ದೀಪಾವಳಿ ಪ್ರಯುಕ್ತ 25,000 ರೂ ಒಳಗೆ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!
ಭಾರತದಲ್ಲಿ ದೀಪಾವಳಿ ಜನಪ್ರಿಯ ಹಬ್ಬಗಳಲ್ಲಿ ಒಂದಾಗಿದೆ. ಇನ್ನು ಈ ಭಾರಿ ದೀಪಾವಳಿಯ ಮುಂಚೆಯೇ ವ್ಯಾಪಕ ಶ್ರೇಣಿಯ ಗ್ಯಾಜೆಟ್‌ಗಳಲ್ಲಿ ಹಲವಾರು ಮಾರಾಟ ಮತ್ತು ಕೊಡುಗೆಗಳು ಲಭ್ಯವಿದೆ. ಅದರಲ್ಲೂ ಸ್ಮಾರ್ಟ್‌ಫೋನ್‌ಗಳನ್ನ ಖರೀದಿಸಲು ಶಾಪಿಂಗ್ ಮಾಡಲು ಇದು ಉತ್ತಮ ಸಮಯವಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ವೈವಿಧ್ಯಮಯ ಫೀಚರ್ಸ್ ಒಳಗೊಂಡ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಸದ್ಯ ಹಬ್ಬದ ಸಂಭ್ರಮವನ್ನು ಇನ್ನಷ್ಟು ಇಮ್ಮಡಿಗೊಳಿಸಲು ಹೊಸ ಸ್ಮಾರ್ಟ್‌ಫೋನ್ ಖರೀದಿಸುವುದಾದರೆ ಹೊಸ ಆಯ್ಕೆಯ ಸ್ಮಾರ್ಟ್‌ಫೋನ್‌ಗಳನ್ನ ಕಾಣಬಹುದಾಗಿದೆ.

ಹೌದು, ದೀಪಾವಳಿ ಸಂಭ್ರಮದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿ ಮಾಡುವವರಿಗೆ ಇದು ಉತ್ತಮ ಅವಕಾಶ ಸಿಕ್ಕಿದೆ. ಹಲವು ಹೊಸ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿದ್ದು, ಹಬ್ಬದ ಸಮಯದಲ್ಲಿ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನು ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಮತ್ತು ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್‌ಗಳ ಕಡೆಗೂ ಹೆಚ್ಚಿನ ಗಮನವನ್ನ ಸ್ಮಾರ್ಟ್‌ಫೋನ್ ಪ್ರಿಯರು ನೀಡುತ್ತಾರೆ. ಹಾಗಾದ್ರೆ ದೀಪಾವಳಿ ಸಮಯದಲ್ಲಿ 25,000ರೂ ಒಳಗೆ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ತಿಳಿದುಕೊಳ್ಳೋಣ ಬನ್ನಿರಿ.

ವಿವೋ v20
ವಿವೋ V20 ಸ್ಮಾರ್ಟ್‌ಫೋನ್ 25 ಸಾವಿರ ರೂ.ಗಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೀಗ 24,999 ರೂ.ಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ 6.44 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 720G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11 ರೊಂದಿಗೆ ಕಾರ್ಯನಿರ್ವಹಿಸಲಿದೆ. ಇದರ ಬೇಸ್ ಮಾಡೆಲ್ 8GB+128GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ವಿವೋ V20 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.

ವಿವೋ V20se
ವಿವೋ V20 SE ಸ್ಮಾರ್ಟ್‌ಫೋನ್ 6.44-ಇಂಚಿನ ಪೂರ್ಣ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು,ಆಂಡ್ರಾಯ್ಡ್ 10 ಓಎಸ್ ಬೆಂಬಲವನ್ನು ಪಡೆದುಕೊಂಡಿದೆ.ಇನ್ನು ಈ ಫೋನ್ 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಅಲ್ಲದೆ 4,100mAh ಬ್ಯಾಕ್‌ಅಪ್ ಜೊತೆಗೆ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ. ಸದ್ಯ ಇದರ ಬೆಲೆ 20,990 ರೂ, ಆಗಿದೆ.

ಪೊಕೊ x3
ಪೊಕೊ X3 ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್‌ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಮತ್ತು ಸ್ನಾಪ್ಡ್ರಾಗನ್ 732G SoC ಅನ್ನು ಹೊಂದಿದೆ. ಇನ್ನು ಪೊಕೊ X3 ಸ್ಮಾರ್ಟ್‌ಫೋನ್ 6GB RAM +64GB ಮತ್ತು 6GB RAM +128GGB ಸ್ಟೋರೇಜ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜರ್ ಬಳಸಿ ಚಾರ್ಜ್ ಮಾಡಬಹುದಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ 6GB RAM +64GB ಸ್ಟೋರೇಜ್ ಸಾಮರ್ಥ್ಯದ ಬೆಲೆ 16,999 ರೂ ಹಾಗೂ 6GB RAM +128GGB ಸ್ಟೋರೇಜ್ ಆಯ್ಕೆಯ ಸ್ಮಾರ್ಟ್‌ಫೋನ್ ಬೆಲೆ 18,499 ರೂ ಆಗಿದೆ.

ರಿಯಲ್‌ಮಿ 7 ಪ್ರೊ
ರಿಯಲ್ ಮಿ 7 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ರೆಸಲ್ಯೂಶನ್ ಜೊತೆಗೆ 6.4-ಇಂಚಿನ ಪೂರ್ಣ-ಹೆಚ್‌ಡಿ ಪ್ಲಸ್ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಫೋನ್ ಆಕ್ಟಾ-ಕೋರ್ ಸ್ನ್ಯಾಪ್‌ಡ್ರಾಗನ್ 720G SoC ಪ್ರೊಸೆಸರ್ ಅನ್ನು ಹೊಂದಿದ್ದು, ಜೊತೆಗೆ 6GB RAM+128GB ಸ್ಟೋರೇಜ್ ಅನ್ನು ಹೊಂದಿದೆ. ರಿಯಲ್ ಮಿ 7 ಪ್ರೊ ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4500mAh ಬ್ಯಾಟರಿಯನ್ನು ಪಡೆದಿದ್ದು, 65W ಸೂಪರ್ ಡಾರ್ಟ್ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಇದರ ಬೆಲೆ ರೂ. 19,999,ಆಗಿದೆ.

ರೆಡ್ಮಿ ನೋಟ್ 9 ಪ್ರೊ ಮ್ಯಾಕ್ಸ್
ರೆಡ್ಮಿ ನೋಟ್ 9 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.67 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 720G ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10ಒಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಈ ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರ ಬೆಲೆ 18,999.ರೂ,ಆಗಿದೆ.


Click it and Unblock the Notifications








