ಭಾರತದ ಮಾರುಕಟ್ಟೆಯಲ್ಲಿ 20,000 ರೂ ಒಳಗೆ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!
ಸ್ಮಾರ್ಟ್‌ಫೋನ್ ಇಲ್ಲದೆ ಮನೆಯಿಂದ ಹೊರ ಬರುವುದೇ ಕಷ್ಟ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ತಮ್ಮ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ತಮ್ಮ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿವೆ. ಅಲ್ಲದೆ ಮಾರುಕಟ್ಟೆಯಲ್ಲಿ ಹೈ ಎಂಡ್ ಮಾದರಿಯಿಂದ ಹಿಡಿದು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಲಭ್ಯವಿವೆ. ಆದರೂ ಗ್ರಾಹಕರು ಮಾತ್ರ ತಮ್ಮ ನೆಚ್ಚಿನ ಬ್ರಾಂಡ್ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸುತ್ತಾರೆ.

ಹೌದು, ಇದು ಸ್ಮಾರ್ಟ್‌ಫೋನ್ ಜಮಾನ. ಪ್ರತಿಯೊಬ್ಬರೂ ಸ್ಮಾರ್ಟ್‌ಫೋನ್ ಹೊಂದುವುದಕ್ಕೆ ಬಯಸುತ್ತಾರೆ. ಇದರಿಂದಾಗಿಯೇ ಇಂದು ಮಾರುಕಟ್ಟೆಯಲ್ಲಿ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಆದರೂ ಗ್ರಾಹಕರು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುತ್ತಾರೆ. ಸದ್ಯ ಭಾರತದಲ್ಲಿ 20,000 ರೂ ಒಳಗೆ ಹೆಚ್ಚಿನ ಸ್ಮಾರ್ಟ್‌ಫೋನ್‌ಗಳು ಇಂದು ಲಭ್ಯವಿವೆ. ಹಾಗಾದ್ರೆ ಭಾರತದಲ್ಲಿ 20,000 ರೂ ಒಳಗೆ ಲಬ್ಯವಾಗುವ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ ನಾರ್ಜೊ 30 ಪ್ರೊ
ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800u SoC ಪ್ರೊಸೆಸರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಸದ್ಯ ಭಾರತದಲ್ಲಿ ರಿಯಲ್‌ಮಿ ನಾರ್ಜೋ 30ಪ್ರೊ 5G ಸ್ಮಾರ್ಟ್‌ಫೋನ್ ಬೆಲೆ 6GB RAM + 64GB ಸ್ಟೋರೇಜ್ ರೂಪಾಂತರಕ್ಕೆ 16,999 ರೂ. ಹಾಗೂ 8GB RAM + 128GB ಸ್ಟೋರೇಜ್ ಮಾದರಿಯು ರೂ. 19,999 ಬೆಲೆಯನ್ನು ಹೊಂದಿದೆ.

ಪೊಕೊ X3
ಪೊಕೊ X3 ಸ್ಮಾರ್ಟ್‌ಫೋನ್ 20,000 ರೂ ಒಳಗೆ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇದು 6.67-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G ಪ್ರೊಸೆಸರ್ ಅನ್ನು ಹೊಂದಿದೆ. ಇನ್ನು ಪೊಕೊ X3 ಕ್ವಾಡ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಪೊಕೊ X3 ಬೇಸ್ ಮಾಡೆಲ್ 6GB RAM + 64GB ಶೇಖರಣಾ ಮಾದರಿಗೆ 16,999 ರೂ. 6GB RAM + 128GB ಶೇಖರಣಾ ಮಾದರಿಗೆ 18,499 ರೂ, ಮತ್ತು 8GB RAM + 128GB ಸ್ಟೋರೇಜ್ ಹೊಂದಿರುವ ಟಾಪ್-ಟೈರ್ ರೂಪಾಂತರದ ಬೆಲೆ 19,999.ರೂ ಆಗಿದೆ.

ವಿವೋ V20SE
ವಿವೋ V20 SE ಸ್ಮಾರ್ಟ್‌ಫೋನ್ 6.44-ಇಂಚಿನ ಪೂರ್ಣ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 1,080x2,400 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದ್ದು, ಡಿಸ್‌ಪ್ಲೇಯ ಅನುಪಾತ 20:9 ಆಗಿದೆ. ವಿವೋ V20 SE ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ನಿಂದ ನಿಯಂತ್ರಿಸಲ್ಪಡುತ್ತದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಹೊಂದಿದೆ. ಇದರ ಬೆಲೆ 19,990 ರೂ ಆಗಿದೆ.

ಪೊಕೊ M3
ಪೊಕೊ M3 ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಇದು 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಭಾರತದಲ್ಲಿ ಪೊಕೊ M3 ಬೆಲೆ 6GB RAM+ 64GB ಶೇಖರಣಾ ರೂಪಾಂತರಕ್ಕೆ 10,999 ರೂ. ಹಾಗೂ 6GB RAM + 128GB ಶೇಖರಣಾ ಮಾದರಿಯ ಬೆಲೆ 11,999 ರೂ. ಆಗಿದೆ.

ರೆಡ್ಮಿ ನೋಟ್ 10 ಪ್ರೊ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ ಭಾರತದಲ್ಲಿ 20,000 ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಾಗುವ ಸ್ಮಾರ್ಟ್‌ಫೋನ್ ಆಗಿದೆ. ಇದು 6.67-ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 1200 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G ಪ್ರೊಸೆಸರ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಜೊತೆಗೆ 5020mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಸದ್ಯ ಭಾರತದಲ್ಲಿ ರೆಡ್‌ಮಿ ನೋಟ್ 10 ಪ್ರೊ 6GB RAM + 64GB ಶೇಖರಣಾ ಮಾದರಿಗೆ 15,999 ರೂ. ಹಾಗೂ 6GB RAM + 128 GB ಸ್ಟೋರೇಜ್ ಆಯ್ಕೆಗೆ 16,999 ರೂ ಮತ್ತು 8 GB RAM + 128GB ಶೇಖರಣಾ ರೂಪಾಂತರಕ್ಕೆ 18,999 ರೂ.ಬೆಲೆ ಹೊಂದಿದೆ.


Click it and Unblock the Notifications