Home
ಸುದ್ದಿಜಾಲ

ನೀವು ಖರೀದಿಸಬಹುದಾದ ಅತ್ಯುತ್ತಮ 4GB RAM ಸ್ಮಾರ್ಟ್‌ಫೋನ್‌ಗಳು!

ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಖರೀದಿ ಮಾಡುವಾಗ ಫೋನಿನ RAM ಸಾಮರ್ಥ್ಯ ಕೂಡ ಪ್ರಮುಖವಾಗುತ್ತದೆ. ಸ್ಮಾರ್ಟ್‌ಫೋನ್‌ ಕಂಪೆನಿಗಳು ಕೂಡ ಗ್ರಾಹಕರ ಅಗತ್ಯಕ್ಕೆ ತಕ್ಕಂತೆ RAM ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ. ಇದರಲ್ಲಿ 4GB RAM ಸ್ಮಾರ್ಟ್‌ಫೋನ್‌ಗಳು ಕೂಡ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಅದರಂತೆ 2022ರಲ್ಲಿಯೂ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು 4GB RAM ಸಾಮರ್ಥ್ಯದ ಆಯ್ಕೆಯಲ್ಲಿ ಬಂದಿವೆ.

ಸ್ಮಾರ್ಟ್‌ಫೋನ್‌ಗಳು

ಹೌದು, ಮೊಬೈಲ್‌ ಮಾರುಕಟ್ಟೆಯಲ್ಲಿ ವಿವಿಧ RAM ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳು ಲಭ್ಯವಾಗುತ್ತಿವೆ. 4GB RAM ಸ್ಮಾರ್ಟ್‌ಫೋನ್‌ಗಳು ಕೂಡ ಗ್ರಾಹಕರ ನೆಚ್ಚಿನ ಆಯ್ಕೆಗಳಲ್ಲಿ ಒಂದಾಗಿವೆ. ಹೆಚ್ಚಿನ RAM ಆಯ್ಕೆಯ ಫೋನ್‌ಗಳನ್ನು ಗ್ರಾಹಕರು ಬಯಸಿದರೂ ಕೂಡ ಕನಿಷ್ಠ 4GB RAM ಆಯ್ಕೆಯ ಸ್ಮಾರ್ಟ್‌ಫೋನ್‌ ಹೊಂದುವುದಕ್ಕೆ ಬಯಸುತ್ತಾರೆ. ಹಾಗಾದ್ರೆ ಭಾರತದಲ್ಲಿ ಪ್ರಸ್ತುತ ದಿನಗಳಲ್ಲಿ ನೀವು ಖರೀದಿಸಬಹುದಾದ 4GB RAM ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಇನ್ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಬೇಸ್‌ ಮಾಡೆಲ್‌ 4GB RAM + 128GB ರೂಪಾಂತರದ ಆಯ್ಕೆಗೆ 13,999ರೂ. ಬೆಲೆ ಹೊಂದಿದೆ.

ರಿಯಲ್‌ಮಿ 9i 5G

ರಿಯಲ್‌ಮಿ 9i 5G

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಕ್ವಿಕ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನಿನ 4GB RAM + 64GB ಸ್ಟೋರೇಜ್ ಆವೃತ್ತಿಗೆ 13,990ರೂ. ಬೆಲೆ ಹೊಂದಿದೆ.

ರಿಯಲ್‌ಮಿ C35

ರಿಯಲ್‌ಮಿ C35

ರಿಯಲ್‌ಮಿ C35 ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಯೂನಿಸೋಕ್‌ T616 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 13,359ರೂ. ಬೆಲೆ ಹೊಂದಿದೆ.

ಶಿಯೋಮಿ ರೆಡ್ಮಿ 10 ಪ್ರೈಮ್‌

ಶಿಯೋಮಿ ರೆಡ್ಮಿ 10 ಪ್ರೈಮ್‌

ರೆಡ್‌ಮಿ 10 ಪ್ರೈಮ್‌ ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದೆ.ಇದು 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 12,499ರೂ ಬೆಲೆ ಹೊಂದಿದೆ.

ಐಕ್ಯೂ Z6 5G

ಐಕ್ಯೂ Z6 5G

ಐಕ್ಯೂ Z6 5G ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ISOCELL JN1 ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ 4GB RAM ಶೇಖರಣಾ ರೂಪಾಂತರದ ಆಯ್ಕೆಗೆ 15,999ರೂ.ಬೆಲೆ ಹೊಂದಿದೆ.

Best Mobiles in India

English summary
Best smartphones with 4GB RAM to buy in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+