ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಎಲ್ಲರ ಜೀವನದಲ್ಲೂ ಅವಶ್ಯಕ ಎನಿಸುವಂತೆ ಆಗಿದೆ. ಸ್ಮಾರ್ಟ್‌ಫೋನ್‌ ಇಲ್ಲದೆ ಮನೆಯಿಮದ ಹೊರ ಹೋಗುವುದು ಅಸಾಧ್ಯ ಎನಿಸುವುದು ಉಂಟೂ. ಅಷ್ಟರ ಮಟ್ಟಿಗೆ ಸ್ಮಾರ್ಟ್‌ಫೋನ್‌ ಇಂದು ಎಲ್ಲರನ್ನೂ ಆವರಿಸಿಕೊಂಡು ಬಿಟ್ಟಿದೆ. ಇನ್ನು ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸಾಕಷ್ಟು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಹಾಗಂತ ಎಲ್ಲರೂ ಕೂಡ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸಲು ಸಾಧ್ಯವಿಲ್ಲ. ಬಹುತೇಕರು ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಸ್ಮಾರ್ಟ್‌ಫೋನ್‌ಗಳನ್ನ ಖರೀದಿಸಲು ಮುಂದಾಗುತ್ತಾರೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಬಜೆಟ್‌ ಬೆಲೆಯಿಂದ ಹಿಡಿದು ಹೈ ಎಂಡ್‌ ಮಾದರಿಯವರೆಗೂ ಲಭ್ಯವಿವೆ. ಆದರೆ ಎಲ್ಲರೂ ಹೈ ಬಜೆಟ್‌ ಸ್ಮಾರ್ಟ್‌ ಖರೀದಿಸಲು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಹೆಚ್ಚಿನ ಜನರು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಖರೀದಿಸಲು ಮುಂದಾಗುತ್ತಾರೆ. ಹಾಗಾದ್ರೆ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿರುವ ಬಜೆಟ್‌ ಬೆಲೆಯಲ್ಲಿ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ C15

ರಿಯಲ್‌ಮಿ C15

ರಿಯಲ್‌ಮಿ C15 ಸ್ಮಾರ್ಟ್‌ಫೋನ್‌ 6.5- ಇಂಚಿನ ಹೆಚ್‌ + ಎಲ್ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 4GB RAM ಮತ್ತು 64 GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8MP, ಮೂರನೇ ಕ್ಯಾಮೆರಾ 2MP ಮತ್ತು ನಾಲ್ಕನೇ ಕ್ಯಾಮೆರಾ 2MP ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದು 6000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರ ಬೆಲೆ 9,999 ರೂ ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M01

ಸ್ಯಾಮ್‌ಸಂಗ್ ಗ್ಯಾಲಕ್ಸಿ M01

ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್‌ 5.7 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾನ್‌ 439 ಪ್ರೊಸೆಸರ್‌ ಅನ್ನು ಹೊಂದಿದೆ. ಹಾಗೇಯೆ 3GB RAM+32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಮದಿದೆ. ಇದಲ್ಲದೆ 512GB ವರೆಗೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ. ಇದು 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ 8,499 ರೂ ಆಗಿದೆ.

ರಿಯಲ್‌ಮಿ ನಾರ್ಜೊ 20A

ರಿಯಲ್‌ಮಿ ನಾರ್ಜೊ 20A

ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ನಲ್ಲಿ 8,499 ರೂ.ಗಳ ಬೆಲೆಯಲ್ಲಿ ಲಭ್ಯವಾಗಲಿದೆ. ಇದು 6.5 ಇoಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 665 ಪ್ರೊಸೆಸರ್ ಅನ್ನು ಹೊಂದಿದೆ. ಇದು 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಒಳಗೊಂಡಿದೆ.

ಪೊಕೊ C3

ಪೊಕೊ C3

ಇನ್ನು ಇತ್ತೀಚಿಗಷ್ಟೇ ಬಿಡುಗಡೆಯಾದ ಪೊಕೊ C3 ಬೇಸ್ ವೇರಿಯಂಟ್‌ ಸ್ಮಾರ್ಟ್‌ಫೋನ್‌ ಕೂಡ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಸದ್ಯ 7,499 ರೂ.ಗಳ ಬೆಲೆಯಲ್ಲಿ ಲಭ್ಯವಾಗಲಿದೆ. ಇದು 6.53 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಆಗಿದ್ದು, 5000 mAh ಬ್ಯಾಟರಿ ಸಾಮರ್ಥ್ಯವನ್ನು ಒಳಗೊಂಡಿದೆ.

ರೆಡ್ಮಿ 9 ಪ್ರೈಮ್

ರೆಡ್ಮಿ 9 ಪ್ರೈಮ್

ರೆಡ್ಮಿ 9 ಪ್ರೈಮ್ 4GB RAM ಮತ್ತು 64GB ಸಂಗ್ರಹ ಸಾಮರ್ಥ್ಯದ ಬೇಸ್‌ ಮಾಡೆಲ್‌ ಸ್ಮಾರ್ಟ್‌ಫೋನ್‌ ಸದ್ಯ ಭಾರತದಲ್ಲಿ 9,999 ರೂ. ಗಳಿಗೆ ಲಭ್ಯವಾಗಲಿದೆ. 6.5-ಇಂಚಿನ ಡಿಸ್‌ಪ್ಲೇ ಹೊಂದಿರುವ ಈ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್ ಶೈಲಿಯ ನಾಚ್,ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, 5020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ.

ರೆಡ್ಮಿ 9A

ರೆಡ್ಮಿ 9A

ಶಿಯೋಮಿಯ ರೆಡ್‌ಮಿ 9A ಸ್ಮಾರ್ಟ್‌ಫೋನ್‌ ರೆಡ್ಮಿ 9-ಸರಣಿಯಲ್ಲಿ 10,000 ರೂ ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇದೀಗ ಈ ಸ್ಮಾರ್ಟ್‌ಫೋನ್‌ ಬೆಲೆ 6,799 ರೂ, ಆಗಿದೆ. ಜೊತೆಗೆ ನೀವು ಬ್ಯಾಂಕ್ ಕಾರ್ಡ್‌ ಬಳಸಿ ಖರೀದಿಸದರೆ ಕ್ಯಾಶ್‌ಬ್ಯಾಕ್ ಮತ್ತು ರಿಯಾಯಿತಿಯನ್ನು ಸಹ ಪಡೆಯಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.53-ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಮಿಡಿಯಾ ಟೆಕ್‌ ಹಿಲಿಯೊ G25 ಪ್ರೊಸೆಸರ್ ಅನ್ನು ಒಳಗೊಂಡಿದೆ.

ಮೊಟೊರೊಲಾ ಮೋಟೋ G9

ಮೊಟೊರೊಲಾ ಮೋಟೋ G9

ಮೋಟೋ G9 ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ನಲ್ಲಿ 9,999 ರೂಗಳಿಗೆ ಮಾರಾಟವಾಗುತ್ತಿದೆ. ಅಲ್ಲದೆ ನೀವು ಬ್ಯಾಂಕ್ ಕಾರ್ಡ್ ಬಳಸಿ ಖರೀದಿಸಿದರೆ ಇನ್ನೂ ಕಡಿಮೆ ಬೆಲೆಯಲ್ಲಿ ಖರೀದಿಸುವ ಅವಕಾಶವನ್ನು ಸಹ ನಿಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 662 ಪ್ರೊಸೆಸರ್ ಹೊಂದಿದ್ದು, ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ.

Best Mobiles in India

English summary
best smartphones to buy priced under rs 10-000 in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X