Home
ಸುದ್ದಿಜಾಲ

ಈ ಸ್ಮಾರ್ಟ್‌ಫೋನ್‌ಗಳ ಮೇಲಿನ ಡಿಸ್ಕೌಂಟ್‌ ಮಿಸ್‌ ಮಾಡ್ಕೋಬೇಡಿ!

ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ ಇದೀಗ ಕೊನೆಯ ಹಂತದಲ್ಲಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸೇಲ್‌ಗೆ ಅಂತಿಮ ತೆರೆ ಬೀಳಲಿದೆ. ಈ ಸಮಯದಲ್ಲಿ ಅಮೆಜಾನ್‌ ಹಿಂದೆಂದಿಗಿಂತಲೂ ಹೆಚ್ಚಿನ ಆಫರ್‌ಗಳನ್ನು ಸ್ಮಾರ್ಟ್‌ಫೋನ್‌ಗಳ ಮೇಲೆ ನೀಡುತ್ತಿದೆ. ಅದರಲ್ಲೂ ಜನಪ್ರಿಯ ಬ್ರ್ಯಾಂಡ್‌ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌ ದೊರೆಯುತ್ತಿದೆ.

ಹೌದು, ಅಮೆಜಾನ್‌ ತಾಣದಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ ದೊರೆಯುತ್ತಿದೆ. ಇದರಲ್ಲಿ ಸ್ಯಾಮ್‌ಸಂಗ್‌, ಒಪ್ಪೋ, ಗೂಗಲ್‌, ಮೊಟೊರೊಲಾ, ರಿಯಲ್‌ಮಿ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳು ರಿಯಾಯಿತಿ ಪಡೆದುಕೊಂಡಿದೆ. ಜೊತೆಗೆ ಬ್ಯಾಂಕ್‌ ಆಫರ್‌ಗಳು ಕೂಡ ದೊರೆಯುತ್ತಿದ್ದು, ಅತಿ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್‌ ಖರೀದಿಸಬಹುದಾಗಿದೆ. ಹಾಗಾದ್ರೆ ಅಮೆಜಾನ್‌ ಸೇಲ್‌ನಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಈ ಸ್ಮಾರ್ಟ್‌ಫೋನ್‌ಗಳ ಮೇಲಿನ ಡಿಸ್ಕೌಂಟ್‌ ಮಿಸ್‌ ಮಾಡ್ಕೋಬೇಡಿ!

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌
ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ ಅಮೆಜಾನ್‌ ತಾಣದಲ್ಲಿ ವಿಶೇಷ ಆಫರ್‌ ಪಡೆದುಕೊಂಡಿದೆ. ಅಮೆಜಾನ್‌ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್‌ ಬ್ಯಾಂಕ್‌ ಆಫರ್‌ಗಳು ಹಾಗೂ ಡಿಸ್ಕೌಂಟ್‌ಗಳನ್ನು ಒಳಗೊಂಡಂತೆ ಕೇವಲ 17,999ರೂ ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ನಲ್ಲಿ ಆಕ್ಸಿಜನ್‌ OS 13.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಅಂತಿಮ ದಿನಗಳಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 ಸ್ಮಾರ್ಟ್‌ಫೋನ್‌ ಭರ್ಜರಿ ಡಿಸ್ಕೌಂಟ್‌ ಪಡೆದುಕೊಂಡಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ ಕೇವಲ 10,489ರೂ ಬೆಲೆಗೆ ಲಭ್ಯವಾಗುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ಆಧಾರಿತ OneUI 5 ನಲ್ಲಿ ರನ್‌ ಆಗಲಿದೆ. ಇದರ ಬೇಸ್‌ ಮಾಡೆಲ್‌ 4GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

ಈ ಸ್ಮಾರ್ಟ್‌ಫೋನ್‌ಗಳ ಮೇಲಿನ ಡಿಸ್ಕೌಂಟ್‌ ಮಿಸ್‌ ಮಾಡ್ಕೋಬೇಡಿ!

ಐಫೋನ್ 13
ಐಫೋನ್ 13 128 GB ಸ್ಟೋರೇಜ್‌ ಆಯ್ಕೆಯು ಇದೇ ಅಮೆಜಾನ್‌ ತಾಣದಲ್ಲಿ ಕೇವಲ 50,999ರೂ ಗಳಿಗೆ ಲಭ್ಯವಿದೆ. ಇನ್ನು ಐಫೋನ್ 13 ಫೋನ್‌ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್‌ ಹೊಂದಿದೆ. ಇದು A15 ಬಯೋನಿಕ್ ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸಲಿದೆ. ಜೊತೆಗೆ ಮ್ಯಾಗ್‌ಸೇಫ್‌ನೊಂದಿಗೆ ವೈರ್‌ಲೆಸ್ ಚಾರ್ಜಿಂಗ್ ಅನ್ನು ಹೊಂದಿದೆ.

ರೆಡ್ಮಿ 12 5G
ರೆಡ್ಮಿ 12 5G ಸ್ಮಾರ್ಟ್‌ಫೋನ್‌ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ ಪ್ರಯುಕ್ತ ಕೇವಲ 10,999ರೂ. ಬೆಲೆಗೆ ಲಭ್ಯವಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7 ಇಂಚಿನ FHD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 4 Gen 2 SoC ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸಲಿದೆ.

ರಿಯಲ್‌ಮಿ ನಾರ್ಜೊ 60X 5G
ರಿಯಲ್‌ಮಿ ನಾರ್ಜೊ 60X 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ ವಿಶೇಷ ಆಫರ್‌ ಪಡೆದುಕೊಂಡಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ನ 4GB RAM ಮತ್ತು 128GB ಸ್ಟೋರೇಜ್ ಆಯ್ಕೆಯು ನಿಮಗೆ ಕೇವಲ 10,999ರೂ. ಬೆಲೆಗೆ ಲಭ್ಯವಾಗುತ್ತಿದೆ. ಜೊತೆಗೆ ಇದು 33W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಸಹ ನೀಡಲಿದೆ.

ಈ ಸ್ಮಾರ್ಟ್‌ಫೋನ್‌ಗಳ ಮೇಲಿನ ಡಿಸ್ಕೌಂಟ್‌ ಮಿಸ್‌ ಮಾಡ್ಕೋಬೇಡಿ!

ಐಕ್ಯೂ ನಿಯೋ 7 ಪ್ರೊ
ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ ಭಾರಿ ರಿಯಾಯಿತಿ ಪಡೆದುಕೊಂಡಿದೆ. ಈ ಫೋನ್‌ನ 8GB RAM ಮತ್ತು 128 GB ಸ್ಟೋರೇಜ್‌ ಆಯ್ಕೆಯನ್ನು ನೀವು 32,999ರೂ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen 2SoC ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸಲಿದೆ. ಇದು 120W ವೇಗದ ಚಾರ್ಜಿಂಗ್ ಬೆಂಬಲಿಸಲಿದ್ದು, ಕೇವಲ 25 ನಿಮಿಷಗಳಲ್ಲಿ ಫೋನ್ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡಬಹುದು.

Best Mobiles in India

English summary
Best smartphone deals from Amazon Great Indian Festival final days: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+