28 ದಿನಗಳ ಮಾನ್ಯತೆ ಬಯಸುವವರಿಗೆ ಈ ಪ್ರಿಪೇಯ್ಡ್ ಪ್ಲಾನ್‌ಗಳು ಸೂಕ್ತ!
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಡೇಟಾ ಬಯಸುವವರ ಸಂಖ್ಯೆ ಹೆಚ್ಚುತ್ತಿದೆ. ಇದೇ ಕಾರಣಕ್ಕೆ ಟೆಲಿಕಾಂ ಕಂಪೆನಿಗಳು ಕೂಡ ವಿವಿಧ ರೀತಿಯ ಡೇಟಾ ಪ್ರಯೋಜನ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳನ್ನು ನೀಡುತ್ತಿವೆ. ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿರುವ ಏರ್‌ಟೆಲ್, ರಿಲಯನ್ಸ್ ಜಿಯೋ, ವಿ ಟೆಲಿಕಾಂ ಕಂಪೆನನಿಗಳು ಅನೇಕ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಪರಿಚಯಿಸಿವೆ. ಇದರಲ್ಲಿ ಅಗ್ಗದ ಬೆಲೆಯ ಪ್ರಿಪೇಯ್ಡ್ ಪ್ಲಾನ್‌ಗಳು ಸಾಕಷ್ಟು ಜನಪ್ರಿಯತೆ ಪಡದುಕೊಂಡಿವೆ. ಇವುಗಳಲ್ಲಿ 28 ದಿನಗಳ ಮಾನ್ಯತೆ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳು ಸಾಕಷ್ಟು ಬೇಡಿಕೆ ಪಡೆದುಕೊಂಡಿವೆ.

ಹೌದು, ಟೆಲಿಕಾಂ ಕಂಪೆನಿಗಳು 28 ದಿನಗಳ ಮಾನ್ಯತೆ ನೀಡುವ ಅನೇಕ ಪ್ರಿಪೇಯ್ಡ್ ಪ್ಲಾನ್‌ಗಳನ್ನು ಪರಿಚಯಿಸಿವೆ. ಈ ಪ್ಲಾನ್‌ಗಳಲ್ಲಿ ದೈನಂದಿನ 1GB ಡೇಟಾ ದಿಂದ ಹಿಡಿದು ದಿನನಿತ್ಯ 2GB ಡೇಟಾ ಪ್ರಯೋಜನ ನೀಡುವ ಪ್ಲಾನ್‌ಗಳು ಸೇರಿವೆ. ಹಾಗಾದ್ರೆ ಏರ್‌ಟೆಲ್, ರಿಲಯನ್ಸ್ ಜಿಯೋ, ವಿ ಟೆಲಿಕಾಂ ಕಂಪೆನಿಗಳು ಪರಿಚಯಿಸಿರುವ 28 ದಿನಗಳ ಮಾನ್ಯತೆ ನೀಡುವ ಪ್ರಿಪೇಯ್ಡ್ ಪ್ಲಾನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಏರ್‌ಟೆಲ್ 265ರೂ. ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್ ಟೆಲಿಕಾಂನ 265ರೂ. ಪ್ರೀಪೇಯ್ಡ್ ಪ್ಲ್ಯಾನ್ ನಿಮಗೆ 28 ದಿನಗಳ ವ್ಯಾಲಿಡಿಟಿಯನ್ನು ನೀಡಲಿದೆ. ಈ ಪ್ಲಾನ್‌ನಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ, ಅನಿಯಮಿತ ಕರೆ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಇದಲ್ಲದೆ ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 299ರೂ. ಪ್ರಿಪೇಯ್ಡ್ ಪ್ಲ್ಯಾನ್
ಏರ್‌ಟೆಲ್ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ನಿಮಗೆ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಪ್ಲಾನ್ ಮೂಲಕ ನೀವು ಪ್ರತಿದಿನ 1.5 GB ಇಂಟರ್‌ನೆಟ್ ಪ್ರಯೋಜನ ಸಿಗುತ್ತದೆ. ಇದರೊಂದಿಗೆ ಅನಿಯಮಿತ ಕರೆ ಪ್ರಯೋಜನ ಸೇರಿದಂತೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಇದಲ್ಲದೆ ಹೆಚ್ಚುವರಿ ಯಾಗಿ ಫಾಸ್ಟ್‌ಟ್ಯಾಗ್ ರೀಚಾರ್ಜ್ ನಲ್ಲಿ ಕ್ಯಾಶ್‌ಬ್ಯಾಕ್ ಸಿಗಲಿದೆ.

ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್
ಜಿಯೋ 299ರೂ. ಪ್ರಿಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಹೊಂದಿದೆ. ಇನ್ನು ಈ ಪ್ಲಾನ್ ದೈನಂದಿನ 2GB ಇಂಟರ್‌ನೆಟ್ ಪ್ರಯೋಜನ ಸಿಗಲಿದೆ. ಇದರೊಂದಿಗೆ ಈ ಪ್ಲಾನ್‌ನಲ್ಲಿ ಅನಿಯಮಿತ ಕರೆ ಪ್ರಯೋಜನ, ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ.

ಜಿಯೋ 601ರೂ. ಪ್ರಿಪೇಯ್ಡ್ ಪ್ಲ್ಯಾನ್
ಜಿಯೋ ಟೆಲಿಕಾಂನ 601ರೂ. ಪ್ರೀಪೇಯ್ಡ್ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ಕರೆ ಪ್ರಯೋಜನ, ದೈನಂದಿ 3GB ಡೇಟಾ ಪ್ರಯೋಜನ ಹಾಗೂ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹಾಗೆಯೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯವಾಗಲಿದೆ.

ವಿ ಟೆಲಿಕಾಂನ 299ರೂ. ಪ್ರಿಪೇಯ್ಡ್ ಪ್ಲಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಕೂಡ 28 ದಿನಗಳ ವ್ಯಾಲಿಡಿಟಿ ಹೊಂದಿದೆ. ಇನ್ನು ಈ ಪ್ಲಾನ್‌ನಲ್ಲಿ ಪ್ರತಿನಿತ್ಯ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಇದರೊಂದಿಗೆ ಅನಿಯಮಿತ ಕರೆ ಪ್ರಯೋಜನ ಹಾಗೂ ಪ್ರತಿನಿತ್ಯ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ.

ವಿ ಟೆಲಿಕಾಂನ 601ರೂ. ಪ್ರಿಪೇಯ್ಡ್ ಪ್ಲಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಓಟಿಟಿಯ ಒಂದು ವರ್ಷದ ಚಂದಾದಾರಿಕೆಯ ಪ್ರಯೋಜನ ಲಭ್ಯ ಮಾಡಿದೆ. ಹಾಗೆಯೇ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.


Click it and Unblock the Notifications








