Home
ಸುದ್ದಿಜಾಲ

ಬೆಸ್ಟ್‌ ಸೆಲ್ಫಿ ಕ್ಯಾಮೆರಾ ಅಗತ್ಯ ಇದೆಯಾ?..ಹಾಗಿದ್ರೆ, ಈ ಮೊಬೈಲ್‌ ಗಮನಿಸಿ!

ಇತ್ತೀಚಿನ ಅನೇಕ ಸ್ಮಾರ್ಟ್‌ಫೋನ್‌ಗಳು ಅತ್ಯುತ್ತಮ ಕ್ಯಾಮೆರಾ ಆಯ್ಕೆ ಒಳಗೊಂಡಿರುತ್ತವೆ. ಮೊಬೈಲ್‌ ಸಂಸ್ಥೆಗಳು ಹಿಂಬದಿಯ ಕ್ಯಾಮೆರಾ ಸೆನ್ಸಾರ್‌ ಜೊತೆಗೆ ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ಗೂ ಅಧಿಕ ಆದ್ಯತೆ ಒದಗಿಸುತ್ತಿವೆ. ಹೀಗಾಗಿ ಇಂದಿನ ಹಲವು ಮೊಬೈಲ್‌ಗಳು ಬೆಸ್ಟ್‌ ಸೆಲ್ಫಿ ಕ್ಯಾಮೆರಾ ಸೌಲಭ್ಯ ಪಡೆದು ಮೊಬೈಲ್‌ ಪ್ರಿಯರ ಗಮನ ಸೆಳದಿವೆ.

ಹೌದು, ಬೆಸ್ಟ್‌ ಸೆಲ್ಫಿ ಕ್ಯಾಮೆರಾ ಸೌಲಭ್ಯದ ಫೋನ್‌ಗಳು ಹೆಚ್ಚಿನ ಬೇಡಿಕೆ ಪಡೆದಿವೆ. ಗ್ರಾಹಕರು ಅವರ ಅಗತ್ಯಕ್ಕೆ ಅನುಗುಣವಾಗಿ ಫೋನ್‌ ಖರೀದಿಸಿದರೂ ಸೆಲ್ಫಿ ಕ್ಯಾಮೆರಾ ಉತ್ತಮವಾಗಿರಲಿ ಎಂದು ನಿರೀಕ್ಷಿಸುತ್ತಾರೆ. ಮೀಡ್‌ರೇಂಜ್‌ ದರದಲ್ಲಿನ ಹಲವು ಫೋನ್‌ಗಳು ಬೆಸ್ಟ್‌ ಸೆಲ್ಫಿ ಕ್ಯಾಮೆರಾ ಸೌಲಭ್ಯ ಪಡೆದಿವೆ. ಹಾಗಾದರೇ ಅತ್ಯುತ್ತಮ ಸೆಲ್ಫಿ ಕ್ಯಾಮೆರಾ ಸೌಲಭ್ಯದ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಬೆಸ್ಟ್‌ ಸೆಲ್ಫಿ ಕ್ಯಾಮೆರಾ ಅಗತ್ಯ ಇದೆಯಾ?..ಹಾಗಿದ್ರೆ, ಈ ಮೊಬೈಲ್‌ ಗಮನಿಸಿ!

ಮೊಟೊರೊಲಾ ಎಡ್ಜ್‌ 50 ಪ್ರೊ

ಮೊಟೊರೊಲಾ ಸಂಸ್ಥೆಯ ಎಡ್ಜ್‌ 50 ಪ್ರೊ ಫೋನ್‌ ಮೂರು ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯ ಹೊಂದಿದೆ. ಇದರ ಸೆಲ್ಫಿ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನಲ್ಲಿ ಇದೆ. ಹಾಗೆಯೇ ಇದು 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2712 × 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಪೋರ್ಟ್‌ ಪಡೆದಿದೆ.

ಇದು ಕ್ವಾಲ್ಕಮ್‌ ಸ್ನಾಪ್‌ಡ್ರಾಗನ್‌ 7 ಜೆನ್‌ 3 SoC ಪ್ರೊಸೆಸರ್‌ ಸಾಮರ್ಥ್ಯದ ಬಲವನ್ನು ಹೊಂದಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್‌ 14 ಓಎಸ್‌ ಸೌಲಭ್ಯ ಸಹ ಇದೆ. ಜೊತೆಗೆ ಈ ಫೋನ್‌ 4500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಸಪೋರ್ಟ್‌ ಆಗಿ 125W ಫಾಸ್ಟ್‌ ಟರ್ಬೋ ಚಾರ್ಜಿಂಗ್‌ ಆಯ್ಕೆ ಇದೆ. ಅಲ್ಲದೇ 50W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯದ ಆಯ್ಕೆ ಸಹ ಹೊಂದಿದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಮೊಬೈಲ್‌ 32 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾ ರಚನೆ ಪಡೆದುಕೊಂಡಿದ್ದು, ಜೊತೆಗೆ ಹಿಂಬದಿಯಲ್ಲಿ ತ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಪಡೆದಿದೆ. ಹಾಗೆಯೇ ಈ ಫೋನ್ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಇನ್ನು ಈ ಮೊಬೈಲ್‌ Exynos 1480 SoC ಪ್ರೊಸೆಸರ್‌ ಸಾಮರ್ಥ್ಯದ ವೇಗದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇದೆ. ಇದರ ಜೊತೆಗೆ ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 25W ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ.

ಒಪ್ಪೋ F25 ಪ್ರೊ 5G

ಒಪ್ಪೋ ಸಂಸ್ಥೆಯ ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಇದ್ದು, 32 ಮೆಗಾ ಪಿಕ್ಸಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಇನ್ನು ಇದು 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಇದಕ್ಕೆ ಅನುಗುಣವಾಗಿ ಈ ಡಿಸ್‌ಪ್ಲೇಯು 2412 × 1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಇದೆ..

ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7050 6nm ಪ್ರೊಸೆಸರ್ ವೇಗದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇದೆ. ಇದರ ಜೊತೆಗೆ ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದು 67W ಸೂಪರ್‌ವೂಕ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Best Mobiles in India

English summary
Best Selfie camera mobiles in India 2024. check mobile list here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+