Home
ಸುದ್ದಿಜಾಲ

5,000 ರೂ.ಒಳಗೆ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಪ್ರತಿಯೊಬ್ಬರಿಗೂ ಅವಶ್ಯಕತೆ ಇದೆ. ಯುವಕರಿಂದ ಹಿಡಿದು ಎಲ್ಲಾ ವಯೋಮಾನದವರು ಕೂಡ ಸ್ಮಾರ್ಟ್‌ಫೋನ್‌ ಹೊಂದಲು ಬಯಸುತ್ತಾರೆ. ಇದೇ ಕಾರಣಕ್ಕೆ ಮಾರುಕಟ್ಟೆಯಲ್ಲಿ ಹಲವು ಕಂಪೆನಿಗಳು ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಇನ್ನು ಟೆಕ್ನಾಲಜಿ ಬದಲಾದಂತೆ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಿದ್ದು, ಇವುಗಳ ಬೆಲೆ ಕೂಡ ದಿನೇ ದಿನೇ ದುಬಾರಿಯಾಗುತ್ತಿದೆ. ಆದರೂ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಗ್ರಾಹಕರ ಕೈ ಸೇರುತ್ತಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳದ್ದೇ ಕಾರುಬಾರು. ಆದರೆ ಹೆಚ್ಚಿನ ಜನರು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸುತ್ತಾರೆ. ಅದರಲ್ಲೂ ಕೆಲವು ಸ್ಮಾರ್ಟ್‌ಫೋನ್‌ಗಳು 10,000 ರೂ ಆಸುಪಾಸಿನ ಬೆಲೆ ಹೊಂದಿರುತ್ತವೆ. ಒಂದು ವೇಳೆ ನೀವು ಇದಕ್ಕಿಂತಲೂ ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಕೊಂಡರೆ 5,000 ರೂಪಾಯಿಗಳಿಗಿಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಬಹುದಾಗಿದೆ. ಹಾಗಾದ್ರೆ ಮಾರುಕಟ್ಟೆಯಲ್ಲಿ 5,000 ರೂ.ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ m01 ಕೋರ್

ಸ್ಯಾಮ್‌ಸಂಗ್ ಗ್ಯಾಲಕ್ಸಿ m01 ಕೋರ್

ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ M01 ಕೋರ್‌ ಸ್ಮಾರ್ಟ್‌ಫೋನ್‌ 4,999 ರೂ ಬೆಲೆಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 720x1480 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 5.1-ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಎಂಟಿ 6739 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ ಗೋ 10 ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 1GB RAM ಮತ್ತು 8GB ಇಂಟರ್‌ ಸ್ಟೋರೇಜ್ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಜಿಯೋನಿ ಮ್ಯಾಕ್ಸ್

ಜಿಯೋನಿ ಮ್ಯಾಕ್ಸ್

ಬಹುದಿನಗಳ ನಂತರ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ರಿ ಎಂಟ್ರಿ ನೀಡಿರುವ ಜಿಯೋನಿ ತನ್ನ ಜಿಯೋನಿ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಅನ್ನು ಕಡಿಮೆ ಬೆಲೆಗೆ ನೀಡುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 720x1560 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.1-ಇಂಚಿನ ಎಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 267 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ನೀಡುತ್ತದೆ. ಇದು ಆಕ್ಟಾ-ಕೋರ್ ಯುನಿಸಾಕ್ 9863 ಎ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 13ಮೆಗಾಫಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದರ ಬೆಲೆ 4,999 ರೂ.ಆಗಿದೆ.

ನೋಕಿಯಾ 1

ನೋಕಿಯಾ 1

ನೋಕಿಯಾ 1 ಸ್ಮಾರ್ಟ್‌ಫೋನ್‌ 4.5 ಇಂಚಿನ ಹೆಚ್‌ಡಿ ಐಪಿಎಸ್ ಡಿಸ್‌ಪ್ಲೇ ಹೊಂದಿದೆ. ಇದು 1.1GHz ಕ್ವಾಡ್-ಕೋರ್ ಮೀಡಿಯಾ ಟೆಕ್ ಪ್ರೊಸೆಸರ್ ಹೊಂದಿದೆ. ಹಾಗೆಯೇ 1GB RAM ಮತ್ತು 8GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದು 2,150mAh ಬ್ಯಾಟರಿಯನ್ನು ಒಳಗೊಂಡಿದೆ. ಇದರ ಬೆಲೆ 4672 ರೂ ಆಗಿದೆ.

ಮೈಕ್ರೋಮ್ಯಾಕ್ಸ್ ಭಾರತ್ 2 ಪ್ಲಸ್

ಮೈಕ್ರೋಮ್ಯಾಕ್ಸ್ ಭಾರತ್ 2 ಪ್ಲಸ್

ಮೈಕ್ರೋಮ್ಯಾಕ್ಸ್ ಸಂಸ್ಥೆಯ ಮೈಕ್ರೋಮ್ಯಾಕ್ಸ್ ಭಾರತ್ 2 ಪ್ಲಸ್ ಸ್ಮಾರ್ಟ್‌ಫೋನ್‌4 ಇಂಚಿನ ಡಬ್ಲ್ಯುವಿಜಿಎ ​​ಡಿಸ್‌ಪ್ಲೇ ಹೊಂದಿದೆ. ಇದುಕ್ವಾಡ್-ಕೋರ್ ಮೀಡಿಯಾ ಟೆಕ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 7.0 ನೌಗಾಟ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 1GB RAM ಮತ್ತು 8GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 1,600 mAh ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ 3,710ರೂ.ಆಗಿದೆ.

ಐಟೆಲ್ A25 ಪ್ರೊ

ಐಟೆಲ್ A25 ಪ್ರೊ

ಐಟೆಲ್ A25 ಪ್ರೊ ಸ್ಮಾರ್ಟ್‌ಫೋನ್‌ 720x1280 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಡ್‌ ಕೋರ್‌ ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 9.0 ಪೈ ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2 GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 3,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ 4,999 ರೂ.ಆಗಿದೆ.

Best Mobiles in India

English summary
Best smartphones Under rupees 5000.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+