Home
ಸುದ್ದಿಜಾಲ

ರೆಡ್ಮಿಯ ಈ ಜನಪ್ರಿಯ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!..ಸಖತ್ ಉಳಿತಾಯ!

ಶಿಯೋಮಿ ಮೊಬೈಲ್‌ ಸಂಸ್ಥೆಯು ತರಹೇವಾರಿ ಸ್ಮಾರ್ಟ್‌ಫೊನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ತನ್ನದೇ ಸ್ಥಾನ ಭದ್ರ ಮಾಡಿಕೊಂಡಿದೆ. ಶಿಯೋಮಿ ಸಂಸ್ಥೆಯ ರೆಡ್ಮಿ ನೋಟ್ ಸರಣಿಯ ಮೊಬೈಲ್‌ಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್‌ ಇದ್ದು, ಆ ಪೈಕಿ ಇತ್ತೀಚಿನ ಸೇರ್ಪಡೆ ಆಗಿರುವ ರೆಡ್ಮಿ ನೋಟ್‌ 12 ಪ್ರೊ 5G ಮೊಬೈಲ್‌ ಇದೀಗ ಸಖತ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ದೈತ್ಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ರೆಡ್ಮಿ ನೋಟ್‌ 12 ಪ್ರೊ 5G ಮೊಬೈಲ್‌ ಶೇ. 21% ರಷ್ಟು ಡಿಸ್ಕೌಂಟ್‌ ಪಡೆದಿದ್ದು, 6 GB RAM + 128 GB ವೇರಿಯಂಟ್‌ ಫೋನ್‌ 21,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸಿಗುವ ಇತರೆ ಆಯ್ದ ಬ್ಯಾಂಕ್ ಆಫರ್‌, ಎಕ್ಸ್‌ಚೇಂಜ್ ಕೊಡುಗೆ ಪಡೆದುಕೊಂಡರೆ, ಈ ಮೊಬೈಲ್‌ ಅನ್ನು ಮತ್ತಷ್ಟು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯ.

ರೆಡ್ಮಿಯ ಈ ಜನಪ್ರಿಯ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!..ಸಖತ್ ಉಳಿತಾಯ!

ಅಂದಹಾಗೆ ಶಿಯೋಮಿ ರೆಡ್ಮಿ ನೋಟ್‌ 12 ಪ್ರೊ 5G ಮೊಬೈಲ್‌ ಮೀಡಿಯಾಟೆಕ್ ಡೈಮೆನ್ಸಿಟಿ 1080 ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದರ ಜೊತೆಗೆ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಹಾಗಾದರೆ ರೆಡ್ಮಿ ನೋಟ್‌ 12 ಪ್ರೊ 5G ಫೋನಿನ ಇನ್ನುಳಿದ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್‌ 12 ಪ್ರೊ 5G - ಫೀಚರ್ಸ್‌

ರೆಡ್ಮಿಯ ಈ 5G ಮೊಬೈಲ್‌ 1,440 x 3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.73 ಇಂಚಿನ HD+ AMOLED ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 1,500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ಡೈನಾಮಿಕ್ ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.

ರೆಡ್ಮಿಯ ಈ ಜನಪ್ರಿಯ ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!..ಸಖತ್ ಉಳಿತಾಯ!

ರೆಡ್ಮಿ ನೋಟ್‌ 12 ಪ್ರೊ 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 1080 ಪ್ರೊಸೆಸರ್ ಪ್ರೊಸೆಸರ್‌ ಪವರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ ಇದು 8 GB RAM + 256 GB ಹಾಗೂ 12 GB RAM + 256 GB ಆಂತರೀಕ ಸ್ಟೋರೇಜ್‌ ಆಯ್ಕೆ ಅನ್ನು ಕೂಡಾ ಹೊಂದಿದೆ.

ರೆಡ್ಮಿಯ ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪೋರ್ಟ್ರೇಟ್ ಲೆನ್ಸ್‌ ಮತ್ತು 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 12 ಪ್ರೊ 5G ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 120W ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಕೂಡ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, Wi-Fi 6E, ಬ್ಲೂಟೂತ್ v5.2, NFC ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಬ್ಲೂ, ಬ್ಲ್ಯಾಕ್‌ ಹಾಗೂ ಓಪೆರಾ ಮಾವೆ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.

Best Mobiles in India

English summary
best price slashed on Redmi Note 12 Pro 5G on flipkart website. offer price and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+