Home
ಸುದ್ದಿಜಾಲ

ಈ ಸ್ಮಾರ್ಟ್‌ಫೋನ್‌ಗಳ ಬೆಲೆ ಅತಿ ಕಡಿಮೆ! ಆದರೆ ಫೀಚರ್ಸ್‌ ಮಾತ್ರ ಅದ್ಭುತ!

ಇದು ಸ್ಮಾರ್ಟ್‌ಫೋನ್‌ ಜಮಾನ, ಸ್ಮಾರ್ಟ್‌ಫೋನ್‌ ಇಲ್ಲದೇ ಹೋದರೆ ದಿನವೇ ಕಳೆಯುವುದಿಲ್ಲ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ದಿನಕಳೆದಂತೆ ಸ್ಮಾರ್ಟ್‌ಫೋನ್‌ಗಳು ನಮ್ಮ ದೈನಂದಿನ ಜೀವನ ಅವಿಭಾಜ್ಯ ಅಂಗವಾಗಿ ಹೋಗಿದೆ. ಇದಕ್ಕೆ ಅನುಗುಣವಾಗಿ ಮಾರುಕಟ್ಟೆಯಲ್ಲಿ ಕೂಡ ಹಲವು ಬೆಲೆ ವಿಭಾಗಗಳಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದಾಗಿದೆ.

ಹೌದು, ಸ್ಮಾರ್ಟ್‌ಫೋನ್‌ ಖರೀದಿಸುವಾಗ ಬೆಲೆ ಕೂಡ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರಸ್ತುತ ಹೆಚ್ಚಿನ ಜನರು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಾಮುಖ್ಯತೆ ನೀಡುತ್ತಾರೆ. ಇದೇ ಕಾರಣಕ್ಕೆ ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳು ಕೂಡ ಬಜೆಟ್‌ ಬೆಲೆಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಹಾಗಾದ್ರೆ ಕೈ ಗೆಟಕುವ ಬೆಲೆಯಲ್ಲಿ ನೀವು ಖರೀದಿಸಬಹುದಾದ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಈ ಸ್ಮಾರ್ಟ್‌ಫೋನ್‌ಗಳ ಬೆಲೆ ಅತಿ ಕಡಿಮೆ! ಆದರೆ ಫೀಚರ್ಸ್‌ ಮಾತ್ರ ಅದ್ಭುತ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್‌ ಕೈ ಗೆಟಕುವ ಬೆಲೆಯಲ್ಲಿ ಲಭ್ಯವಾಗುವ ಅತ್ಯುತ್ತಮ ಆಯ್ಕೆಗಳಲ್ಲಿ ಒಂದೆನಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 9,299ರೂ. ಆಗಿದೆ.

ಪೊಕೊ C55

ಪೊಕೊ C55 ಸ್ಮಾರ್ಟ್‌ಫೋನ್‌ 9,499ರೂ. ಬೆಲೆಯಲ್ಲಿ ಲಭ್ಯವಾಗುವ ಅತ್ಯುತ್ತಮ ಆಯ್ಕೆಯಾಗಿದೆ. ಇನ್ನು ಈ 6.71 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G85 ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಬೆಂಬಲಿಸಲಿದೆ.

ಈ ಸ್ಮಾರ್ಟ್‌ಫೋನ್‌ಗಳ ಬೆಲೆ ಅತಿ ಕಡಿಮೆ! ಆದರೆ ಫೀಚರ್ಸ್‌ ಮಾತ್ರ ಅದ್ಭುತ!

ಮೊಟೊ E13

ಮೊಟೊ E13 ಸ್ಮಾರ್ಟ್‌ಫೋನ್‌ ಅನ್ನು ನೀವು ಕೇವಲ 6,999ರೂ.ಬೆಲೆಯಲ್ಲಿ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸಾಕ್ T606 (Unisoc T606) ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಪಡೆದಿದೆ. ಅದು 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ದಲ್ಲಿ ಇದ್ದು, ಎಲ್‌ಇಡಿ ಫ್ಲ್ಯಾಷ್‌ ಅನ್ನು ಸಹ ಪಡೆದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ 9,499ರೂ. ಬೆಲೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ P35SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13MP ಸೆನ್ಸಾರ್‌ ಒಳಗೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಈ ಸ್ಮಾರ್ಟ್‌ಫೋನ್‌ಗಳ ಬೆಲೆ ಅತಿ ಕಡಿಮೆ! ಆದರೆ ಫೀಚರ್ಸ್‌ ಮಾತ್ರ ಅದ್ಭುತ!

ಟೆಕ್ನೋ ಪಾಪ್‌ 7 ಪ್ರೊ

ಟೆಕ್ನೋ ಪಾಪ್‌ 7 ಪ್ರೊ ನೀವು ಅತಿ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ ಎನಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ಕೇವಲ 6,799ರೂ.ಆಗಿದೆ. ಇನ್ನು ಸ್ಮಾರ್ಟ್‌ಫೋನ್‌ 6.65 ಇಂಚಿನ HD+ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ A22 ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸಲಿದೆ.

Best Mobiles in India

English summary
If you are on a tight budget and are looking for a smartphone under Rs 10,000 There are some new options. know more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+