Home
ಸುದ್ದಿಜಾಲ

smartphones: 128GB ಗಿಂತಲೂ ಅಧಿಕ ಸ್ಟೋರೇಜ್‌ ಆಯ್ಕೆಯ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳಿವು! 30 ಸಾವಿರಕ್ಕಿಂತಲೂ ಕಡಿಮೆ ಬೆಲೆಗೆ

ಸ್ಮಾರ್ಟ್‌ಫೋನ್‌ಗಳ (smartphones) ವಿಭಾಗದಲ್ಲಿ ವಿವಿಧ ರೀತಿಯ ಸ್ಮಾರ್ಟ್‌ಫೋನ್‌ಗಳನ್ನು ಕಾಣಬಹುದು. ಅಂದರೆ ಬಜೆಟ್ ಬೆಲೆಯಿಂದ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳು ಲಭ್ಯ ಇದ್ದು, ಈ ಫೋನ್‌ಗಳು ಬೆಲೆಗೆ ತಕ್ಕ ಫೀಚರ್ಸ್‌ ಆಯ್ಕೆ ಪಡೆದಿರುತ್ತವೆ. ಈ ನಡುವೆ 128GB ಗಿಂತಲೂ ಅಧಿಕ ಸ್ಟೋರೇಜ್‌ ಆಯ್ಕೆಯ ಫೋನ್‌ಗಳಿಗೆ ಬಹು ಬೇಡಿಕೆ ಇದೆ.

ಹೌದು, ಸ್ಮಾರ್ಟ್‌ಫೋನ್‌ಗಳನ್ನು ಖರೀದಿ ಮಾಡುವಾಗ ಇಂಟರ್‌ ಸ್ಟೋರೇಜ್‌ ಆಯ್ಕೆಯ ವಿಚಾರವೂ ಪ್ರಮುಖವಾಗಲಿದೆ. ಈ ನಡುವೆ ಹೆಚ್ಚಿನ ಸ್ಟೋರೇಜ್‌ ಇರುವ ಫೋನ್‌ಗಳಿಗೆ ದೊಡ್ಡ ಮಟ್ಟದ ಬೇಡಿಕೆ ಇದ್ದು, ಈ ವಿಭಾಗದಲ್ಲಿ ಒನ್‌ಪ್ಲಸ್‌, ಮೊಟೊರೊಲಾ, ಸ್ಯಾಮ್‌ಸಂಗ್‌ ಫೋನ್‌ಗಳನ್ನು ಕಾಣಬಹುದಾಗಿದೆ. ಹಾಗಿದ್ರೆ, ತಡ ಯಾಕೆ ಬನ್ನಿ ಯಾವೆಲ್ಲಾ ಫೋನ್‌ಗಳು ಮೂವತ್ತು ಸಾವಿರದ ಒಳಗೆ ಲಭ್ಯ ಇದ್ದು, 128GB ಗಿಂತಲೂ ಅಧಿಕ ಸ್ಟೋರೇಜ್‌ ಆಯ್ಕೆ ಪಡೆದಿವೆ ಅನ್ನೋದನ್ನು ನೋಡೋಣ.

128GB ಗಿಂತಲೂ ಅಧಿಕ ಸ್ಟೋರೇಜ್‌ ಆಯ್ಕೆಯ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳಿವು!

ಒನ್‌ಪ್ಲಸ್‌ ನಾರ್ಡ್‌ CE 4 5G: ಈ ಸ್ಮಾರ್ಟ್‌ಫೋನ್‌ (OnePlus Nord CE 4 5G) ಅನ್ನು 24,999 ರೂ.ಗಳ ಬೆಲೆಗೆ ಖರೀದಿ ಮಾಡಬಹುದಾಗಿದೆ. ಇದು 6.7 ಇಂಚಿನ FHD+ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ 120 Hz ರಿಫ್ರೆಶ್ ರೇಟ್‌ ದರ ಹೊಂದಿದೆ. ಹಾಗೆಯೇ ಸ್ನಾಪ್‌ಡ್ರಾಗನ್ 7 ಜನ್ 3 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 50 MP + 8 MP ಡ್ಯುಯಲ್ ರಿಯರ್ ಕ್ಯಾಮೆರಾ, 16 MP ಸೆಲ್ಫಿ ಕ್ಯಾಮೆರಾವನ್ನು ಇದರಲ್ಲಿ ಕಾಣಬಹುದಾಗಿದೆ. ಅಲ್ಲದೆ 5500 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಸೂಪರ್‌ವೂಕ್‌ ಚಾರ್ಜಿಂಗ್‌ ಬೆಂಬಲ ಪಡೆದಿದೆ.

ಮೊಟೊರೊಲಾ ಎಡ್ಜ್‌50 ಪ್ರೊ 5G: ಈ ಸ್ಮಾರ್ಟ್‌ಫೋನ್ (Motorola Edge50 Pro 5G) ಅನ್ನು 29,999 ರೂ.ಗಳಿಗೆ ಕೊಂಡುಕೊಳ್ಳಬಹುದಾಗಿದೆ. ಇದು 6.7 ಇಂಚಿನ FHD+, P-OLED ಡಿಸ್‌ಪ್ಲೇ ಹೊಂದಿದ್ದು, 144 Hz ರಿಫ್ರೆಶ್ ರೇಟ್‌ ಆಯ್ಕೆ ಪಡೆದಿದೆ. ಹಾಗೆಯೇ ಸ್ನಾಪ್‌ಡ್ರಾಗನ್ 7 ಜನ್ 3 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುವ ಈ ಫೋನ್ 50 MP + 13 MP + 10 MP ಯ ಟ್ರಿಪಲ್ ರಿಯರ್ ಕ್ಯಾಮೆರಾ, 50 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ. ಇದರ ಜೊತೆಗೆ ಈ ಫೋನ್ 4500 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಟರ್ಬೊ ಪವರ್ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ.

128GB ಗಿಂತಲೂ ಅಧಿಕ ಸ್ಟೋರೇಜ್‌ ಆಯ್ಕೆಯ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳಿವು!

ನಥಿಂಗ್ ಫೋನ್ 2a: ಇದನ್ನು (Nothing phone 2a) 25,698 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ FHD+ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು, 120 Hz ರಿಫ್ರೆಶ್ ರೇಟ್‌ ಬೆಂಬಲ ಹೊಂದಿದೆ. ಹಾಗೆಯೇ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 50 MP + 50 MP ಡ್ಯುಯಲ್ ರಿಯರ್‌ ಕ್ಯಾಮೆರಾ, 32 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ. ಅಲ್ಲದೆ ಇದರಲ್ಲಿ ನೀವು 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆಯನ್ನು ಕಾಣಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G: ಈ ಫೋನ್‌ (Samsung Galaxy A35 5G) ಅನ್ನು 27,999 ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಇದು 6.6 ಇಂಚಿನ FHD+, ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, 120 Hz ರಿಫ್ರೆಶ್ ದರ ಆಯ್ಕೆ ಪಡೆದಿದೆ. ಅಲ್ಲದೆ ಎಕ್ಸಿನೋಸ್‌ 1380 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 50 MP + 8 MP + 5 MP ಟ್ರಿಪಲ್ ರಿಯರ್ ಕ್ಯಾಮೆರಾ, 13 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿಯಿಂದ ಈ ಫೋನ್‌ ಪ್ಯಾಕ್‌ ಆಗಿದೆ.

128GB ಗಿಂತಲೂ ಅಧಿಕ ಸ್ಟೋರೇಜ್‌ ಆಯ್ಕೆಯ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳಿವು!

ಶಿಯೋಮಿ ರೆಡ್ಮಿ ನೋಟ್‌ 13 ಪ್ರೊ: ಈ ಸ್ಮಾರ್ಟ್‌ಫೋನ್ (Xiaomi Redmi Note 13 Pro) 23,999 ರೂ.ಗಳಿಗೆ ಲಭ್ಯ ಇದೆ. ಇದು 6.67 ಇಂಚಿನ FHD+ ಅಮೋಲೆಡ್‌ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, ಸ್ನಾಪ್‌ಡ್ರಾಗನ್ 7s ಜನ್ 2 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 200 MP + 8 MP + 2 MPಯ ಟ್ರಿಪಲ್ ರಿಯರ್‌ ಕ್ಯಾಮೆರಾ, 16 MP ಸೆಲ್ಫಿ ಕ್ಯಾಮೆರಾದ ಜೊತೆಗೆ 5100 mAh ಸಾಮರ್ಥ್ಯದ ಟರ್ಬೊ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ.

Best Mobiles in India

English summary
Many smartphones including OnePlus Nord CE 4 5G, Motorola Edge 50 Pro 5G, Nothing Phone 2a, Samsung Galaxy A35 5G, Xiaomi Redmi Note 13 Pro have got storage options above 128GB.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+