ಭಾರತದಲ್ಲಿ 15000 ರೂ. ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!

|

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳ ಬಳಕೆ ಹೆಚ್ಚಾಗುತ್ತಿದೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಇವುಗಳಲ್ಲಿ ಬಜೆಟ್‌ ಬೆಲೆಯಿಂದ ಹಿಡಿದು ಹೈ ಎಂಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಆದರೂ ಬಳಕೆದಾರರು ಮಾತ್ರ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳ ಕಡೆಗೆ ಹೆಚ್ಚಿನ ಆಸಕ್ತಿ ವಹಿಸುತ್ತಾರೆ. ಸದ್ಯ ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಬೇಡಿಕೆ ಪಡೆದುಕೊಂಡಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವಿಧ ಬೆಲೆಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಬಳಕೆದಾರರ ಬಜೆಟ್‌ಗೆ ಸರಿ ಹೊಂದುವ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿವೆ. ಇನ್ನು ನೀವು 15,000 ರೂ. ಒಳಗಿನ ಸ್ಮಾರ್ಟ್‌ಫೋನ್‌ ಖರೀದಿಸುವುದಾದರೆ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ನೀವು ಕಾಣಬಹುದಾಗಿದೆ. ಹಾಗಾದ್ರೆ ಭಾರತದಲ್ಲಿ ಮೇ ತಿಂಗಳಲ್ಲಿ 15,000 ರೂ. ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ X3

ಪೊಕೊ X3

ಪೊಕೊ X3 ಸ್ಮಾರ್ಟ್‌ಫೋನ್‌ ಮಧ್ಯಮ ಶ್ರೇಣಿಯ ಅತ್ಯುತ್ತಮ ಸ್ಮಾರ್ಟ್‌ಫೋನ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 64GB ಇಂಟರ್‌ ಸ್ಟೋರೇಜ್ ಮಾದರಿಗೆ 14,999 ರೂ.ಬೆಲೆಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಹೊಂದಿರುವ ಡಿಸ್‌ಪ್ಲೇ ಹೊಂದಿದ್ದು, ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 732 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 6000mAh ಬ್ಯಾಟರಿ ಸಾಮರ್ಥ್ಯವನ್ನು ಒಳಗೊಂಡಿದೆ.

ಮೈಕ್ರೋಮ್ಯಾಕ್ಸ್ ಇನ್‌ 1

ಮೈಕ್ರೋಮ್ಯಾಕ್ಸ್ ಇನ್‌ 1

ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G 80 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್‌ 4GB RAM + 64GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ 10,499 ರೂ ಬೆಲೆಯನ್ನು ಹೊಂದಿದೆ.

ಮೋಟೋ G30

ಮೋಟೋ G30

ಮೊಟೊರೊಲಾ ಕಂಪೆನಿಯ ಮೋಟೋ G30 ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಒಳಗೊಂಡಿರುವ HD + ಡಿಸ್‌ಪ್ಲೇ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ವೇಗದ ಚಾರ್ಜರ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಇದನ್ನು ನೀವು 15,000ರೂ.ಒಳಗೆ ಖರೀದಿಸಬಹುದಾಗಿದೆ.

ನೋಕಿಯಾ 5.4

ನೋಕಿಯಾ 5.4

ನೋಕಿಯಾ 5.4 ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 ಪ್ರೊಸೆಸರ್ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ.

ರೆಡ್ಮಿ ನೋಟ್ 10

ರೆಡ್ಮಿ ನೋಟ್ 10

ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ 15,000ರೂ. ಕ್ಕಿಂತ ಕಡಿಮೆ ಬೆಲೆ ಹೊಂದಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಅತ್ಯುತ್ತಮ ಆಯ್ಕೆಯಾಗಿದೆ. ಇದು 6.43-ಇಂಚಿನ ಫುಲ್- ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1100 ನಿಟ್ಸ್ ಪೀಕ್ ಬ್ರೈಟ್‌ನೆಸ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಅನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದೆ.

Best Mobiles in India

English summary
The sub-Rs 15,000 segment has seen a lot of action in India since the start of this year.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X