Home
ಸುದ್ದಿಜಾಲ

20,000ರೂ, ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳು!

ಸ್ಮಾರ್ಟ್‌ಫೋನ್‌ ಇಲ್ಲದೆ ಮನೆಯಿಂದ ಹೊರಗಡೆ ಹೋಗುವುದು ಅಸಾಧ್ಯ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಯುವಜನತೆ ಮಾತ್ರವಲ್ಲ ಎಲ್ಲಾ ವಯೋಮಾನದವರು ಕೂಡ ಇಂದು ಸ್ಮಾರ್ಟ್‌ಫೋನ್‌ ಪ್ರಿಯರಾಗಿದ್ದಾರೆ. ಅಷ್ಟೇ ಯಾಕೆ ಕೊರೊನಾ ವೈರಸ್‌ ಬಂದ ನಂತರ ಹೆಚ್ಚಿನ ಮಂದಿ ಆನ್‌ಲೈನ್‌ ಕ್ಲಾಸ್‌ಗಾಗಿ ಸ್ಮಾರ್ಟ್‌ಫೋನ್‌ಗಳನ್ನೇ ಬಳಸುತ್ತಿದ್ದಾರೆ. ಇನ್ನು ಟೆಕ್ನಾಲಜಿ ಮುಂದುವರೆದಂತೆ ಸ್ಮಾರ್ಟ್‌ಫೋನ್‌ಗಳ ಶೈಲಿ, ವಿನ್ಯಾಸ ಕೂಡ ಬದಲಾಗುತ್ತಲೇ ಇದೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹೊಸಮಾದರಿಯ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುತ್ತಲೇ ಇವೆ. ಹೊಸ ಕ್ಯಾಮೆರಾ, ನ್ಯೂ ಡಿಸ್‌ಪ್ಲೇ ಸ್ಟೈಲ್‌ ಬಳಕೆದಾರರ ಗಮನ ಸೆಳೆಯುತ್ತಿವೆ. ಇದರ ನಡುವೆ ಬೆಲೆಯ ವಿಚಾರದಲ್ಲೂ ಕೂಡ ಸ್ಮಾರ್ಟ್‌ಫೋನ್‌ಗಳು ಸಿಕ್ಕಾಪಟ್ಟೆ ಸಂಚಲನ ಸೃಷ್ಟಿಸುತ್ತಿವೆ. ಇನ್ನು ಹೆಚ್ಚಿನ ಜನರು ಬಜೆಟ್‌ ಬೆಲೆ ಹಾಗೂ ಮಧ್ಯಮ ಬೆಲೆಯ ಸ್ಮಾರ್ಟ್‌ಫೋನ್‌ಗಳ ಕಡೆಗೆ ಗಮನ ನೀಡುತ್ತಾರೆ. ಸದ್ಯ ಟೆಕ್‌ ಮಾರುಕಟ್ಟೆಯಲ್ಲಿ 20,000 ಬೆಲೆ ವಿಭಾಗದಲ್ಲಿ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಆಯ್ಕೆಯನ್ನು ಹೊಂದಿವೆ. ಹಾಗಾದ್ರೆ ಭಾರತದಲ್ಲಿ 20,000ರೂ, ಒಳಗೆ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ಲಭ್ಯವಾಗಲಿವೆ ಅನ್ನೊದನ್ನ ಈ ಲಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್

20,000ರೂ ಒಳಗಿನ ಸ್ಮಾರ್ಟ್‌ಫೋನ್‌ಗಳಲ್ಲಿ ಶಿಯೋಮಿ ರೆಡ್‌ಮಿ ನೋಟ್‌ 10 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಕೂಡ ಒಂದಾಗಿದೆ. ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ 6GB RAM ಮತ್ತು 128GB ಸ್ಟೋರೇಜ್ ಮಾದರಿ 19,999ರೂ, ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್ಫೋನ್ 108 ಮೆಗಾಪಿಕ್ಸೆಲ್ ಪ್ರೈಮರಿ ಕ್ಯಾಮೆರಾ ಒಳಗೊಂಡ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 732G ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಎಂಐಯುಐ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 5020mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಐಕ್ಯೂಒ Z3

ಐಕ್ಯೂಒ Z3

IQOO Z3 ಸ್ಮಾರ್ಟ್‌ಫೋನ್‌ 20,000ರೂ ಗಿಂತ ಕಡಿಮೆ ಬೆಲೆಯಲ್ಲಿ ದೊರೆಯುವ ಸ್ಮಾರ್ಟ್‌ಫೋನ್‌ ಆಗಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಹೊಂದಿದೆ. ಈ ಫೋನ್‌ 6.58-ಇಂಚಿನ ಫುಲ್‌-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128 GB ಆಯ್ಕೆಗೆ 19,990ರೂ ಬೆಲೆಯನ್ನು ಹೊಂದಿದೆ.

ಮೋಟೋ G60

ಮೋಟೋ G60

ಮೋಟೋ G60 20,000 ಕ್ಕಿಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇದು 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್‌ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6 GB RAM ಮತ್ತು 128 GB ಆಯ್ಕೆಗೆ 17,999ರೂ ಬೆಲೆಯನ್ನು ಹೊಂದಿದೆ.

ರಿಯಲ್‌ಮಿ 8 ಪ್ರೊ

ರಿಯಲ್‌ಮಿ 8 ಪ್ರೊ

ರಿಯಲ್‌ಮಿ 8 Pro 20,000ರೂ ಒಳಗಿನ ಸ್ಮಾರ್ಟ್‌ಫೋನ್‌ಗಳಲ್ಲಿ ಅತ್ಯುತ್ತಮ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಕೂಡ 108 ಮೆಗಾಪಿಕ್ಸೆಲ್‌ ಪ್ರೈಮರಿ ಕ್ಯಾಮೆರಾ ಒಳಗೊಂಡ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇನ್ನು ಈ ಫೋನ್‌ 6.4 ಇಂಚಿನ ಸೂಪರ್ ಅಮೊಲೇಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್ ಡ್ರಾಗನ್ 720G ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 50W ಸೂಪರ್ ಡಾರ್ಟ್ ಚಾರ್ಜರ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್‌ 6 GB RAM ಮತ್ತು 128 GB ಸಾಮರ್ಥ್ಯದ ಆಯ್ಕೆಗೆ 17,999ರೂ ಬೆಲೆಯನ್ನು ಹೊಂದಿದೆ.

ಇನ್ಫಿನಿಕ್ಸ್ ನೋಟ್ 10 ಪ್ರೊ

ಇನ್ಫಿನಿಕ್ಸ್ ನೋಟ್ 10 ಪ್ರೊ

ಇನ್ಫಿನಿಕ್ಸ್ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 16,999ರೂ ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 6.95-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ ಜಿ 95 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
The sub-Rs 20,000 price category is one that has plenty of smartphone options for consumers.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+