ಸ್ಮಾರ್ಟ್‌ಫೋನ್ ಖರೀದಿಸಬೇಕೆ? 15,000 ರೂ ಒಳಗಿನ ಬೆಸ್ಟ್ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ!
ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳ ಎಂಟ್ರಿ ನಿರಂತರವಾಗಿದೆ. ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಎಂಟ್ರಿ ಆದಂತೆ ಸ್ಮಾರ್ಟ್‌ಫೋನ್ ಪ್ರಿಯರಿಗೆ ಹೆಚ್ಚಿನ ಆಯ್ಕೆಗಳು ಲಭ್ಯವಾಗುತ್ತಿವೆ. ಇನ್ನು ಕೆಲವು ಬ್ರ್ಯಾಂಡ್‌ಗಳು ತಮ್ಮ ವಿಭಿನ್ನ ಸ್ಮಾರ್ಟ್‌ಫೋನ್‌ಗಳ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿಸಿವೆ.
ಹೌದು, ಪ್ರಸ್ತುತ ತಿಂಗಳಿನಲ್ಲಿಯೂ ಅನೇಕ ಸ್ಮಾರ್ಟ್‌ಫೋನ್‌ಗಳು ಸಂಚಲನ ಮೂಡಿಸಿವೆ. ಇದರಲ್ಲಿ ಮಿಡ್‌ರೇಂಜ್ ಪ್ರೈಸ್‌ಟ್ಯಾಗ್ ಸ್ಮಾರ್ಟ್‌ಫೋನ್‌ಗಳು ಭಾರಿ ಬೇಡಿಕೆ ಪಡೆದುಕೊಂಡಿವೆ. ಸೆಪ್ಟೆಂಬರ್ ತಿಂಗಳಿನಲ್ಲಿಯೂ ನವೀನ ಮಾದರಿಯ ಸ್ಮಾರ್ಟ್‌ಫೋನ್‌ಗಳು ನಿಮಗೆ ಲಭ್ಯವಾಗಲಿವೆ. ಹಾಗಾದ್ರೆ ಪ್ರಸ್ತುತ ಮಾರುಕಟ್ಟೆಯಲ್ಲಿ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಸ್ಯಾಮ್‌ಸಂಗ್ ಎಕ್ಸಿನೋಸ್ 1330 ಆಕ್ಟಾ ಕೋರ್ SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ. 6000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ರೆಡ್ಮಿ 12 5G
ರೆಡ್ಮಿ 12 5G ಸ್ಮಾರ್ಟ್‌ಫೋನ್ 6.79 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಬೆಂಬಲವನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಆಯ್ಕೆ ಪಡೆದುಕೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದರ ಬೇಸ್ ಮಾಡೆಲ್ 4GB RAM + 128GB ಇಂಟರ್ ಸ್ಟೋರೇಜ್ ರೂಪಾಂತರದ ಆಯ್ಕೆಗೆ 10,999 ಬೆಲೆಯನ್ನು ಪಡೆದುಕೊಂಡಿದೆ.
ಪೊಕೊ M6 ಪ್ರೊ 5G
ಪೊಕೊ M6 ಪ್ರೊ 5G ಸ್ಮಾರ್ಟ್‌ಫೋನ್ 6.79 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇನ್ನು ಡಿಸ್‌ಪ್ಲೇ 2460 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಆಯ್ಕೆ ಪಡೆದುಕೊಂಡಿದೆ. ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದೆ.
ಐಕ್ಯೂ Z6 ಲೈಟ್ 5G
ಐಕ್ಯೂ Z6 ಲೈಟ್ 5G ಸ್ಮಾರ್ಟ್‌ಫೋನ್ 6.58 ಇಂಚಿನ ಎಲ್‌ಸಿಡಿ ಡಿಸ್ಪ್ಲೇ ಹೊಂದಿದೆ. ಇನ್ನು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 4 Gen 1 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಫೋನ್ 4 GB + 64 GB ಮತ್ತು 6 GB + 128 GB ಸ್ಟೋರೇಜ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.


Click it and Unblock the Notifications








