Home
ಸುದ್ದಿಜಾಲ

10,000ರೂ. ಒಳಗೆ ಲಭ್ಯವಾಗುವ ಪವರ್‌ಫುಲ್‌ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ!

ನಮ್ಮ ದೈನಂದಿನ ಜೀವನದಲ್ಲಿ ಸ್ಮಾರ್ಟ್‌ಫೋನ್‌ ಕೂಡ ಅವಿಭಾಜ್ಯ ಅಂಗವಾಗಿ ಹೋಗದೆ. ಸ್ಮಾರ್ಟ್‌ಫೋನ್‌ ಇಲ್ಲದೆ ಕಾಲ ಕಳೆಯುವುದಕ್ಕೆ ಸಾಧ್ಯವೇ ಇಲ್ಲ ಎಂಬಂತಾಗಿದೆ. ಅದರಂತೆ ಮಾರುಕಟ್ಟೆಯಲ್ಲಿ ವಿವಿಧ ಬೆಲೆ ವಿಭಾಗಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಇದರಲ್ಲಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಭಾರಿ ಪ್ರಸಿದ್ಧಿಯನ್ನು ಪಡೆದುಕೊಂಡಿವೆ.

ಹೌದು, 10,000 ಕ್ಕಿಂತ ಕಡಿಮೆ ಬೆಲೆಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್‌ ಸೃಷ್ಟಿಸಿವೆ. ಅಗ್ಗದ ಬೆಲೆ ಹಾಗೂ ಪ್ರೀಮಿಯಂ ಫೀಚರ್ಸ್‌ ಕಾರಣಕ್ಕೆ ಭಾರಿ ಬೇಡಿಕೆ ಪಡೆದುಕೊಂಡಿವೆ. ಹಾಗಾದ್ರೆ ಪ್ರಸ್ತುತ ಮಾರುಕಟ್ಟೆಯಲ್ಲಿ ನೀವು ಖರೀದಿಸಬಹುದಾದ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

10,000ರೂ. ಒಳಗೆ ಲಭ್ಯವಾಗುವ ಪವರ್‌ಫುಲ್‌ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ!

ಲಾವ ಯುವ 2 ಪ್ರೊ

ಅಗ್ಗದ ಬೆಲೆಯನ್ನು ಹೊಂದಿದ್ದರು ಪವರ್‌ಫುಲ್‌ ಪ್ರೊಸೆಸರ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಇದಾಗಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 7,999ರೂ. ಆರಂಭಿಕ ಬೆಲೆಯಲ್ಲಿ ಬರಲಿದೆ. ಇನ್ನು ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಮೊಟೊ G13

ಮೊಟೊ G13 ಸ್ಮಾರ್ಟ್‌ಫೋನ್‌ ಅಗ್ಗದ ಬೆಲೆಯಲ್ಲಿ ಲಭ್ಯವಾಗುವ ಪವರ್‌ಫುಲ್‌ ಫೋನ್‌ ಇದಾಗಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G85SoC ಪ್ರೊಸೆಸರ್ ವೇಗವನ್ನು ಪಡೆದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿವೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 9,999ರೂ. ಬೆಲೆಗೆ ಲಭ್ಯವಾಗಲಿದೆ.

10,000ರೂ. ಒಳಗೆ ಲಭ್ಯವಾಗುವ ಪವರ್‌ಫುಲ್‌ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ!

ರಿಯಲ್‌ಮಿ C55

ರಿಯಲ್‌ಮಿ C55 10,000ರೂ. ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.72 ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದು ಮೀಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W SuperVOOC ವೈರ್ಡ್ ಚಾರ್ಜರ್‌ನಿಂದ ಬೆಂಬಲಿತವಾಗಿದೆ.

10,000ರೂ. ಒಳಗೆ ಲಭ್ಯವಾಗುವ ಪವರ್‌ಫುಲ್‌ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ!

ಮೊಟೊ E13

ಮೊಟೊ E13 ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಪ್ರಸ್ತುತ 6,999ರೂ.ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಯುನಿಸೋಕ್‌ T606 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ನೀಡಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಸ್ಮಾರ್ಟ್‌ಫೋನ್‌ 13 ಮೆಗಾಪಿಕ್ಸೆಲ್ ಸೆನ್ಸಾರ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಜೊತೆಗೆ 10W ವೈರ್ಡ್ ಚಾರ್ಜಿಂಗ್‌ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

Best Mobiles in India

English summary
here is the list of smartphones packed with features that cater to the needs of budget-conscious consumers
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+