Airtel,Jio,Vi: OTT ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳು!

|

ಏರ್‌ಟೆಲ್‌, ಜಿಯೋ ಮತ್ತು ವಿ ಟೆಲಿಕಾಂಗಳು ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿವೆ. ಆಕರ್ಷಕ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿ ಗಮನಸೆಳೆದಿವೆ. ಇದಲ್ಲದೆ ತಮ್ಮ ಪ್ರಿಪೇಯ್ಡ್ ಪ್ಲಾನ್‌ಗಳ ಜೊತೆಗೆ ಸ್ಟ್ರೀಮಿಂಗ್ ಪ್ರಯೋಜನವನ್ನು ಸಹ ನೀಡುತ್ತಿವೆ. ಏರ್‌ಟೆಲ್ ಎಕ್ಸ್‌ಸ್ಟ್ರೀಮ್, ಜಿಯೋ ಆಪ್‌ಗಳು ಮತ್ತು ವಿ ಚಲನಚಿತ್ರಗಳು ಮತ್ತು ಟಿವಿಯಂತಹ ಹೆಚ್ಚಿನ ಆಪ್‌ಗಳಿಗೆ ತಮ್ಮ ಪ್ಲಾನ್‌ಗಳಲ್ಲಿ ಪ್ರವೇಶವನ್ನು ನೀಡುತ್ತಿವೆ. ಅಷ್ಟೇ ಅಲ್ಲ ಅಮೆಜಾನ್ ಪ್ರೈಮ್ ಮತ್ತು ಡಿಸ್ನಿ+ ಹಾಟ್‌ಸ್ಟಾರ್‌ ನಂತಹ OTT ಪ್ಲಾಟ್‌ಫಾರ್ಮ್‌ಗಳಿಗೂ ಪ್ರವೇಶವನ್ನು ನೀಡುತ್ತಿವೆ.

ಪ್ರಿಪೇಯ್ಡ್‌ಪ್ಲಾನ್‌

ಹೌದು, ಟೆಲಿಕಾಂ ಕಂಪೆನಿಗಳು ತನ್ನ ಪ್ರಿಪೇಯ್ಡ್‌ಪ್ಲಾನ್‌ಗಳಲ್ಲಿ ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೂ ಪ್ರವೇಶ ನೀಡುವ ಅವಕಾಶ ನೀಡಿವೆ. ಏರ್‌ಟೆಲ್‌, ಜಿಯೋ, ವಿ ಟೆಲಿಕಾಂಗಳು ತಮ್ಮ ಹಲವು ಪ್ಲಾನ್‌ಗಳಲ್ಲಿ ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶ ನೀಡುತ್ತಿವೆ. ಇದರಿಂದ ಗ್ರಾಹಕರು ತಮ್ಮ ಪ್ರಿಪೇಯ್ಡ್‌ ಪ್ಲಾನ್‌ ರೀಚಾರ್ಜ್‌ ಮಾಡಿದರೆ ಸಾಕು ಒಟಿಟಿ ಪ್ಲಾಟ್‌ಫಾರ್ಮ್‌ಗಳ ಪ್ರಯೋಜವನ್ನು ಸಹ ಪಡೆಯಬಹುದಾಗಿದೆ. ಹಾಗಾದ್ರೆ ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶ ನೀಡುವ 1000ರೂ.ಒಳಗಿನ ಪ್ರಿಪೇಯ್ಡ್‌ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಏರ್‌ಟೆಲ್ ಪ್ರಿಪೇಯ್ಡ್ ಪ್ಲಾನ್‌

ಏರ್‌ಟೆಲ್ ಪ್ರಿಪೇಯ್ಡ್ ಪ್ಲಾನ್‌

ಏರ್‌ಟೆಲ್‌ ಟೆಲಿಕಾಂನ 349ರೂ. ಪ್ರಿಪೇಯ್ಡ್ ಪ್ಲಾನ್‌ ಅಮೆಜಾನ್‌ ಪ್ರೈಮ್‌ಗೆ ಉಚಿತ ಚಂದಾದಾರಿಎಕಯನ್ನು ನೀಡಲಿದೆ. ಇನ್ನು ಈ ಪ್ಲಾನ್‌ ದೈನಂದಿನ 2GB ಡೇಟಾ ಪ್ರಯೋಜನವನ್ನು ನೀಡಲಿದೆ. ಇದಲ್ಲದೆ ಈ ಪ್ಲಾನ್‌ 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು, ಅನಿಯಮಿತ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್‌ಗಳನ್ನು ನೀಡುತ್ತದೆ. ಇನ್ನು ಏರ್‌ಟೆಲ್‌ನ ಡಿಸ್ನಿ+ ಹಾಟ್‌ಸ್ಟಾರ್ ಪ್ಲಾನ್‌ಗಳ ಬೆಲೆ ಈಗ 499ರೂ, 699ರೂ, ಮತ್ತು 2798ರೂ,ಗಳಿಗೆ ಲಭ್ಯವಾಗಲಿದೆ. ಈ ಪ್ಲಾನ್‌ಗಳು ಕ್ರಮವಾಗಿ ದೈನಂದಿನ 3GB ಡೇಟಾವನ್ನು 28 ದಿನಗಳವರೆಗೆ, 2GB ಡೇಟಾವನ್ನು 56 ದಿನಗಳವರೆಗೆ ಮತ್ತು 2GB ಡೇಟಾವನ್ನು 365 ದಿನಗಳವರೆಗೆ ನೀಡುತ್ತವೆ. ಈ ಯೋಜನೆಗಳು ಬಳಕೆದಾರರಿಗೆ ಅಮೆಜಾನ್ ಪ್ರೈಮ್ ವಿಡಿಯೋ ಮೊಬೈಲ್ ಆವೃತ್ತಿಗೆ ಪ್ರವೇಶವನ್ನು ನೀಡುತ್ತದೆ, ಆದ್ದರಿಂದ ಮೊಬೈಲ್ ಬಳಕೆದಾರರು ಡಿಸ್ನಿ+ ಹಾಟ್ ಸ್ಟಾರ್ ಪ್ರವೇಶವನ್ನು ಪಡೆಯಲಿದ್ದಾರೆ.

ಜಿಯೋ ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಪ್ರಿಪೇಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂ ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಪ್ಲಾನ್‌ಗಳನ್ನು ತನ್ನ ಅಪ್‌ಗ್ರೇಡ್ ಮೊಬೈಲ್ ಪ್ಲಾನ್‌ಗಳ ಮೂಲಕ ನೀಡುತ್ತಿದೆ. ಈ ಪ್ಲಾನ್‌ಗಳು 499ರೂ.ಗಳಿಂದ ಆರಂಭವಾಗುತ್ತವೆ. 499ರೂ, ಪ್ಲಾನ್‌ ಮೊಬೈಲ್-ಓನ್ಲಿ ಡಿಸ್ನಿ+ಹಾಟ್‌ಸ್ಟಾರ್ ಪ್ಲಾನ್ ಅನ್ನು ಒದಗಿಸಲಿದೆ. ಇದರಲ್ಲಿ ಡಿಸ್ನಿ+ಹಾಟ್‌ಸ್ಟಾರ್ ಚಂದಾದಾರಿಕೆಗೆ ಒಂದು ವರ್ಷದ ಮಾನ್ಯತೆ ಇರಲಿದೆ. ಇದು ದೈನಂದಿನ 3GB ಡೇಟಾ ಮತ್ತು 28 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ. ಇದಲ್ಲದೆ 666ರೂ. ಪ್ರಿಪೇಯ್ಡ್‌ ಪ್ಲಾನ್‌ 2GB ದೈನಂದಿನ ಡೇಟಾ ಮತ್ತು 56 ದಿನಗಳ ವ್ಯಾಲಿಡಿಟಿಯನ್ನು ನೀಡುತ್ತದೆ. ಇದಲ್ಲದೆ 888 ರೂ ಪ್ಲಾನ್‌ 2GB ಡೇಟಾವನ್ನು 84 ದಿನಗಳ ವ್ಯಾಲಿಡಿಟಿಯೊಂದಿಗೆ ನೀಡುತ್ತದೆ.

ವಿ ಟೆಲಿಕಾಂ

ವಿ ಟೆಲಿಕಾಂ

ವಿ ಟೆಲಿಕಾಂ ಕೂಡ ತನ್ನ ಪ್ರಿಪೇಯ್ಡ್‌ ಪ್ಲಾನ್‌ಗಳಲ್ಲಿ ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಉಚಿತ ಪ್ರವೇಶವನ್ನು ನೀಡುತ್ತಿದೆ. ಇದರಲ್ಲಿ ವಿ ಟೆಲಿಕಾಂನ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ.

ವಿ ಟೆಲಿಕಾಂ

ವಿ ಟೆಲಿಕಾಂ

ವಿ ಟೆಲಿಕಾಂನ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ.

Most Read Articles
Best Mobiles in India

Read more about:
English summary
Airtel, Jio and Vi have dedicated apps like Airtel XStream, Jio apps and Vi movies and TV with most of their plans.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X