ಭಾರತದಲ್ಲಿ 40,000 ರೂ. ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!

|

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳ ಬಳಕೆ ಹೆಚ್ಚಿದೆ. ಎಲ್ಲಾ ವಯೋ ಮಾನದವರು ಕೂಡ ಸ್ಮಾರ್ಟ್‌ಫೋನ್‌ ಬಿಟ್ಟಿರಲಾರದಂತಹ ದಿನಗಳಲ್ಲಿ ನಾವಿದ್ದೇವೆ. ಇದೇ ಕಾರಣಕ್ಕೆ ಹಲವು ಸ್ಮಾರ್ಟ್‌ಫೋನ್‌ ಕಂಪೆನಿಗಳು ತಮ್ಮದೇ ಆದ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಲೇ ಬಂದಿವೆ. ಇದರಲ್ಲಿ ಬಜೆಟ್‌ ಬೆಲೆಯಿಂದ ಹಿಡಿದು ಮಿಡ್‌ ರೇಂಜ್‌, ಹೈ ಎಂಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳು ಕೂಡ ಇಂದು ಲಭ್ಯವಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಇಲ್ಲದೇ ಹೊರ ಹೋಗುವುದು ಕಷ್ಟ ಎನ್ನುವ ಕಾಲಘಟ್ಟ ಇದೆ. ದೈನಂದಿನ ಬದುಕಿನಲ್ಲಿ ಸ್ಮಾರ್ಟ್‌ಫೋನ್‌ ಕೂಡ ಅತಿ ಅಗತ್ಯ ಎನಿಸಿದೆ. ಆದರಿಂದ ಪ್ರತಿಯೊಬ್ಬರೂ ಸ್ಮಾರ್ಟ್‌ಫೋನ್‌ ಹೊಂದಲು ಬಯಸುತ್ತಾರೆ. ಆದರೆ ಎಲ್ಲರೂ ಕೂಡ ಹೆಚ್ಚಿನ ಬೆಲೆಯ ಸ್ಮಾರ್ಟ್‌ಫೋನ್‌ ಖರೀದಿಸಲು ಸಾಧ್ಯವಾಗುವುದಿಲ್ಲ. ಆದರಿಂದ ತಮ್ಮ ಬೆಲೆಗೆ ಅನುಗುಣವಾಗಿ ಸ್ಮಾರ್ಟ್‌ಫೋನ್‌ ಖರೀದಿಸಲು ಮುಂದಾಗುತ್ತಾರೆ. ಸದ್ಯ ಮಾರುಕಟ್ಟೆಯಲ್ಲಿ 40,000 ರೂ. ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳು ಯಾವುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

iQOO 7

iQOO 7

ಇತ್ತೀಚಿಗಷ್ಟೇ ಮಾರುಕಟ್ಟೆಗೆ ಎಂಟ್ರಿ ನೀಡಿದ ಐಕ್ಯೂಒ ಸ್ಮಾರ್ಟ್‌ಫೋನ್‌ 31,990 ರೂ.ಗಳ ಆರಂಭಿಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಐಕ್ಯೂ 7 ಸ್ಮಾರ್ಟ್‌ಫೋನ್‌ 6.62-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟ್ರಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಮತ್ತು 256GB ವರೆಗೆ ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಐಕ್ಯೂ 7 ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 66W ಫ್ಲ್ಯಾಶ್‌ಚಾರ್ಜ್ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ.

ಒನ್‌ಪ್ಲಸ್ 9R

ಒನ್‌ಪ್ಲಸ್ 9R

ಒನ್‌ಪ್ಲಸ್ 9 R ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪ್ಲಾಟ್‌ ಪ್ಲೂಯಿಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಆಪರೇಟಿಂಗ್‌ ಸಿಸ್ಟಮ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM+128GB, 12GB RAM+256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಒನ್‌ಪ್ಲಸ್‌ 9R ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ವಾರ್ಪ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇದನ್ನು 39,999ರೂ.ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಶಿಯೋಮಿ ಮಿ 11X

ಶಿಯೋಮಿ ಮಿ 11X

ಮಿ 11X ಸ್ಮಾರ್ಟ್‌ಫೋನ್‌ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿವೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 6GB RAM + 128GB ಮಾದರಿಗೆ 29,999ರೂ. ಹಾಗೂ 8GB RAM + 128GB RAM ಆಯ್ಕೆಗೆ 31,999 ರೂ. ಬೆಲೆಯನ್ನು ಹೊಂದಿದೆ.

ಐಫೋನ್‌SE (2020)

ಐಫೋನ್‌SE (2020)

ಆಪಲ್ ಐಫೋನ್ SE(2020) 4.7-ಇಂಚಿನ ರೆಟಿನಾ ಎಚ್‌ಡಿ ಮಾದರಿಯ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಆಪಲ್‌ ಕಂಪೆನಿ A 13 ಬಯೋನಿಕ್ SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಪ್ರೊಸೆಸರ್‌ಗೆ ಪೂರಕವಾಗಿ ಐಒಎಸ್‌ 13 ಬೆಂಬಲ ನೀಡಲಿದೆ. ಇನ್ನು ಈ ಹೊಸ ಐಫೋನ್ ರಿಯರ್‌ ಸೆಟ್‌ಅಪ್‌ನಲ್ಲಿ ಸಿಂಗಲ್‌ ಕ್ಯಾಮೆರಾ ಹೊಂದಿದೆ. ಇದು 2 ಮೆಗಾಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ f/ 1.8 ಲೆನ್ಸ್‌ + ಒಐಎಸ್ ಹೊಂದಿದೆ. ಇದು 60kps ವರೆಗೆ 4 ಕೆ ವಿಡಿಯೋ ರೆಕಾರ್ಡಿಂಗ್ ಮತ್ತು ಫೋಟೋಗಳಿಗಾಗಿ ಸ್ಮಾರ್ಟ್ HDR ಅನ್ನು ನೀಡುತ್ತದೆ. ಜೊತೆಗೆ 7 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಜೊತೆಗೆ ಈ ಬ್ಯಾಟರಿ ಪ್ಯಾಕ್‌ಅಪ್‌ 13 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಟೈಂ ಮತ್ತು 40 ಗಂಟೆಗಳ ಆಡಿಯೊ ಪ್ಲೇಬ್ಯಾಕ್ ಟೈಂ ಹೊಂದಿರುತ್ತದೆ ಎಂದು ಹೇಳಲಾಗುತ್ತಿದೆ. ಬಜೆಟ್ ಐಫೋನ್ ಮಾದರಿ 64 ಜಿಬಿ ಸ್ಟೋರೇಜ್ ರೂಪಾಂತರಕ್ಕೆ ಆರಂಭಿಕ ಬೆಲೆ 39,900 ರೂ. ಬೆಲೆಯನ್ನು ಹೊಂದಿದೆ.

Best Mobiles in India

English summary
Best smartphones under Rs 40,000 in india.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X