ಸದ್ಯ ನೀವೇನಾದರೂ ಹೊಸ ರೆಡ್ಮಿ ಫೋನ್ ಖರೀದಿಸ್ತೀರಾ?..ಹಾಗಿದ್ರೆ, ಇಲ್ಲಿ ಗಮನಿಸಿ!
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ರೆಡ್ಮಿ (Redmi) ಸಂಸ್ಥೆಯು ಕೆಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸಿದೆ. ರೆಡ್ಮಿ ಭಿನ್ನ ಪ್ರೈಸ್ ರೇಂಜ್‌ನ ಮೊಬೈಲ್‌ಗಳನ್ನು ಒಳಗೊಂಡಿದ್ದು, ಅವುಗಳಲ್ಲಿ ಬಜೆಟ್ ದರದಲ್ಲಿ ಕಾಣಿಸಿಕೊಂಡ ಕೆಲವು ಸ್ಮಾರ್ಟ್‌ಫೋನ್‌ಗಳು ಅಧಿಕ ಡಿಮ್ಯಾಂಡ್ ನಲ್ಲಿ ಕಾಣಿಸಿಕೊಂಡಿವೆ.
ಹೌದು, ರೆಡ್ಮಿ (Redmi) ಬಜೆಟ್ ಬೆಲೆಯಿಂದ ಹೈ ಎಂಡ್ ದರ ಬೆಲೆಯ ಮೊಬೈಲ್‌ಗಳ ಆಯ್ಕೆಯನ್ನು ರೆಡ್ಮಿ ಒಳಗೊಂಡಿದ್ದು, ಅದರಲ್ಲಿ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಮೋಡಿ ಮಾಡಿವೆ. ಮಾರುಕಟ್ಟೆಯಲ್ಲಿ ರೆಡ್ಮಿ ಕಂಪನಿಯು ವಿವೋ, ರಿಯಲ್‌ಮಿ, ಒಪ್ಪೋ, ಪೊಕೊ ಹಾಗೂ ಮೊಟೊ ಬ್ರ್ಯಾಂಡ್ ಫೋನ್‌ಗಳಿಗೆ ಪೈಪೋಟಿ ನೀಡುತ್ತ ಮುನ್ನಡೆದಿದೆ.

ಇತ್ತೀಚಿನ ರೆಡ್ಮಿಯ ಬಹುತೇಕ ಫೋನ್‌ಗಳು ಅಧಿಕ ಸ್ಟೋರೇಜ್, ಬೆಸ್ಟ್ ಕ್ಯಾಮೆರಾ, ಆಕರ್ಷಕ ಡಿಸೈನ್ ನಂತಹ ಆಯ್ಕೆಗಳಲ್ಲಿ ಕಾಣಿಸಿಕೊಂಡಿವೆ. ಹೀಗಾಗಿ ನೀವೆನಾದರೂ ಬಜೆಟ್ ಬೆಲೆಯಲ್ಲಿ ಹೊಸ ರೆಡ್ಮಿ ಸ್ಮಾರ್ಟ್‌ಫೋನ್ ಖರೀದಿಸುವ ಪ್ಲ್ಯಾನ್ ಇದ್ರೆ, ಇಲ್ಲಿ ನೀಡಲಾಗಿರುವ ಕೆಲವು ಬೆಸ್ಟ್ ಫೋನ್‌ಗಳ ಬಗ್ಗೆ ನೋಡಿರಿ.
ರೆಡ್ಮಿ 13C 5G ಫೋನ್
ರೆಡ್ಮಿ 13C 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ನಲ್ಲಿ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಸಪೋರ್ಟ್ ನೊಂದಿಗೆ ರನ್ ಆಗಲಿದೆ.

ಅಲ್ಲದೇ ಇದು 6 GB RAM + 128 GB ಹಾಗೂ 8 GB RAM + 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಪಡೆದಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರೊಂದಿಗೆ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಈ ಫೋನ್ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ.
ರೆಡ್ಮಿ ನೋಟ್ 13 5G ಸ್ಮಾರ್ಟ್‌ಫೋನ್
ಈ ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಬಲ ಪಡೆದಿದ್ದು, ಇದು ಆಂಡ್ರಾಯ್ಡ್ 13 ಸಪೋರ್ಟ್ ಕೆಲಸ ನಿರ್ವಹಿಸಲಿದೆ.
ಇದರೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 100 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದೆ. ಹಾಗೆಯೇ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲ ಮಾಡಲಿದೆ.
ರೆಡ್ಮಿ ನೋಟ್ 13 ಪ್ರೊ ಪ್ಲಸ್ ಮೊಬೈಲ್
ಈ ಸ್ಮಾರ್ಟ್‌ಫೋನ್ 6.67 ಇಂಚಿನ OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಈ ಡಿಸ್‌ಪ್ಲೇ 1220 x 2712 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಹಾಗೆಯೇ ಇದು ಡೈಮೆನ್ಸಿಟಿ 7200 ಅಲ್ಟ್ರಾ SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 13 ಓಎಸ್ ಬೆಂಬಲದ ಜೊತೆಗೆ ಕಾರ್ಯ ನಿರ್ವಹಿಸಲಿದೆ.
ಇನ್ನು ಇದು ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮೊದಲ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಪಡೆದುಕೊಂಡಿದ್ದು, ಈ ಫೋನ್ 120W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ.


Click it and Unblock the Notifications








