ಭಾರತದಲ್ಲಿ 25,000 ರೂ. ಒಳಗೆ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!
ಸ್ಮಾರ್ಟ್‌ಫೋನ್ ಇಲ್ಲದೆ ಸಮಯ ಕಳೆಯುವುದಕ್ಕೂ ಆಗುವುದಿಲ್ಲ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಬಜೆಟ್ ಬೆಲೆಯಿಂದ ಹಿಡಿದು ಹೈ ಎಂಡ್ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ನಾವಿಂದು ಮಾರುಕಟ್ಟೆಯಲ್ಲಿ ಕಾಣಬಹುದಾಗಿದೆ. ಅದರಲ್ಲೂ ಹೆಚ್ಚಿನ ಜನರು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳ ಕಡೆಗೆ ಹೆಚ್ಚಿನ ಗಮನ ನೀಡುತ್ತಾರೆ.

ಹೌದು, ಮಾರುಕಟ್ಟೆಯಲ್ಲಿ ವೈವಿಧ್ಯಮಯ ಬೆಲೆಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಸದ್ಯ ಹೆಚ್ಚಿನ ಜನರು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳ ಕಡೆಗೆ ಆಸಕ್ತಿ ವಹಿಸುತ್ತಿದ್ದಾರೆ. ನೀವು ಬಜೆಟ್ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುವುದಾದರೆ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಇನ್ನು ಮಾರುಕಟ್ಟೆಯಲ್ಲಿ 25,000 ರೂ ಒಳಗೆ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳು ದೊರೆಯಲಿವೆ. ಹಾಗಾದ್ರೆ ನಿವು 25,000 ರೂ ಒಳಗೆ ಖರಿದಿಸಬಹುದಾದ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೋಟೋ G 5G
ಮೋಟೋ G 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750 G SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಮೋಟೋ G 5G ಸ್ಮಾರ್ಟ್‌ಫೋನ್ ಭಾರತದಲ್ಲಿ 20,999 ರೂ. ಬೆಲೆಯನ್ನು ಹೊಂದಿದೆ.

ವಿವೋ V20
ವಿವೋ V20 ಸ್ಮಾರ್ಟ್‌ಫೋನ್ ಭಾರತದಲ್ಲಿ 24,990 ರೂ.ಬೆಲೆಯನ್ನು ಹೊಂದಿದೆ. ಇದು 6.44-ಇಂಚಿನ ಫುಲ್-ಹೆಚ್ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 720G ಪ್ರೊಸೆಸರ್ ಅನ್ನು ಹೊಂದಿದೆ. ಇದು ವಿವೋ V20 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 44 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಡ್ಯುಯಲ್-ವ್ಯೂ ವಿಡಿಯೋ, ಸ್ಲೊ-ಮೊ ಸೆಲ್ಫಿ ವಿಡಿಯೋ, ಮತ್ತು ಮಲ್ಟಿ-ಸ್ಟೈಲ್ ಪೋರ್ಟ್ರೇಟ್ ಅನ್ನು ಹೊಂದಿದೆ. ಜೊತೆಗೆ 4000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M51
ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ ಪ್ರಸ್ತುತ 6GB RAM ರೂಪಾಂತರಕ್ಕೆ 22,999 ರೂ. ಬೆಲೆಯನ್ನು ಹೊಂದಿದೆ. ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಸೂಪರ್ sAMOLED ಇನ್‌ಫಿನಿಟಿ O ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ಹೊಂದಿದ್ದು, ಒನ್UI ಜೊತೆ ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ ಇದು ಬೃಹತ್ ಗಾತ್ರದ 7000mAh ಬ್ಯಾಟರಿಯನ್ನು ಹೊಂದಿದೆ.

ಮಿ 10i
ಶಿಯೋಮಿ ಮಿ 10i ಈ ವರ್ಷ ಬಿಡುಗಡೆಯಾದ ಶಿಯೋಮಿ ಕಂಪನಿಯ ಮೊದಲ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ 20,999 ರೂ.ಗಳ ಆರಂಭಿಕ ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G ಪ್ರೊಸೆಸರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು 4820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಪೊಕೊ X3
ಪೊಕೊ X3 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್, ಸ್ಲಿಮ್ ಬೆಜೆಲ್ ಡಿಸ್‌ಪ್ಲೇ ವಿನ್ಯಾಸ ಮತ್ತು ಆಕ್ಟಾ-ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. ಇದು ಪ್ರಸ್ತುತ 14,999 ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.


Click it and Unblock the Notifications