‌ಮಿ C3
ರಿಯಲ್‌ಮಿ C3 ಸ್ಮಾರ್ಟ್‌ಫೋನ್ ನೀವು ಹತ್ತು ಸಾವಿರದ ಒಳಗೆ ಖರೀದಿಸಬಹುದಾದ ಅತ್ಯುತ್ತಮ ಬಜೆಟ್ ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ 20: 9 ರಚನೆ ಅನುಪಾತ ಹೊಂದಿರುವ 6.5-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G70 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್, ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಜೊತೆಗೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನ ಸಹ ನೀಡಲಾಗಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.ಇನ್ನು ಭಾರತದಲ್ಲಿ ಇದರ ಬೆಲೆ 7,499 ರೂ.ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M30
ಗ್ಯಾಲಕ್ಸಿ M30 ಸ್ಯಾಮ್‌ಸಂಗ್‌ನ ಅತ್ಯಂತ ಜನಪ್ರಿಯ ಫೋನ್‌ಗಳಲ್ಲಿ ಒಂದಾಗಿದೆ. ಇದು ವಾಟರ್‌ಡ್ರಾಪ್ ನಾಚ್ ಶೈಲಿಯನ್ನು ಹೊಂದಿರುವ 6.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಎಕ್ಸಿನೋಸ್ 7904SoC ಪ್ರೊಸೆಸರ್ ಹೊಂದಿದ್ದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB RAM ಮತ್ತು 32GB ಇಮಟರ್ ಸ್ಟೋರೇಜ್ ಅನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್‌ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ಆಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಅಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದರ ಬೆಲೆ 9,685 ರೂ. ಆಗಿದೆ.

ರಿಯಲ್‌ಮಿ 5i
ರಿಯಲ್‌ಮಿ 5i ಸ್ಮಾರ್ಟ್‌ಫೋನ್ ಪ್ರಸ್ತುತ ಕೇವಲ 8,999 ರೂಗಳಿಗೆ ಲಬ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 4GB RAM + 128GB ಹಾಗೂ 4GB RAM + 64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಗಳಲ್ಲಿ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.52-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಶೂಟರ್ ಮತ್ತು ಮುರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಅಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಕೂಡ ಇದೆ.

ಇನ್ಫಿನಿಕ್ಸ್ S5
ಇನ್ಫಿನಿಕ್ಸ್ S5 ಕಡಿಮೆ ಬೆಲೆಯಲ್ಲಿ ಲಬ್ಯವಾಗುವ ಮತ್ತೊಂದು ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬೆಲೆ ಕೇವಲ 9,599 ರೂಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಪಂಚ್-ಹೋಲ್ ಡಿಸ್‌ಪ್ಲೇ ವಿನ್ಯಾಸ ಹೊಂದಿದ್ದು, ಇದು 6.6 ಇಂಚಿನ ಡಿಸ್‌ಪ್ಲೇ ಆಗಿದೆ. ಅಲ್ಲದೆ ಈ ಸ್ಮಾರ್ಟ್‌ಫೊನ್ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ P22 SoC ಪ್ರೊಸೆಸರ್ ಅನ್ನು ಒಳಗೊಂಡಿದೆ.

ರಿಯಲ್‌ಮಿ u1
25 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿರುವ ಸ್ಮಾರ್ಟ್‌ಫೋನ್ ಇದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ ಪಿ 70 ಆಕ್ಟಾ-ಕೋರ್ SoC ಪ್ರೊಸೆಸರ್ ವೇಗವನ್ನ ಪಡೆದುಕೊಂಡಿದೆ.ಇದಲ್ಲದೆ ಈ ಸ್ಮಾರ್ಟ್‌ಫೋನ್ 6.3-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು 2340 x 1080 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದೆ. ಹಾಗೇ 409 ಪಿಪಿಯ ಸಾಂದ್ರತೆಯನ್ನ ಒಳಗೊಂಡಿದೆ. ಹಾಗೂ ರಚನೆಯ ಅನುಪಾತ 19.5: 9 ರಷ್ಟಿದ್ದು, ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಸಹ ಹೊಂದಿದೆ. ಇನ್ನು ಇದರ ಬೆಲೆ 8,499 ರೂ. ಆಗಿದೆ.

ಶಿಯೋಮಿ ರೆಡ್‌ಮಿ 8a ಡ್ಯುಯಲ್
ರೆಡ್‌ಮಿ 8a ಡ್ಯುಯಲ್ 6.22 ಇಂಚಿನ ಎಚ್‌ಡಿ + ಡಿಸ್ಪ್ಲೇ ಹೊಂದಿರುವ ಕಾಂಪ್ಯಾಕ್ಟ್ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಆಗಿದೆ. ಇದು ಸ್ನಾಪ್‌ಡ್ರಾಗನ್ 439 ಆಕ್ಟಾ-ಕೋರ್ ಚಿಪ್‌ಸೆಟ್ ಪ್ರೊಸೆಸರ್ ಅನ್ನು ಹೊಂದಿದೆ. ಇನ್ನು 3GB RAM ಮತ್ತು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನ ನೀಡಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಈ ಸ್ಮಾರ್ಟ್‌ಫೋನ್ 7,490 ರೂಗಳಿಗೆ ಲಭ್ಯವಿದೆ.

ವಿವೋ U10
ವಿವೊ U10 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿರುವ ಸ್ಮಾರ್ಟ್‌ಫೋನ್ ಅಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಾಟರ್ ಡ್ರಾಪ್ ನಾಚ್ ಶೈಲಿ ಹೊಂದಿರುವ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 6.35 ಇಂಚಿನ್ ಡಿಸ್‌ಪ್ಲೇ ಆಗಿದ್ದು, ಇದು ಎಚ್‌ಡಿ ಪ್ಲಸ್ ಆಗಿದೆ.ಅಲ್ಲದೆ ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದು 9,990 ರೂಗಳಿಗೆ ಲಭ್ಯವಿದೆ.

ಶಿಯೋಮಿ ರೆಡ್ಮಿ 8
ಇದು 6.22 ಇಂಚಿನ ಎಚ್‌ಡಿ + ಡಿಸ್ಪ್ಲೇ ಹೊಂದಿರುವ ಸ್ಮಾಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಹೊಂದಿದೆ. ಅಲ್ಲದೆ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಲ್ಲಿ 12 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾವನ್ನ ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಸ್ಪ್ಲಾಶ್-ಪ್ರೂಫ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಸದ್ಯ ಇದರ ಬೆಲೆ 8,999 ರೂ ಆಗಿದೆ.

ಆಸಸ್ zen ಫೋನ್ ಮ್ಯಾಕ್ಸ್ ಪ್ರೊ ಎಂ 2
ಆಸುಸ್ zen ಫೋನ್ ಮ್ಯಾಕ್ಸ್ ಪ್ರೊ ಎಂ 2 ಬೃಹತ್ 5,000 ಎಮ್‌ಎಹೆಚ್ ಬ್ಯಾಟರಿಯನ್ನು ನೀಡುತ್ತದೆ. ಇದು ಸ್ನಾಪ್ಡ್ರಾಗನ್ 660 SoC ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಗೇಮಿಂಗ್ ಗೆ ಸೂಕ್ತವಾದ ಮಾದರಿಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.26-ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಇದು ಪ್ರಸ್ತುತ 9,999 ರೂಗಳಿಗೆ ಲಭ್ಯವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 10 ಎಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 10 ಎಸ್ 6.20 ಇಂಚಿನ ಎಚ್‌ಡಿ + ಡಿಸ್ಪ್ಲೇ ಹೊಂದಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಅಲ್ಲದೆ 32 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಇದನ್ನು ಮೆಮೊರಿ ಕಾರ್ಡ್ ಮೂಲಕ 512 ಜಿಬಿ ವರೆಗೆ ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದು ನೀಲಿ, ಹಸಿರು, ಕೆಂಪು ಮತ್ತು ಕಪ್ಪು ಬಣ್ಣಗಳಲ್ಲಿ ಲಭ್ಯವಿದೆ. ನೀವು ಇದನ್ನು 8,980 ರೂಗಳಿಗೆ ಖರೀದಿಸಬಹುದು.


Click it and Unblock the Notifications