Home
ಸುದ್ದಿಜಾಲ

ಆಕ್ಟೋಬರ್‌ನಲ್ಲಿ 15,000ರೂ. ಒಳಗೆ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆ ಇದೆ. ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಪ್ರತಿನಿತ್ಯವೂ ಹೊಸ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುತ್ತಲೇ ಇವೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್‌ ಕಂಪೆನಿಗಳು ಕೂಡ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಲೇ ಬಂದಿವೆ. ಇವುಗಳಲ್ಲಿ ಬಜೆಟ್‌ ಬೆಲೆಯಿಂದ ಹಿಡಿದು ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ. ಅದರೂ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನು ಆಕರ್ಷಸುತ್ತಲೇ ಬಂದಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವಿಧ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಕಾಣಬಹುದಾಗಿದೆ. ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೂ ಬೇಡಿ ಇದ್ದೆ ಇದೆ. ಆದರಿಂದ ಕೈ ಗೆಟಕುವ ಬೆಲೆಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹೆಚ್ಚು ಹೆಚ್ಚು ಸೌಂಡ್‌ ಮಾಡುತ್ತಿವೆ. ಸದ್ಯ ಆಕ್ಟೋಬರ್‌ ತಿಂಗಳಿನಲ್ಲಿಯೂ ಕೂಡ ಬಜೆಟ್‌ ಬೆಲೆ ಸ್ಮಾರ್ಟ್‌ಫೋನ್‌ಗಳು ಮಾರುಕ್ಟೆಯಲ್ಲಿ ಸಚಲನ ಸೃಷ್ಟಿಸಿವೆ. ಹಾಗಾದ್ರೆ ಈ ತಿಂಗಳಿನಲ್ಲಿ ನೀವು 15,000ರೂ. ಕ್ಕಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್ 10 ಎಸ್

ರೆಡ್ಮಿ ನೋಟ್ 10 ಎಸ್

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5000mAh ಬ್ಯಾಟರಿ 33W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ 14,999 ರೂ.ಬೆಲೆಗೆ ಲಭ್ಯವಿದೆ.

ಪೊಕೊ ಎಂ 3 ಪ್ರೊ

ಪೊಕೊ ಎಂ 3 ಪ್ರೊ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫೋನ್ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 14,499 ರೂ.ಆಗಿದೆ.

ರಿಯಲ್‌ಮಿ ನಾರ್ಜೊ 30 5ಜಿ

ರಿಯಲ್‌ಮಿ ನಾರ್ಜೊ 30 5ಜಿ

ರಿಯಲ್‌ಮಿ ನಾರ್ಜೊ 30 5G ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 12,499ರೂ.ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32

ಸ್ಯಾಮ್‌ಸಂಗ್ ಗ್ಯಾಲಕ್ಸಿ M32

ಸ್ಯಾಮ್‌ಸಂಗ್‌ ಗ್ಯಾಲಕ್ಸಿ m32 ಸ್ಮಾರ್ಟ್‌ಫೋನ್ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್-ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್‌ ಆಯ್ಕೆಗೆ 12,499ರೂ. ಬೆಲೆ ಹೊಂದಿದೆ.

ಮೋಟೋ G40 ಫ್ಯೂಷನ್

ಮೋಟೋ G40 ಫ್ಯೂಷನ್

ಮೋಟೋ G40 ಫ್ಯೂಷನ್ ಸ್ಮಾರ್ಟ್‌ಫೋನ್‌ 6.80 ಇಂಚಿನ ಮ್ಯಾಕ್ಸ್ ವಿಷನ್ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಹೆಚ್‌ಡಿಆರ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732ಜಿ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದು ಬೃಹತ್ 6000mAh ಬ್ಯಾಟರಿಯನ್ನು ಹೊಂದಿದ್ದು, ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳವರೆಗೆ ಕಾರ್ಯನಿರ್ವಹಿಸುತ್ತದೆ. ಇದು 12,999 ಬೆಲೆಯ ಅಡಿಯಲ್ಲಿ ಬರುತ್ತದೆ.

Best Mobiles in India

English summary
best phones you can buy under Rs 15000 in India in October 2021.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+