Home
ಸುದ್ದಿಜಾಲ

ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಪೊಕೊ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌!

ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣವಾಗಿದೆ. ಫ್ಲಿಪ್‌ಕಾರ್ಟ್‌ ವಿಶೇಷ ದಿನಗಳಲ್ಲಿ ಮಾತ್ರವಲ್ಲದೆ ವಿಕೆಂಡ್‌, ಮಂತ್‌ಎಂಡ್‌ ಸೇಲ್‌ಗಳನ್ನು ನಡೆಸುತ್ತಾ ಬಂದಿದೆ. ಇದೀಗ ವ್ಯಾಲೆಂಟೈನ್ಸ್‌ ಡೇ ಪ್ರಯುಕ್ತ ಫ್ಲಿಪ್‌ಕಾರ್ಟ್‌ ಮೊಬೈಲ್‌ ಬೊನಾನ್ಜಾ ಸೇಲ್‌ ನಡೆಸುತ್ತಿದೆ. ಈ ಸೇಲ್‌ನಲ್ಲಿ ಪೊಕೊ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ರಿಯಾಯಿತಿಯನ್ನು ಪಡೆದುಕೊಂಡಿದೆ. ಇದರಲ್ಲಿ ಪೊಕೊ C3 ಮತ್ತು ಪೊಕೊ M2 ಪ್ರೊ ಸ್ಮಾರ್ಟ್‌ಫೋನ್‌ಗಳು 16% ಡಿಸ್ಕೌಂಟ್‌ ಪಡೆದುಕೊಂಡಿವೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಬೊನಾನ್ಜಾ ಸೇಲ್‌ನಲ್ಲಿ ಪೊಕೊ ಸ್ಮಾರ್ಟ್‌ಫೋನ್‌ಗಳು ಬಿಗ್‌ ಡಿಸ್ಕೌಂಟ್‌ ಪಡೆದಿವೆ. ವ್ಯಾಲೆಂಟೈನ್ಸ್‌ ಡೇ ಪ್ರಯುಕ್ತ ನಿಮ್ಮ ಸಂಗಾತಿಗೆ ಸ್ಮಾರ್ಟ್‌ಫೋನ್‌ ಗಿಫ್ಟ್‌ ಕೊಡುವುದಾದರೆ ಇದು ಉತ್ತಮ ಆಯ್ಕೆಯಾಗಿದೆ. ಪೊಕೊ ಕಂಪೆನಿಯ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳು ಸೇರಿದಂತೆ ಹಲವು ಸ್ಮಾರ್ಟ್‌ಫೋನ್‌ಗಳು ರಿಯಾಯಿತಿ ಪಡೆದುಕೊಂಡಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಮೊಬೈಲ್ ಬೊನಾನ್ಜಾ ಸೇಲ್‌ನಲ್ಲಿ ಯಾವೆಲ್ಲಾ ಪೊಕೊ ಸ್ಮಾರ್ಟ್‌ಫೋನ್‌ಗಳು ರಿಯಾಯಿತಿ ಪಡೆದಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಪೊಕೊ C3

ಪೊಕೊ C3

ಪೊಕೊ C3 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 3 GB RAM ಮತ್ತು 32GB ರೂಪಾಂತರದ ಲೈಮ್‌ಗ್ರೀನ್‌ ಆಯ್ಕೆಗೆ 15% ಡಿಸ್ಕೌಂಟ್‌ ಪಡೆದಿದೆ. ಇದರ ಮೂಲಬೆಲೆ 9,999ರೂ ಆಗಿದ್ದು, ಡಿಸ್ಕೌಂಟ್‌ನಲ್ಲಿ 8,499ರೂ.ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.53 ಇಂಚಿನ ಎಲ್‌ಸಿಡಿ ಡಾಟ್ ಡ್ರಾಪ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಫೇಸ್ ಅನ್ಲಾಕ್ ಬೆಂಬಲಿಸುವ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ.

ಪೊಕೊ M2 ಪ್ರೊ

ಪೊಕೊ M2 ಪ್ರೊ

ಫ್ಲಿಪ್‌ಕಾರ್ಟ್‌ ಬೊನಾನ್ಜಾ ಸೇಲ್‌ನಲ್ಲಿ ಪೊಕೊ M2 ಪ್ರೊ 6GB RAM ಮತ್ತು 64GB ಆಯ್ಕೆಗೆ 16% ಡಿಸ್ಕೌಂಟ್‌ ಪಡೆದಿದೆ. ಇದರ M.R.P ಬೆಲೆ 17,999ರೂ.ಆಗಿದ್ದು, ಡಿಸ್ಕೌಂಟ್‌ನಲ್ಲಿ 14,999ರೂ ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 720 G SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಎಂಐಯುಐ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33w ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಪೊಕೊ C31

ಪೊಕೊ C31

ಪೊಕೊ C31 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 3GB RAM ಮತ್ತು 32GB ಆಯ್ಕೆಗೆ 27% ರಿಯಾಯಿತಿ ಪಡೆದುಕೊಂಡಿದೆ. ಇದರ M.R.P ಬೆಲೆ 10,999ರೂ.ಆಗಿದ್ದು ಡಿಸ್ಕೌಂಟ್‌ನಲ್ಲಿ 7,999ರೂ ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 6.53 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G35 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 540 ಗಂಟೆಗಳ ಸ್ಟ್ಯಾಂಡ್‌ಬೈ, 30 ಗಂಟೆಗಳ ಇ-ಲರ್ನಿಂಗ್, 34 ಗಂಟೆಗಳ VoLTE ಕರೆ, 10 ಗಂಟೆಗಳ ಗೇಮಿಂಗ್ ಮತ್ತು 91 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ನೀಡಲಿದೆ.

ಪೊಕೊ M3 ಪ್ರೊ 5G

ಪೊಕೊ M3 ಪ್ರೊ 5G

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 4 GB RAM ಮತ್ತು 64 GB ಆಯ್ಕೆಗೆ 15% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರ M.R.P ಬೆಲೆ 15,999ರೂ.ಆಗಿದ್ದು, ರಿಯಾಯಿತಿ ದರದಲ್ಲಿ 13,499ರೂ.ಬೆಲೆಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫೋನ್ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಪೊಕೊ F3 GT

ಪೊಕೊ F3 GT

ಪೊಕೊ F3 GT ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಆಯ್ಕೆಗೆ 22% ರಿಯಾಯಿತಿ ಪಡೆದುಕೊಂಡಿದೆ. ಇದರ ಮೂಲಬೆಲೆ 34,999ರೂ.ಆಗಿದ್ದು ಡಿಸ್ಕೌಂಟ್‌ನಲ್ಲಿ 26,999ರೂ.ಗಳಿಗೆ ಲಭ್ಯವಾಗಲಿದೆ. ಪೊಕೊ F3 GT ಸ್ಮಾರ್ಟ್‌ಫೋನ್‌ 6.67-ಇಂಚಿನ ಟರ್ಬೊ ಅಮೋಲೆಡ್ 10-ಬಿಟ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB, 8GB RAM+ 128GB ಮತ್ತು 8GB RAM + 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,065mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 67W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Valentine's Day is just around the corner and Flipkart has a surprise gift for users who wants to buy a Poco smartphone.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+