Home
ಸುದ್ದಿಜಾಲ

ಏಪ್ರಿಲ್‌ನಲ್ಲಿ 10,000 ರೂ.ಒಳಗೆ ಬೆಲೆಯಲ್ಲಿ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆ ಇದೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಇನ್ನು ಬಜೆಟ್‌ ಬೆಲೆಯಿಂದ ಹಿಡಿದು ಹೈ ಎಂಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಗ್ರಾಹಕರು ಕೂಡ ಹೆಚ್ಚಿನ ಪ್ರಮಾಣದಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳ ಕಡೆಗೆ ಆಸಕ್ತಿ ವಹಿಸುತ್ತಾರೆ. ಇದರಿಂದ ಪ್ರತಿ ದಿನವೂ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳ ಭರಾಟೆಯನ್ನು ನೋಡಬಹುದಾಗಿದೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಇತ್ತೀಚಿನ ದಿನಗಳಲ್ಲಿ ಎಲ್ಲರ ಅಗತ್ಯದ ಡಿವೈಸ್‌ ಆಗಿದೆ. ಇದೇ ಕಾರಣಕ್ಕೆ ಪ್ರತಿಯೊಬ್ಬರೂ ಮೊಬೈಲ್‌ ಹೊಂದುವುದಕ್ಕೆ ಬಯಸುತ್ತಾರೆ. ಇನ್ನು ಮಾರುಕಟ್ಟೆಯಲ್ಲಿ ಗ್ರಾಹಕರ ಅಗತ್ಯಕ್ಕೆ ತಕ್ಕಂತೆ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಕಾಣಬಹುದಾಗಿದೆ. ಇದರಲ್ಲಿ ನೀವು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಬಯಸುವುದಾದರೆ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಲಭ್ಯವಿವೆ. ಇನ್ನು ಏಪ್ರಿಲ್‌ ತಿಂಗಳಲ್ಲಿಯೂ ಕೂಡ ಬಜೆಟ್‌ ಬೆಲೆಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಿವೆ. ಹಾಗಾದ್ರೆ 10,000 ರೂ ಒಳಗೆ ಈ ತಿಂಗಳಲ್ಲಿ ನೀವು ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ 9 ಪ್ರೈಮ್

ರೆಡ್ಮಿ 9 ಪ್ರೈಮ್

ಏಪ್ರಿಲ್‌ ತಿಂಗಳಲ್ಲಿ 10,000 ರೂ ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳಲ್ಲಿ ರೆಡ್ಮಿ 9 ಪ್ರೈಮ್ ಅತ್ಯುತ್ತಮ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ 6.53-ಇಂಚಿನ ಫುಲ್‌-ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಹಿಲಿಯೊ ಜಿ80 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌, ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಇಮೇಜ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಜೊತೆಗೆ ಇದು 5020mAh ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ 10,000ರೂ ಆಗಿದೆ.

ಮೋಟೋ G10 ಪವರ್

ಮೋಟೋ G10 ಪವರ್

ಮೋಟೋ G10 ಪವರ್ ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 460 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದು ಕ್ವಾಡ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 6000 ಎಂಎಹೆಚ್ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ 9,999 ರೂ ಬೆಲೆಯನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ 30A

ರಿಯಲ್‌ಮಿ ನಾರ್ಜೊ 30A

ರಿಯಲ್‌ಮಿ ನಾರ್ಜೊ 30A ಸ್ಮಾರ್ಟ್‌ಫೋನ್ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 570 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹಿಲಿಯೊ ಜಿ85 ಆಕ್ಟಾ-ಕೋರ್ ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದು 3GB RAM + 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಡ್ಯುಯಲ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 6000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 18W ಕ್ವಿಕ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇದರ ಬೆಲೆ 8,499 ರೂ ಹೊಂದಿದೆ.

ಇನ್ಫಿನಿಕ್ಸ್ ಸ್ಮಾರ್ಟ್ 4 ಪ್ಲಸ್

ಇನ್ಫಿನಿಕ್ಸ್ ಸ್ಮಾರ್ಟ್ 4 ಪ್ಲಸ್

ಇನ್ಫಿನಿಕ್ಸ್ ಸ್ಮಾರ್ಟ್ 4 ಪ್ಲಸ್ ಸ್ಮಾರ್ಟ್‌ಫೋನ್‌ 6.82-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಹೆಲಿಯೊ ಎ 22 ಆಕ್ಟಾ-ಕೋರ್ ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಕಾರ್ಯನಿರ್ವಹಿಸಲಿದೆ. ಅಲ್ಲದೆ ಇದು ಡ್ಯುಯಲ್-ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

Best Mobiles in India

English summary
Best smartphones to buy under Rs 10,000 this April.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+