Home
ಸುದ್ದಿಜಾಲ

ಏಪ್ರಿಲ್‌ನಲ್ಲಿ 15,000 ರೂ.ಗಿಂತ ಕಡಿಮೆ ಬೆಲೆಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಅದರಲ್ಲಿ ನೀವು 15,000 ರೂಪಾಯಿಗಳಿಗಿಂತ ಕಡಿಮೆ ಬೆಲೆ ಹೊಂದಿರುವ ಅತ್ಯುತ್ತಮ ಕಾರ್ಯಕ್ಷಮತೆ, ಕ್ಯಾಮೆರಾ ಗುಣಮಟ್ಟ ಮತ್ತು ಉತ್ತಮ ಫೀಚರ್ಸ್‌ಗಳುಳ್ಳ ಸ್ಮಾರ್ಟ್‌ಫೋನ್ ಖರೀದಿಸಲು ನೋಡುತ್ತಿರುವಿರಾ? ಹಾಗಾದರೆ, ಚಿಂತಿಸುವ ಅಗತ್ಯವೇ ಇಲ್ಲ. ಏಕೆಂದರೆ, ಪ್ರಸ್ತುತ 15,000 ರೂಪಾಯಿಗಳ ಸ್ಮಾರ್ಟ್‌ಫೋನ್ ವಿಭಾಗದಲ್ಲಿ ಸಾಕಷ್ಟು ಹೊಸ ಸ್ಮಾರ್ಟ್‌ಫೋನ್‌ಗಳು ಈಗಾಗಲೇ ಮಾರುಕಟ್ಟೆಗೆ ಎಂಟ್ರಿ ನೀಡಿವೆ.

ಸ್ಮಾರ್ಟ್‌ಫೋನ್‌

ಹೌದು, 15,000 ರೂ ಒಳಗಿನ ಸ್ಮಾರ್ಟ್‌ಫೋನ್‌ ಖರೀದಿಸುವುದಾದರೆ ಮಾರುಕಟ್ಟೆಯಲ್ಲಿ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಆಯ್ಕೆ ನಿಮಗೆ ದೊರೆಯಲಿದೆ. ಈಗಾಗಲೇ ಹಲವು ಕಂಪೆನಿಗಳು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದ್ದು ಗ್ರಾಹಕರ ಗಮನ ಸೆಳೆದಿವೆ. ಈ ಸ್ಮಾರ್ಟ್‌ಫೋನ್‌ಗಳು ಉನ್ನತ ಮಟ್ಟದ ಪ್ರಮುಖ ಸ್ಮಾರ್ಟ್‌ಫೋನ್‌ಗಳೊಂದಿಗೆ ಪೈಪೋಟಿ ನೀಡುವಂತಹ ಆಕರ್ಷಕ ಫೀಚರ್ಸ್ಗಳನ್ನು ಸಹ ಒಳಗೊಂಡಿವೆ. ಹಾಗಾದ್ರೆ ಏಪ್ರಿಲ್‌ ತಿಂಗಳಲ್ಲಿ 15,000 ರೂ ಒಳಗೆ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್ 10

ರೆಡ್ಮಿ ನೋಟ್ 10

ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಈ ತಿಂಗಳಲ್ಲಿ 15,000 ರೂ.ಗಳ ಒಳಗೆ ಖರೀದಿಸಬಹುದಾದ ಅತ್ಯುತ್ತಮ ಆಯ್ಕೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ.

ಮೈಕ್ರೋಮ್ಯಾಕ್ಸ್ ಇನ್ 1

ಮೈಕ್ರೋಮ್ಯಾಕ್ಸ್ ಇನ್ 1

ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಆಕ್ಟಾ-ಕೋರ್ ಹಿಲಿಯೊ G80 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯಿನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್-ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಇನ್ನು ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 4GB RAM + 64GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ 10,499 ರೂ ಬೆಲೆಯನ್ನು ಹೊಂದಿದೆ. ಇನ್ನು 6GB RAM + 128GB ಇಂಟರ್‌ ಸ್ಟೋರೇಜ್‌ ಆಯ್ಕೆಯ ಟಾಪ್ ಮಾಡೆಲ್ ಬೆಲೆ 11,999 ರೂ. ಆಗಿದೆ.

ಪೊಕೊ M3

ಪೊಕೊ M3

15 ಸಾವಿರ ರೂ.ಗಿಂತ ಕಡಿಮೆ ದರದಲ್ಲಿ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳಲ್ಲಿ ಪೊಕೊ M3 ಕೂಡ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.53-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 ಪ್ರೊಸೆಸರ್ ಹೊಂದಿದೆ. ಹಾಗೆಯೇ 6GB RAM + 64GB ಸ್ಟೋರೇಜ್ ಮತ್ತು 6GB RAM + 128GB ಇಂಟರ್‌ ಸ್ಟೋರೇಜ್‌ನಲ್ಲಿ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಮೊಟೊರೊಲಾ ಮೋಟೋ G30

ಮೊಟೊರೊಲಾ ಮೋಟೋ G30

ಮೊಟೊರೊಲಾ ಮೋಟೋ G30 ಸ್ಮಾರ್ಟ್‌ಫೋನ್‌ 10,999 ರೂ.ಗಳ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಮ್ಯಾಕ್ಸ್ ವಿಷನ್ ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಬೆಂಬಲವನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ , ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಡಾರ್ಕ್ ಪರ್ಲ್ ಮತ್ತು ನೀಲಿಬಣ್ಣದ ಸ್ಕೈ ಬಣ್ಣಗಳಲ್ಲಿ ಬರುತ್ತದೆ.

ನೋಕಿಯಾ 5.4

ನೋಕಿಯಾ 5.4

ನೋಕಿಯಾ 5.4 ಸ್ಮಾರ್ಟ್‌ಫೋನ್‌ 15,000 ರೂ. ಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 4GB RAM ಮತ್ತು 6GB RAM ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು 4000mAh ಬ್ಯಾಟರಿಯನ್ನು ಒಳಗೊಂಡಿದೆ.

Best Mobiles in India

English summary
best smartphones under Rs 15,000 you can buy this April.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+