ಒಂದು ತಿಂಗಳ ಮಾನ್ಯತೆ ನೀಡುವ ಅತ್ಯುತ್ತಮ ಪ್ರಿಪೇಯ್ಡ್‌ ಪ್ಲಾನ್‌ಗಳು!

|

ದೇಶದ ಟೆಲಿಕಾಂ ವಲಯದಲ್ಲಿ ಬದಲಾವಣೆ ನಡೆಯುತ್ತಿದೆ. ಇನ್ಮುಂದೆ ಮಾಸಿಕ ಪ್ಲಾನ್‌ಗಳು 28 ದಿನಗಳ ಬದಲಿಗೆ 30 ದಿನಗಳ ಮಾನ್ಯತೆ ನೀಡಲೇಬೇಕಿದೆ. ಇದೇ ಕಾರಣಕ್ಕೆ ದೇಶದ ಪ್ರಮುಖ ಟೆಲಿಕಾಂಗಳಾದ ರಿಲಯನ್ಸ್ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಟೆಲಿಕಾಂಗಳು ಹೊಸ ಪ್ರಿಪೇಯ್ಡ್ ಪ್ಲಾನ್‌ಗಳು ಪರಿಚಯಿಸಿವೆ. ಈ ಎಲ್ಲಾ ಪ್ಲಾನ್‌ಗಳು ಸಂಪೂರ್ಣ ಕ್ಯಾಲೆಂಡರ್ ತಿಂಗಳವರೆಗೆ ಇರುತ್ತದೆ. ಅಂದರೆ ಈ ಎಲ್ಲಾ ಪ್ಲಾನ್‌ಗಳು ಕನಿಷ್ಟ 30 ದಿನಗಳ ಮಾನ್ಯತೆಯನ್ನು ನೀಡಲಿವೆ.

ಪ್ಲಾನ್‌

ಹೌದು, ಜಿಯೋ, ಏರ್‌ಟೆಲ್‌, ವಿ ಟೆಲಿಕಾಂಗಳು ಹೊಸ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿವೆ. ಇವುಗಳಲ್ಲಿ 30 ದಿನಗಳ ಮಾನ್ಯತೆ ನೀಡುವ ಮಾಸಿಕ ಪ್ರಿಪೇಯ್ಡ್‌ ಪ್ಲಾನ್‌ಗಳು ಸೇರಿವೆ. ಇನ್ನು ಈ ಪ್ಲಾನ್‌ಗಳು ಅನಿಯಮಿತ ಕರೆ ಪ್ರಯೋಜನ, ದೈನಂದಿನ ಎಸ್‌ಎಂಎಸ್‌ ಸೌಲಭ್ಯ ಹಾಗೂ ಡೇಟಾ ಪ್ರಯೋಜನವನ್ನು ನೀಡಲಿವೆ. ಹಾಗಾದ್ರೆ ಜಿಯೋ, ಏರ್‌ಟೆಲ್‌, ವಿ ಟೆಲಿಕಾಂಗಳು ಪರಿಚಯಿಸಿರುವ ಹೊಸ ಪ್ರಿಪೇಯ್ಡ್‌ಪ್ಲಾನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋ 296ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ 296ರೂ. ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂನ 296ರೂ ಪ್ರಿಪೇಯ್ಡ್ ಪ್ಲ್ಯಾನ್ ಕ್ಯಾಲೆಂಡರ್‌ ತಿಂಗಳ ವ್ಯಾಲಿಡಿಟಿಯ ಹೊಂದಿದೆ. ಇದು ಪ್ರತಿ ತಿಂಗಳು ಕೇವಲ ಒಂದು ರೀಚಾರ್ಜ್ ದಿನಾಂಕವನ್ನು ನೆನಪಿಟ್ಟುಕೊಳ್ಳಲು ಬಳಕೆದಾರರಿಗೆ ಸಹಾಯ ಮಾಡುತ್ತದೆ. ಇನ್ನು ಈ ಪ್ರಿಪೇಯ್ಡ್‌ ಪ್ಲಾನ್‌ ನಲ್ಲಿ ಒಟ್ಟು 25GB ಡೇಟಾ ಪ್ರಯೋಜನವನ್ನು ನೀಡಲಿದ್ದು, ನಂತರ 64Kbpsಗೆ ಡೇಟಾ ವೇಗವನ್ನು ಇಳಿಯುತ್ತದೆ. ಇದು ಅನಿಯಮಿತ ಧ್ವನಿ ಕರೆಗಳು, ದೈನಂದಿನ SMS ಪ್ರಯೋಜನವನ್ನು ನೀಡಲಿದೆ. ಇದಲ್ಲದೆ ಜಿಯೋ ಅಪ್ಲಿಕೇಶನ್‌ಗಳಿಗೆ ಪೂರಕ ಚಂದಾದಾರಿಕೆಯನ್ನು ಸಹ ಒಳಗೊಂಡಿದೆ.

ಏರ್‌ಟೆಲ್‌ 296ರೂ. ಪ್ರಿಪೇಯ್ಡ್ ಪ್ಲಾನ್‌

ಏರ್‌ಟೆಲ್‌ 296ರೂ. ಪ್ರಿಪೇಯ್ಡ್ ಪ್ಲಾನ್‌

ಏರ್‌ಟೆಲ್‌ 296ರೂ. ಪ್ರಿಪೇಯ್ಡ್ ಪ್ಲಾನ್‌ 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಪ್ಲಾನ್‌ 25GB ಡೇಟಾವನ್ನು ಜೊತೆಗೆ ಅನಿಯಮಿತ ಕರೆಗಳನ್ನು ಪಡೆದಿದೆ. ಒಮ್ಮೆ ಈ ಡೇಟಾ ಮಿತಿ ಮುಗಿದ ನಂತರ, ಚಂದಾದಾರರಿಗೆ ಪ್ರತಿ ಎಂಬಿ ಡೇಟಾಗೆ 50 ಪೈಸೆ ಶುಲ್ಕ ವಿಧಿಸಲಾಗುತ್ತದೆ. ಹಾಗೆಯೇ ಈ ಯೋಜನೆಯು ಪ್ರತಿದಿನ 100 SMS ಗಳನ್ನು ಸಹ ಪಡೆದಿದೆ. ಇದರೊಂದಿಗೆ ಹೆಚ್ಚುವರಿಯಾಗಿ, ಚಂದಾದಾರರು ಅಮೆಜಾನ್ ಪ್ರೈಮ್ ವಿಡಿಯೋ ಮೊಬೈಲ್ ಆವೃತ್ತಿಯ 30 ದಿನದ ಪ್ರಯೋಗವನ್ನು ಪಡೆಯುತ್ತಾರೆ.

ಏರ್‌ಟೆಲ್‌ ಟೆಲಿಕಾಂನ 319ರೂ. ಪ್ರಿಪೇಯ್ಡ್ ಪ್ಲಾನ್‌

ಏರ್‌ಟೆಲ್‌ ಟೆಲಿಕಾಂನ 319ರೂ. ಪ್ರಿಪೇಯ್ಡ್ ಪ್ಲಾನ್‌

ಏರ್‌ಟೆಲ್‌ ಟೆಲಿಕಾಂನ 319ರೂ. ಪ್ರಿಪೇಯ್ಡ್ ಪ್ಲಾನ್‌ 30 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ದೊರೆಯಲಿದ್ದು, ತಿಂಗಳಿಗೆ ಒಟ್ಟು 60GB ಡೇಟಾ ಲಭ್ಯವಾಗಲಿದೆ. ಜೊತೆಗೆ ಅನಿಯಮಿತ ಕರೆಗಳನ್ನು ಪಡೆದಿದೆ. ಒಮ್ಮೆ ಈ ಡೇಟಾ ಮಿತಿ ಮುಗಿದ ನಂತರ, ಚಂದಾದಾರರಿಗೆ ಪ್ರತಿ ಎಂಬಿ ಡೇಟಾಗೆ 50 ಪೈಸೆ ವಿಧಿಸಲಾಗುತ್ತದೆ. ಹಾಗೆಯೇ ಈ ಯೋಜನೆಯು ಪ್ರತಿದಿನ 100 SMS ಗಳನ್ನು ಸಹ ಪಡೆದಿದೆ.

ವಿ ಟೆಲಿಕಾಂ 327ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 327ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂನ 327ರೂ.ಗಳ ಪ್ರಿಪೇಯ್ಡ್ ಪ್ಲಾನ್‌ ಅನಿಯಮಿತ ಧ್ವನಿ ಕರೆಗಳು, ದೈನಂದಿನ ಆಧಾರದ ಮೇಲೆ 100 SMS ಸಂದೇಶಗಳು ಮತ್ತು ಒಟ್ಟು 25GB ಡೇಟಾಗೆ ಪ್ರವೇಶವನ್ನು ನೀಡಲಿದೆ. ಈ ಪ್ಲಾನ್‌ 30 ದಿನಗಳ ಮಾನ್ಯತೆಯನ್ನು ನೀಡಲಿದೆ. ಇದಲ್ಲದೆ Vi ಮೂವೀಸ್‌ ಮತ್ತು ಟಿವಿ ಚಂದಾದಾರಿಕೆಯನ್ನು ನೀಡಲಿವೆ.

ವಿ ಟೆಲಿಕಾಂನ 337ರೂ. ಪ್ರಿಪೇಯ್ಡ್ ಪ್ಲಾನ್‌

ವಿ ಟೆಲಿಕಾಂನ 337ರೂ. ಪ್ರಿಪೇಯ್ಡ್ ಪ್ಲಾನ್‌

ವಿ ಟೆಲಿಕಾಂನ 337ರೂ. ಪ್ರಿಪೇಯ್ಡ್ ಪ್ಲಾನ್‌ 31 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಪ್ಲಾನ್‌ನಲ್ಲಿ ಅನಿಯಮಿತ ಧ್ವನಿ ಕರೆಗಳು ಮತ್ತು ದಿನಕ್ಕೆ 100 SMS ಸಂದೇಶಗಳ ಪ್ರಯೋಜನ ಪಡೆಯಬಹುದು.ಇದಲ್ಲದೆ ಒಟ್ಟು 28GB ಡೇಟಾ ಪ್ರಯೋಜನವನ್ನು ಕೂಡ ಪಡೆಯಬಹುದಾಗಿದೆ. ಇದಲ್ಲದೆ ಈ ರೀಚಾರ್ಜ್ ಪ್ಲಾನ್‌ಗಳನ್ನು ಆಯ್ಕೆ ಮಾಡುವ ಗ್ರಾಹಕರು ವಿ ಮೂವೀಸ್‌ ಮತ್ತು TV ​​ಅಪ್ಲಿಕೇಶನ್‌ಗೆ ಪೂರಕ ಚಂದಾದಾರಿಕೆಯನ್ನು ಸಹ ಪಡೆಯುತ್ತಾರೆ.

Best Mobiles in India

English summary
Jio, Airtel and Vodafone Idea have launched new prepaid plans that are all valid for at least 30 days.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X