ಸ್ಮಾರ್ಟ್‌ಫೋನ್ ಖರೀದಿಸಬೇಕೆ? ಇಲ್ಲಿವೆ ನೋಡಿ ನೀವು ಖರೀದಿಸಬಹುದಾದ ಬೆಸ್ಟ್ ಫೋನ್‌ಗಳು!
ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳ ಅಬ್ಬರ ಜೋರಾಗಿದೆ. ಕೈ ಗೆಟಕುವ ಬೆಲೆಯ ಸ್ಮಾರ್ಟ್‌ಫೋನ್‌ಗಳ(smartphones) ಜೊತೆಗೆ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ರಾರಾಜಿಸುತ್ತಿವೆ. ಇವುಗಳ ನಡುವೆ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳು ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದ್ದು, ಗ್ರಾಹಕರ ಕೈನಲ್ಲಿ ರಿಂಗಣಿಸುತ್ತಿವೆ.
ಹೌದು, ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳು ಅದರಲ್ಲೂ 25,000ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳು ಅತಿ ಹೆಚ್ಚು ಸೌಂಡ್ ಮಾಡುತ್ತಿವೆ. ಇದರಲ್ಲಿ ಜನಪ್ರಿಯ ಬ್ರ್ಯಾಂಡ್‌ಗಳಾದ ರೆಡ್ಮಿ, ಒನ್‌ಪ್ಲಸ್, ರಿಯಲ್‌ಮಿ, ಪೊಕೊ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ. ಹಾಗಾದ್ರೆ ಪ್ರಸ್ತುತ ದಿನಗಳಲ್ಲಿ 25,000ರೂ. ಒಳಗೆ ನೀವು ಖರೀದಿಸಬಹುದು ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G
ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G ಸ್ಮಾರ್ಟ್‌ಫೋನ್ ಕೇವಲ 19,999ರೂ.ಆರಂಭಿಕ ಬೆಲೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ಸೂಪರ್ ವೂಕ್ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರೆಡ್ಮಿ K50i 5G
ರೆಡ್ಮಿ K50i 5G ಸ್ಮಾರ್ಟ್‌ಫೋನ್ 25,000 ಕ್ಕಿಂತ ಕಡಿಮೆ ಬೆಲೆಯಲ್ಲಿ ನೀವು ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್‌ಫೋನ್ ಇದಾಗಿದೆ. ಈ ಸ್ಮಾರ್ಟ್‌ಫೋನ್ ಪ್ರಸ್ತುತ 20,999ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ. ಇನ್ನು ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್ ಎಲ್‌ಸಿಡಿ ಮಾದರಿಯ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8100 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ 5,080mAh ಬ್ಯಾಟರಿಯನ್ನು ಒಳಗೊಂಡಿದೆ.

ರಿಯಲ್‌ಮಿ 10ಪ್ರೊ+ 5G
ರಿಯಲ್‌ಮಿ 10 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ 6.7 ಇಂಚಿನ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. 25,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಇದು ಒಂದಾಗಿದೆ.
ಪೊಕೊ X5 ಪ್ರೊ 5G
ಪೊಕೊ X5 ಪ್ರೊ 5G ಕೂಡ 25,000ರೂ.ಕ್ಕಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾದ ಸ್ಮಾರ್ಟ್‌ಫೋನ್ ಎನಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಕ್ಸ್‌ಫಿನಿಟಿ ಅಮೋಲೆಡ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ISOCELL HM2 ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








