Home
ಸುದ್ದಿಜಾಲ

64 ಮೆಗಾಪಿಕ್ಸೆಲ್‌ ಕ್ಯಾಮೆರಾ ಒಳಗೊಂಡ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳ ಬಳಕೆ ಹೆಚ್ಚಿದೆ. ಯುವ ಜನತೆಯಿಂದ ಹಿಡಿದು ಎಲ್ಲಾ ವಯೋಮಾನದವರು ಕೂಡ ಸ್ಮಾರ್ಟ್‌ಫೋನ್‌ಗಳನ್ನು ಬಳಸುತ್ತಿದ್ದಾರೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ತಮ್ಮದೇ ಆದ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಬಜೆಟ್‌ ಬೆಲೆಯಿಂದ ಹಿಡಿದು, ಫೋಲ್ಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳು ಕೂಡ ಲಭ್ಯವಿವೆ. ಇನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಎಲ್ಲರೂ ಕ್ಯಾಮೆರಾ ವಿಶೇಷತೆ ಬಗ್ಗೆ ಗಮನವಹಿಸುತ್ತಾರೆ. ಉತ್ತಮ ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಒಳಗೊಂಡ ಸ್ಮಾರ್ಟ್‌ಫೋನ್‌ಗಳನ್ನೇ ಖರೀದಿಸುತ್ತಾರೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ನಾವು ಕಾಣಬಹುದಾಗಿದೆ. ಇತ್ತೀಚಿನ ಸ್ಮಾರ್ಟ್‌ಫೋನ್‌ಗಳು ಕ್ಯಾಮೆರಾ ಫೀಚರ್ಸ್‌ಗಳ ಕಡೆಗೆ ಹೆಚ್ಚಿನ ಗಮನ ನೀಡಿದ್ದು ಗ್ರಾಹಕರನ್ನು ಆಕರ್ಷಿಸಿವೆ. ಸದ್ಯ ಮಾರುಕಟ್ಟೆಯಲ್ಲಿ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಒಳಗೊಂಡ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಗಮನ ಸೆಳದಿವೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ಈ ತಿಂಗಳಲ್ಲಿ ಸಂಚಲನ ಸೃಷ್ಟಿಸಿರುವ 64 ಮೆಗಾಪಿಕ್ಸೆಲ್‌ ಕ್ಯಾಮೆರಾ ಒಳಗೊಂಡ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ 8

ರಿಯಲ್‌ಮಿ 8

ರಿಯಲ್‌ಮಿ 8 ಸ್ಮಾರ್ಟ್‌ಫೋನ್ 64 ಮೆಗಾಪಿಕ್ಸೆಲ್‌ ಕ್ಯಾಮೆರಾ ಒಳಗೊಂಡ ಸ್ಮಾರ್ಟ್‌ಫೋನ್‌ಗಳಲ್ಲಿ ಒದಾಗಿದೆ. ಈ ಸ್ಮಾರ್ಟ್‌ಫೋನ್‌ 6.4 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಇದು ಮೀಡಿಯಾ ಟೆಕ್ ಹಿಲಿಯೋ G95 ಪ್ರೊಸೆಸರ್ ಅನ್ನು ಹೊಂದಿದೆ. ಇದರೊಂದಿಗೆ Adreno 618 GPU ಗ್ರಾಫಿಕ್ ಸಪೋರ್ಟ್‌ನ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಪ್ರೊಸೆಸರ್‌ ಇತ್ತೀಚಿನ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿರಲಿದೆ. ಇನ್ನು ಈ ಫೋನ್‌ 4GB + 128GB ಮತ್ತು 8GB + 128GB ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದೆ. ರಿಯಲ್‌ಮಿ 8 ಸ್ಮಾರ್ಟ್‌ಫೋನ್‌ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಇದರ ಬೇಸ್‌ ಮಾಡೆಲ್‌ 14,999 ರೂ. ಆಗಿದೆ.

ರೆಡ್ಮಿ ನೋಟ್ 10 ಪ್ರೊ

ರೆಡ್ಮಿ ನೋಟ್ 10 ಪ್ರೊ

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ನಿಂದ ರಕ್ಷಿಸಲಾಗಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್‌ ಪೆಡದುಕೊಂಡಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ ಬೆಲೆ 16,999 ರೂ.ಆಗಿದೆ.

ಪೊಕೊ X3

ಪೊಕೊ X3

ಪೊಕೊ X3 ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ- ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ ಪೊಕೊ X3 ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 732G SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX682 ಸೆನ್ಸಾರ್‌ ಅನ್ನು ಹೊಂದಿದೆ. ಇದರ ಬೇಸ್‌ ಮಾಡೆಲ್‌ ಬೆಲೆ 14,999 ರೂ. ಆಗಿದೆ.

ವಿವೋ V20

ವಿವೋ V20

ವಿವೋ V20 ಸ್ಮಾರ್ಟ್‌ಫೋನ್‌ 6.44-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 20: 9 ರಚನೆಯ ಅನುಪಾತದೊಂದಿಗೆ ಅಮೋಲೆಡ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್‌ 720G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11 ರೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ವಿವೋ V20 ಬೇಸ್‌ ಮಾಡೆಲ್‌ ಬೆಲೆ 24,990 ರೂ ಆಗಿದ್ದು, ಇತ್ತೀಚೆಗೆ 2000 ರೂ.ಗಳ ಬೆಲೆಯನ್ನು ಕಡಿತಗೊಳಿಸಿದೆ.

Best Mobiles in India

English summary
Best smartphones with 64MP camera in india.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+