Home
ಸುದ್ದಿಜಾಲ

ಬಜೆಟ್‌ ಬೆಲೆಯಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಬೆಸ್ಟ್‌ ಎನಿಸಿಲಿವೆ! ಜಬರ್ದಸ್ತ್‌ ಫೀಚರ್ಸ್‌!

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಸ್ಮಾರ್ಟ್‌ಫೋನ್‌ ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ. ವರ್ಷದಿಂದ ವರ್ಷಕ್ಕೆ ಸ್ಮಾರ್ಟ್‌ಫೋನ್‌ ಬಳಕೆದಾರರ ಸಂಖ್ಯೆಯಲ್ಲಿ ಭಾರಿ ಬದಲಾವಣೆಯಾಗ್ತಿದೆ. ಜೊತೆಗೆ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವವರ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಾಣಬಹುದಾಗಿದೆ. ಇದೇ ಕಾರಣಕ್ಕೆ ಭಾರತದ ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳು ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ. ಈ ಸ್ಮಾರ್ಟ್‌ಫೋನ್‌ಗಳು ವಿವಿಧ ಬೆಲೆಗಳಲ್ಲಿ ಲಭ್ಯವಾಗ್ತಿರೋದು ಮೇನ್‌ ಹೈಲೈಟ್‌ ಆಗಿದೆ.

ಬಜೆಟ್‌ ಬೆಲೆಯಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಬೆಸ್ಟ್‌ ಎನಿಸಿಲಿವೆ! ಫೀಚರ್ಸ್‌ ಏನು?

ಹೌದು, ಭಾರತದ ಮಾರುಕಟ್ಟೆಯಲ್ಲಿ ಹೈ ಎಂಡ್‌ ಪ್ರೈಸ್‌ ಟ್ಯಾಗ್‌ನ ಫೋನ್‌ಗಳು ಮಾತ್ರವಲ್ಲ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಬೇಡಿಕೆ ಪಡೆದುಕೊಂಡಿದೆ. ಇದರಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿವೆ. ಈ ವರ್ಷವೂ ಕೂಡ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಸಿಕ್ಕಾಪಟ್ಟೆ ಟ್ರೆಂಡ್‌ ಸೃಷ್ಟಿಸಿವೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ನೀವು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸಿದರೆ ಸೂಕ್ತವಾದ ಡಿವೈಸ್‌ ಯಾವುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಜೆಟ್‌ ಬೆಲೆಯಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಬೆಸ್ಟ್‌ ಎನಿಸಿಲಿವೆ! ಫೀಚರ್ಸ್‌ ಏನು?

ಪೊಕೊ X4 ಪ್ರೊ
ಪೊಕೊ X4 ಪ್ರೊ ಬಜೆಟ್‌ ಬೆಲೆಯಲ್ಲಿ ಖರೀದಿಸಬಹುದಾದ ಬೆಸ್ಟ್‌ ಫೋನ್‌ ಎನಿಸಿಕೊಂಡಿದೆ. ಈ ಸ್ಮಾರ್ಟ್‌ಫೋನಿನ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯು ಕೇವಲ 14,999ರೂ. ಬೆಲೆಗೆ ಲಭ್ಯವಿದೆ. ಇದು 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64MP ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಯನ್ನು ಒಳಗೊಂಡಿದ್ದು, 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಬಜೆಟ್‌ ಬೆಲೆಯಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಬೆಸ್ಟ್‌ ಎನಿಸಿಲಿವೆ! ಫೀಚರ್ಸ್‌ ಏನು?

ರಿಯಲ್‌ಮಿ 9i 5G
ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಅನ್ನು ನೀವು ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 14,999ರೂ. ಬೆಲೆಗೆ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಬಜೆಟ್‌ ಬೆಲೆಯಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಬೆಸ್ಟ್‌ ಎನಿಸಿಲಿವೆ! ಫೀಚರ್ಸ್‌ ಏನು?

ಮೊಟೊರೊಲಾ G62
ಮೊಟೊರೊಲಾ G62 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲವನ್ನು ಪಡೆದಿದೆ. ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.ಈ ಸ್ಮಾರ್ಟ್‌ಫೋನ್‌ನ ಬೇಸ್‌ ಮಾಡೆಲ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯು 14,999ರೂ. ಬೆಲೆಗೆ ಲಭ್ಯವಾಗಲಿದೆ.

ಬಜೆಟ್‌ ಬೆಲೆಯಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಬೆಸ್ಟ್‌ ಎನಿಸಿಲಿವೆ! ಫೀಚರ್ಸ್‌ ಏನು?

ಐಕ್ಯೂ Z6
ಐಕ್ಯೂ Z6 ಸ್ಮಾರ್ಟ್‌ಫೋನ್‌ ಕೂಡ 14,489ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಆಧಾರಿತ ಫನ್‌ಟಚ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

Best Mobiles in India

English summary
If you are on a tight budget and are looking for a smartphone under Rs 15,000 which offers great value for money.know more details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+