2021ರಲ್ಲಿ ಬಿಡುಗಡೆಯಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಪ್ರತಿವರ್ಷದಂತೆ 2021ರಲ್ಲಿಯೂ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಪ್ರಮುಖ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಾದ ಆಪಲ್‌ , ಸ್ಯಾಮ್‌ಸಂಗ್‌, ರಿಯಲ್‌ಮಿ, ಒನ್‌ಪ್ಲಸ್‌ ಕಂಪೆನಿಗಳು ತಮ್ಮ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಬಹು ನಿರೀಕ್ಷಿತ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಾಕಷ್ಟು ಸಂಚಲನವನ್ನು ಸೃಷ್ಟಿಸಿದರೆ, ಇನ್ನು ಕೆಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಾಕಷ್ಟು ನಿರಾಶೆಯನ್ನು ಸಹ ಉಂಟುಮಾಡಿವೆ.

ಸ್ಮಾರ್ಟ್‌ಫೋನ್‌ಗಳು

ಹೌದು, ಟೆಕ್‌ ವಲಯದಲ್ಲಿ 2021 ಪ್ರಮುಖವಾಗಿದೆ. ಕೊರೊನಾ ಆರ್ಭಟದ ನಡುವೆಯೂ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿವೆ. ಈ ವರ್ಷ ಬಿಡುಗಡೆಯಾದ ಸ್ಮಾರ್ಟ್‌ಫೋನ್‌ಗಳು ಅನೇಕ ಹೊಸ ಸುದಾರಣೆಗಳನ್ನು ಪಡೆದಿರೋದು ವಿಶೇಷ. ಹೊಸ ಮಾದರಿಯ ಪ್ರೊಸೆಸರ್‌, ಕ್ಯಾಮೆರಾ ವಿನ್ಯಾಸದ ಸ್ಮಾರ್ಟ್‌ಫೋನ್‌ಗಳು ಈ ವರ್ಷ ಸಾಕಷಗಟು ಗಮನ ಸೆಳೆದಿವೆ. ಹಾಗಾದ್ರೆ ಈ ವರ್ಷ ಬಿಡುಗಡೆಯಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಫೋನ್ 13 ಪ್ರೊ ಮ್ಯಾಕ್ಸ್‌

ಐಫೋನ್ 13 ಪ್ರೊ ಮ್ಯಾಕ್ಸ್‌

ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್‌ ಈ ವರ್ಷದ ಅತ್ಯುತ್ತಮ ಅಲ್ಟ್ರಾ ಪ್ರೀಮಿಯಂ ಫ್ಲ್ಯಾಗ್‌ಶಿಪ್ ಫೋನ್‌ ಆಗಿದೆ. ಇದು 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತಮ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್‌ ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ ಸಹ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಮ್ಯಾಕ್ಸ್‌ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್‌ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ನೈಟ್‌ ಮೋಡ್‌ ಆಯ್ಕೆ ಇದ್ದು, ಮಂದ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಬಹುದಾಗಿದೆ. ಹಾಗೆಯೇ ವಿಡಿಯೋಗಾಗಿ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಇದ್ದು, ಅತ್ಯುತ್ತಮ ವಿಡಿಯೋ ರೆಕಾರ್ಡ್‌ ಬೆಂಬಲಿಸಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 ಅಲ್ಟ್ರಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S21 ಅಲ್ಟ್ರಾ

ಈ ವರ್ಷ ಮಾರುಕಟ್ಟೆಗೆ ಎಂಟ್ರಿ ನೀಡಿದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಗ್ಯಾಲಕ್ಸಿ S21 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 1,440x3,200 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.8 ಇಂಚಿನ ಫುಲ್‌ ಎಡ್ಜ್‌ QHD+ ಪ್ಲಸ್‌ ಜೊತೆಗೆ ಡೈನಾಮಿಕ್ AMOLED ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ 120Hz ರೀಫ್ರೇಶ್ದ ರೇಟ್ ಅನ್ನು ಪಡೆದಿದ್ದು, HDR10+ ಬೆಂಬಲವನ್ನು ಒಳಗೊಂಡಿದೆ. ಇದು ಆಕ್ಟಾ ಕೋರ್ Exynos 2100 SoC (ಸ್ನ್ಯಾಪ್‌ಡ್ರಾಗನ್ 888) ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ OIS ಸಪೋರ್ಟ್‌ ಜೊತೆಗೆ 108ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z Fold 3

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z Fold 3

2021ರಲ್ಲಿ ಬಿಡುಗಡೆಯಾದ ಪ್ರಮುಖ ಸ್ಮಾರ್ಟ್‌ಫೋನ್‌ಗಳಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್ ಕೂಡ ಸೇರಿದೆ. ಇದು ಡ್ಯುಯಲ್ ಡಿಸ್‌ಪ್ಲೇ ರಚನೆಯನ್ನು ಹೊಂದಿದೆ. 7.6 ಇಂಚಿನ ಡೈನಾಮಿಕ್ AMOLED 2X ಇನ್ಫಿನಿಟಿ ಫ್ಲೆಕ್ಸ್ ಡಿಸ್ಪ್ಲೇ ಪಡೆದಿದ್ದು, 120Hz ರೀಫ್ರೇಶ್ ರೇಟ್ ಪಡೆದಿದೆ. ಡಿಸ್‌ಪ್ಲೇ ಅನುಪಾತವು 22.5:18 ಆಗಿದೆ. ಹಾಗೆಯೇ ಫೋನಿನ ಕವರ್‌ ಸ್ಕ್ರೀನ್ 6.2-ಇಂಚಿನ HD+ (832x2,268 ಪಿಕ್ಸೆಲ್‌ಗಳು) ಡೈನಾಮಿಕ್ AMOLED 2X ಡಿಸ್‌ಪ್ಲೇ 120Hz ರಿಫ್ರೆಶ್ ದರದಲ್ಲಿದೆ.ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI ಬೆಂಬಲಿತ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್ ಇದೆ. ಇನ್ನು ಈ ಫೋನ್ 12GB + 256GB ಮತ್ತು 12GB + 512GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಮೂರು ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸಲ್ ಸೆನ್ಸಾರ್‌ ಪಡೆದಿವೆ. ಇನ್ನು ಸೆಲ್ಫಿ ಕ್ಯಾಮೆರಾ (ಕವರ್‌ ಕ್ಯಾಮೆರಾ) 10 ಎಂಪಿ ಸೆನ್ಸಾರ್‌ನಲ್ಲಿದೆ.ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್ 4,400mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ 25W ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ.

ವಿವೋ X70 ಪ್ರೊ +

ವಿವೋ X70 ಪ್ರೊ +

ವಿವೋ X70 ಪ್ರೊ+ ಸ್ಮಾರ್ಟ್‌ಫೋನ್‌ 6.78-ಇಂಚಿನ ಅಲ್ಟ್ರಾ-HD AMOLED ಡಿಸ್‌ಪ್ಲೇ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಹೊಂದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಅಲ್ಟ್ರಾ ವೈಡ್ ಆಂಗಲ್ ಸೆನ್ಸರ್ , ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಸೆನ್ಸರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಒನ್‌ಪ್ಲಸ್‌ 9 ಪ್ರೊ

ಒನ್‌ಪ್ಲಸ್‌ 9 ಪ್ರೊ

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 1,440x3,216 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್‌ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ.

Best Mobiles in India

English summary
Here are the best smartphones launched throughout 2021.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X