Jio vs Airtel vs Vi: 500ರೂ.ಕ್ಕಿಂತ ಕಡಿಮೆ ಬೆಲೆಯ ಪೋಸ್ಟ್‌ಪೇಯ್ಡ್‌ ಪ್ಲಾನ್‌ಗಳು!

|

ದೇಶದ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂ ಆಪರೇಟರ್‌ಗಳು ಮುಂಚೂಣಿಯಲ್ಲಿ ಗುರುತಿಸಿಕೊಂಡಿವೆ. ಗ್ರಾಹಕರನ್ನು ಆಕರ್ಷಿಸುವ ದೃಷ್ಟಿಯಿಂದ ಅಗ್ಗದ ಬೆಲೆಯಲ್ಲಿ ಅಧಿಕ ಡೇಟಾ, ಅನಿಯಮಿತ ಕರೆ ಪ್ರಯೋಜನ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿವೆ. ಅದೇ ರೀತಿ ಪೋಸ್ಟ್‌ಪೇಯ್ಡ್‌ ಪ್ಲಾನ್‌ಗಳಲ್ಲಿ ಸಹ ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಉಚಿತ ಪ್ರವೇಶ ನೀಡುವ ಪ್ಲಾನ್‌ಗಳನ್ನು ಕೂಡ ಒಳಗೊಂಡಿವೆ. ಇದರಲ್ಲಿ ಏರ್‌ಟೆಲ್‌, ವಿ, ಜಿಯೋ ಟೆಲಿಕಾಂಗಳು ಅಗ್ಗದ ಬೆಲೆಯಲ್ಲೂ ಒಟಿಟಿ ಪ್ಲಾಟ್‌ಫಾರ್ಮ್‌ ಪ್ರವೇಶ ನೀಡುವ ಪ್ಲಾನ್‌ ಪರಿಚಯಿಸಿವೆ.

ಪೋಸ್ಟ್‌ಪೇಯ್ಡ್‌

ಹೌದು, ಏರ್‌ಟೆಲ್‌, ವಿ ಮತ್ತು ರಿಲಯನ್ಸ್‌ ಜಿಯೋ ಟೆಲಿಕಾಂಗಳು ಗ್ರಾಹಕರನ್ನು ಒಲೈಸಲು ಹಲವು ಆಕರ್ಷಕ ಪ್ಲಾನ್‌ಗಳನ್ನು ಪರಿಚಯಿಸಿವೆ. ತಮ್ಮ ಪ್ರಿಪೇಯ್ಡ್‌ ಮತ್ತು ಪೋಸ್ಟ್‌ಪೇಯ್ಡ್‌ ಪ್ಲಾನ್‌ಗಳ ಮೂಲಕ ಗ್ರಾಹಕರಿಗೆ ಹೆಚ್ಚುವರಿ ಪ್ರಯೋಜನಗಳನ್ನು ನೀಡುತ್ತಾ ಬಂದಿವೆ. ಇತ್ತೀಚಿಗೆ ತಮ್ಮ ಪೋಸ್ಟ್‌ಪೇಯ್ಡ್‌ ಪ್ಲಾನ್‌ಗಳಲ್ಲಿ ಉಚಿತ OTT ಚಂದಾದಾರಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ವಿಡಿಯೋ, ಮತ್ತು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ವಿಐಪಿಯಂತಹ ಒಂದು ಅಥವಾ ಎರಡು OTT ಆಪ್‌ಗಳ ಉಚಿತ ಚಂದಾದಾರಿಕೆಯೊಂದಿಗೆ ಬರುವ ಪ್ಲಾನ್‌ಗಳನ್ನು ಬಳಕೆದಾರರು ಆದ್ಯತೆ ನೀಡುತ್ತಾರೆ. ಹಾಗಾದ್ರೆ ಅಗ್ಗದ ಬೆಲೆಯಲ್ಲಿ OTT ಆಪ್‌ಗಳ ಉಚಿತ ಚಂದಾದಾರಿಕೆ ನೀಡುವ ಪೋಸ್ಟ್‌ಪೇಯ್ಡ್‌ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಲಯನ್ಸ್ ಜಿಯೋ

ರಿಲಯನ್ಸ್ ಜಿಯೋ

ರಿಲಯನ್ಸ್ ಜಿಯೋ ಹಲವು ಪೋಸ್ಟ್‌ಪೇಯ್ಡ್‌ ಪ್ಲಾನ್‌ಗಳಲ್ಲಿ ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಉಚಿತ ಪ್ರವೇಶವನ್ನು ನೀಡಲಿದೆ. ಇದರಲ್ಲಿ ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ವಿಡಿಯೋ, ಡಿಸ್ನಿ ಮತ್ತು ಹಾಟ್‌ಸ್ಟಾರ್ ವಿಐಪಿಗೆ ಪೋಸ್ಟ್‌ಪೇಯ್ಡ್ ಪ್ಲಾನ್‌ಗಳಲ್ಲಿ ಯೋಜನೆಗಳೊಂದಿಗೆ ಉಚಿತ ಚಂದಾದಾರಿಕೆಯನ್ನು ನೀಡುತ್ತದೆ. ಇನ್ನು ಈ ಪ್ಲಾನ್‌ಗಳು 399ರೂ.ಬೆಲೆಯಿಂದ ಪ್ರಾರಂಭವಾಗಲಿದೆ. ಇನ್ನು 399ರೂ. ಪೋಸ್ಟ್‌ಪೇಯ್ಡ್ ಪ್ಲಾನ್‌ 75GB ಡೇಟಾವನ್ನು ನೀಡಲಿದೆ. ಈ ಪ್ಲಾನ್‌ ಮಾನ್ಯತೆ ಬಿಲ್ಲಿಂಗ್ ಸರ್ಕಲ್‌ ಆಧಾರದ ಮೇಲೆ ಲಭ್ಯವಾಗಲಿದೆ. ಇನ್ನು ಈ ಪ್ಲಾನ್‌ ಮೂಲಕ ಎಲ್ಲಾ ಜಿಯೋ ಆಪ್‌ಗಳಿಗೆ ಉಚಿತ ಪ್ರವೇಶವಿದೆ. ನೆಟ್‌ಫ್ಲಿಕ್ಸ್‌, ಅಮೆಜಾನ್‌ ಪ್ರೈಮ್‌ ಮತ್ತು ಡಿಸ್ನಿ + ಹಾಟ್‌ಸ್ಟಾರ್‌ VIP ಗಳ ಉಚಿತ ಚಂದಾದಾರಿಕೆಯೂ ಲಭ್ಯವಿದೆ. ಇದಲ್ಲದೆ ಜಿಯೋದ 199 ರೂ. ಪ್ಲಾನ್‌ ಕೂಡ ಜಿಯೋ ಆಪ್‌ಗಳಿಗೆ ಉಚಿತ ಪ್ರವೇಶ ನೀಡಲಿದೆ.

ಏರ್‌ಟೆಲ್

ಏರ್‌ಟೆಲ್

ಏರ್‌ಟೆಲ್ ತನ್ನ 499 ಪೋಸ್ಟ್‌ಪೇಯ್ಡ್ ಪ್ಲಾನ್‌ ನಲ್ಲಿ ಅಮೆಜಾನ್ ಪ್ರೈಮ್ ವಿಡಿಯೋ ಮತ್ತು ಡಿಸ್ನಿ+ ಹಾಟ್‌ಸ್ಟಾರ್‌ಗೆ ಉಚಿತ ಚಂದಾದಾರಿಕೆಯನ್ನು ಪಡೆಯಬಹುದಾಗಿದೆ. ಇನ್ನು ಈ ಪ್ಲಾನ್‌ನಲ್ಲಿ 75GB ಡೇಟಾದೊಂದಿಗೆ ರೋಲ್ಓವರ್ ಡೇಟಾ ಪ್ರಯೋಜನವನ್ನು ಸಹ ಪಡೆದುಕೊಳ್ಳಬಹುದಾಗಿದೆ. ಹೆಚ್ಚುವರಿಯಾಗಿ, ನೀವು ಪ್ರತಿದಿನ 100 ಉಚಿತ SMS ಮತ್ತು ಅನಿಯಮಿತ ಕರೆ ಸೌಲಭ್ಯವನ್ನು ಪಡೆಯಬಹುದಾಗಿದೆ. ಆದರೆ ಏರ್‌ಟೆಲ್‌ನ ಯಾವುದೇ ಪೋಸ್ಟ್‌ಪೇಯ್ಡ್ ಯೋಜನೆಯಲ್ಲಿ ನೀವು ನೆಟ್‌ಫ್ಲಿಕ್ಸ್‌ಗೆ ಉಚಿತ ಪ್ರವೇಶವನ್ನು ಪಡೆಯಲು ಸಾಧ್ಯವಿಲ್ಲ. ಇದಲ್ಲದೆ ಏರ್‌ಟೆಲ್‌ನ 599 ರೂ.ಪೋಸ್ಟ್‌ಪೇಯ್ಡ್‌ ಪ್ಲಾನ್‌ನಲ್ಲಿ ನೀವು 2GB ಡೇಟಾ, 100 SMS, ಮತ್ತು ಅನಿಯಮಿತ ಕರೆ ಸೌಲಭ್ಯವನ್ನು ಪಡೆಯಹುದು. ಈ ಯೋಜನೆಯು ಏರ್‌ಟೆಲ್ ಎಕ್ಸ್‌ಸ್ಟ್ರೀಮ್ ಮತ್ತು ವಿಂಕ್ ಮ್ಯೂಸಿಕ್‌ಗೆ ಉಚಿತ ಚಂದಾದಾರಿಕೆಯನ್ನು ನೀಡುತ್ತದೆ.

ವೊಡಾಫೋನ್-ಐಡಿಯಾ

ವೊಡಾಫೋನ್-ಐಡಿಯಾ

ವಿ ಟೆಲಿಕಾಂನ 499 ರೂ ಪ್ಲಾನ್ ನಲ್ಲಿ ನೀವು ಒಟಿಟಿ ಪ್ಲಾನ್‌ಫಾರ್ಮ್‌ಗಳಿಗೆ ಪ್ರವೇಶವನ್ನು ನೀಡಲಿದೆ. ಇದರಲ್ಲಿ ಅಮೆಜಾನ್ ಪ್ರೈಮ್ ವೀಡಿಯೋಗೆ ಉಚಿತ ಚಂದಾದಾರಿಕೆ ಮತ್ತು ಜೀ 5 ಚಂದಾದಾರಿಕೆ ಉಚಿತವಾಗಿ ಸಿಗಲಿದೆ. ಇನ್ನು ಈ ಪ್ಲಾನ್‌75GB ಡೇಟಾ, ಅನಿಯಮಿತ ಕರೆ ಮತ್ತು 100 ಉಚಿತ ಎಸ್‌ಎಂಎಸ್‌ ಪ್ರಯೋಜನ ನೀಡಲಿದೆ. ಜೊತೆಗೆ ವೊಡಾಫೋನ್‌ನ ಯೋಜನೆಯಲ್ಲಿ ನೆಟ್‌ಫ್ಲಿಕ್ಸ್‌ಗೆ ಉಚಿತ ಪ್ರವೇಶವನ್ನು ಪಡೆಯಲು, ನೀವು ಕಂಪನಿಯ ರೆಡ್‌ಎಕ್ಸ್ ಯೋಜನೆಗೆ ಚಂದಾದಾರರಾಗಬೇಕು.

ಏರ್‌ಟೆಲ್

ಇದಲ್ಲದೆ ಏರ್‌ಟೆಲ್ 399ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್ ನಲ್ಲಿ ಬಳಕೆದಾರರು 4G/3G ಬೆಂಬಲಿತ 40GB ಡೇಟಾವನ್ನು ಪಡೆಯುತ್ತಾರೆ. ಹಾಗೆಯೇ ಇದರೊಂದಿಗೆ ಅನಿಯಮಿತ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ದೊರೆಯುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್ ಮತ್ತು ಶಾ ಅಕಾಡೆಮಿಯ ಚಂದಾದಾರಿಕೆಗಳ ಜೊತೆಗೆ ಒಂದು ವರ್ಷದವರೆಗೆ ಏರ್ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂನ ಚಂದಾದಾರಿಕೆ ಇದೆ. ಫಾಸ್ಟ್ಯಾಗ್ ವಹಿವಾಟಿನಲ್ಲಿ ರಿಯಾಯಿತಿ ಹಾಗೂ ಉಚಿತ ಹೆಲೋಟೂನ್ಸ್ ಲಭ್ಯ. ಹೆಚ್ಚುವರಿಯಾಗಿ ಇದು ಏರ್‌ಟೆಲ್ ಎಕ್ಸ್‌ಟೀಮ್ ಹೊರತುಪಡಿಸಿ OTT ಪ್ಲಾಟ್‌ಫಾರ್ಮ್‌ಗಳಿಗೆ ಚಂದಾದಾರಿಕೆಗಳನ್ನು ನೀಡುವುದಿಲ್ಲ.

Most Read Articles
Best Mobiles in India

English summary
There is a tough competition between Reliance Jio, Airtel, and Vodafone-Idea (Vi) in terms of providing postpaid with Netflix, Amaozn Prime, and other OTT subscriptions.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X