30,000ರೂ ಒಳಗೆ ಲಭ್ಯವಾಗುವ ಸ್ಯಾಮ್‌ಸಂಗ್‌ನ ಬೆಸ್ಟ್ ಸ್ಮಾರ್ಟ್‌ಫೋನ್‌ಗಳು!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಕಂಪೆನಿ ತನ್ನದೇ ಆದ ಜನಪ್ರಿಯತೆಯನ್ನು ಪಡೆದುಕೊಂಡಿದೆ. ತನ್ನ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಂದ ಗ್ರಾಹಕರು ಗಮನ ಸೆಳೆದಿದೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಸ್ಯಾಮ್‌ಸಂಗ್ ಕಂಪೆನಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಸದ್ಯ ಸ್ಯಾಮ್‌ಸಂಗ್ ಕಂಪೆನಿ ಮಾರುಕಟ್ಟೆಯಲ್ಲಿ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎಫ್ ಹಾಗೂ ಫೋಲ್ಡೆಬಲ್ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಮಾರುಕಟ್ಟೆಯಲ್ಲಿ ಮಧ್ಯಮ ಶ್ರೇಣಿಯ ಪ್ರೈಸ್‌ಟ್ಯಾಗ್ ಮಾತ್ರವಲ್ಲದೆ ಹೈ ಎಂಡ್ ಪ್ರೈಸ್ ಟ್ಯಾಗ್ ಸ್ಮಾರ್ಟ್‌ಫೋನ್‌ಗಳನ್ನು ಕೂಡ ಪರಿಚಯಿಸಿದೆ. ಇದರಲ್ಲಿ ಸ್ಯಾಮ್‌ಸಂಗ್ ಕಂಪೆನಿಯ ಹಲವು ಸ್ಮಾರ್ಟ್‌ಫೋನ್‌ಗಳು 30,000ರೂ. ಒಳಗೆ ಲಭ್ಯವಾಗಲಿವೆ. ಹಾಗಾದ್ರೆ ಭಾರತದ ಮಾರುಕಟ್ಟೆಯಲ್ಲಿ 30,000ರೂ ಗಳಿಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳ ವಿವರಗಳನ್ನು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ 17,999ರೂ. ಬೆಲೆಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ 5nm ಎಕ್ಸಿನೋಸ್ ಪ್ರೊಸೆಸರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಪ್ರಸ್ತುತ ಅಮೆಜಾನ್‌ನಲ್ಲಿ ಈ ಸ್ಮಾರ್ಟ್‌ಫೋನಿನ ಬೆಲೆ 18,999ರೂ. ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿಯನ್ನು ಒಳಗೊಂಡಿದ್ದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ ಈ ಫೋನಿನ ಬೆಲೆ 19,999ರೂ. ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ 6.7-ಇಂಚಿನ ಫುಲ್ HD+ ಇನ್ಫಿನಿಟಿ ಒ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನಿನ ಬೆಲೆ 28,999ರೂ.ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A52s
ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್ 6.5-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೆ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಬಲವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಪಡೆದುಕೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 25W ಸೂಪರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಮೆಜಾನ್‌ನಲ್ಲಿ ಈ ಸ್ಮಾರ್ಟ್‌ಫೋನಿನ ಬೆಲೆ 27,779ರೂ. ಆಗಿದೆ.


Click it and Unblock the Notifications








