ಮೀಡ್‌ರೇಂಜ್‌ ಬೆಲೆಯಲ್ಲಿ 8GB RAM ಆಯ್ಕೆಯ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ!

|

ಸದ್ಯ ಬಹುತೇಕ ಕೆಲಗಳು ಸ್ಮಾರ್ಟ್‌ಫೋನ್ ಮೂಲಕವೇ ನಡೆಯುತ್ತವೆ. ಬಳಕೆದಾರರು ವೇಗದ ಕಾರ್ಯವೈಖರಿಯ ಸ್ಮಾರ್ಟ್‌ಫೋನ್ ಹೊಂದಲು ಇಷ್ಟಪಡುತ್ತಾರೆ. ಈ ನಿಟ್ಟಿನಲ್ಲಿ ಪ್ರತಿಷ್ಠಿತ ಮೊಬೈಲ್‌ ಕಂಪನಿಗಳು ಅಧಿಕ RAM ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳ ಮಾಡೆಲ್‌ಗಳನ್ನು ಪರಿಚಯಿಸುತ್ತಿವೆ. ಹೀಗಾಗಿ ಪ್ರಸ್ತುತ ಫೋನ್ ಖರೀದಿಸುವ ಗ್ರಾಹಕರು ಕಡಿಮೆಯೆಂದರೂ ಕನಿಷ್ಠ 6GB RAM ಸಾಮರ್ಥ್ಯವಿರುವ ಸ್ಮಾರ್ಟ್‌ಫೋನ್ ಕೊಳ್ಳಲು ಮುಂದಾಗುತ್ತಾರೆ.

RAM

ಹೌದು, ಹೆಚ್ಚು RAM ಸಾಮರ್ಥ್ಯವಿರುವ ಫೋನ್‌ಗಳಲ್ಲಿ ಮಲ್ಟಿಟಾಸ್ಕ್ ಕೆಲಸಗಳು ಚುರುಕಾಗಿ ಸಾಗುತ್ತವೆ. ಹೀಗಾಗಿ ನೂತನ ಸ್ಮಾರ್ಟ್‌ಫೋನ್ ಖರೀದಿಸುವ ಬಹುತೇಕ ಗ್ರಾಹಕರು ಅತ್ಯುತ್ತಮ ಕ್ಯಾಮೆರಾ ಸೆನ್ಸಾರ್‌ ಜೊತೆಗೆ 6GB RAM ಅಥವಾ 8GB RAM ವೇರಿಯಂಟ್‌ ಆಯ್ಕೆ ಮಾಡುವುದು ಸಾಮಾನ್ಯ. ಹಾಗೆಯೇ ಬಜೆಟ್‌ ಅಥವಾ ಮೀಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿರುವ 6GB RAM ಫೋನ್‌ಗಳಿಗೆ ಬೇಡಿಕೆ ಹೆಚ್ಚು ಎನ್ನಬಹುದು. ಹಾಗಾದರೇ 25,000 ಬೆಲೆಯಲ್ಲಿ ಲಭ್ಯವಿರುವ 8GB RAM ಫೋನ್‌ಗಳ ಬಗ್ಗೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M51

ಸ್ಯಾಮ್‌ಸಂಗ್ ಗ್ಯಾಲಕ್ಸಿ M51

ಸ್ಯಾಮ್‌ಸಂಗ್‌ನ ಬಿಗ್ ಬ್ಯಾಟರಿ ಸ್ಮಾರ್ಟ್‌ಫೋನ್ ಆಗಿ ಗುರುತಿಸಿಕೊಂಡಿರುವ ಗ್ಯಾಲಕ್ಸಿ M51 ಫೋನ್ 8GB RAM ಮತ್ತು 128GB ಆಂತರಿಕ ಸಂಗ್ರಹ ಆಯ್ಕೆಯಲ್ಲಿ ಬರುತ್ತದೆ. ಈ ಫೋನ್ 7,000mAh ಬ್ಯಾಟರಿಯ ಜೊತೆಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಹೊಂದಿದೆ. ಇದರೊಂದಿಗೆ ಸ್ನಾಪ್ಡ್ರಾಗನ್ 730 ಜಿ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕಾರ್ಯ ಮಾಡುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಆಕರ್ಷಕ ಫೀಚರ್ಸ್‌ಗಳೊಂದಿಗೆ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ 6.5-ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, ಎಕ್ಸಿನೋಸ್ 9611 ಚಿಪ್‌ಸೆಟ್ ಪ್ರೊಸೆಸರ್ ಪಡೆದಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿ ಕ್ಯಾಮೆರಾವು 32ಎಂಪಿ ಆಗಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ. ಹಾಗೆಯೇ ಈ ಫೋನ್ 8GB RAM ಮತ್ತು 128GB ಸ್ಟೋರೇಜ್ ಹೊಂದಿರುವುದು ಪ್ರಮುಖ ಹೈಲೈಟ್ ಆಗಿದೆ.

ಪೊಕೊ X3 ಸ್ಮಾರ್ಟ್‌ಫೋನ್

ಪೊಕೊ X3 ಸ್ಮಾರ್ಟ್‌ಫೋನ್

ಬಜೆಟ್‌ ಬೆಲೆಯ ಹೊಸ ಪೊಕೊ X3 ಸ್ಮಾರ್ಟ್‌ಫೋನ್ ಸಹ 8GB RAM ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಇದರೊಂದಿಗೆ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 732 ಪ್ರೊಸೆಸರ್ ಹೊಂದಿದೆ. ಹಾಗೆಯೇ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಪಡೆದಿರುವ ಈ ಫೋನ್ ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದೆ. ಸೆಲ್ಫಿ ಕ್ಯಾಮೆರಾವು 20ಎಂಪಿ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ.

ರಿಯಲ್‌ಮಿ ನಾರ್ಜೊ 20 ಪ್ರೊ

ರಿಯಲ್‌ಮಿ ನಾರ್ಜೊ 20 ಪ್ರೊ

ಇತ್ತೀಚಿಗೆ ಬಿಡುಗಡೆ ಆಗಿರುವ ರಿಯಲ್‌ಮಿ ನಾರ್ಜೊ 20 ಪ್ರೊ ಸಹ 8GB RAM ಮತ್ತು 128GB ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ ಜಿ 95 ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 10 ಓಎಸ್ ಸಪೋರ್ಟ್‌ ಸಹ ಪಡೆದಿದೆ. ಹಾಗೆಯೇ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, 16ಎಂಪಿ ಸೆನ್ಸಾರ್ ಕ್ಯಾಮೆರಾ ಸಾಮರ್ಥ್ಯ ಪಡೆದಿದೆ.

ವಿವೋ V20 SE ಸ್ಮಾರ್ಟ್‌ಫೋನ್‌

ವಿವೋ V20 SE ಸ್ಮಾರ್ಟ್‌ಫೋನ್‌

ವಿವೊ V20 SE ಸ್ಮಾರ್ಟ್‌ಫೋನ್‌ 6.44-ಇಂಚಿನ ಪೂರ್ಣ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 1,080x2,400 ಪಿಕ್ಸೆಲ್ ರೆಸಲ್ಯೂಶನ್ ಹೊಂದಿರಲಿದೆ. ಮುಖ್ಯವಾಗಿ ಈ ಫೋನ್ ಸಹ 8GB RAM ಆಯ್ಕೆಯಲ್ಲಿ ಲಭ್ಯ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ನಿಂದ ನಿಯಂತ್ರಿಸಲ್ಪಡುತ್ತದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ, ಇದು 48 ಮೆಗಾಪಿಕ್ಸೆಲ್ ಪ್ರಾಥಮಿಕ ಶೂಟರ್ ಇರಲಿದೆ. ಜೊತೆಗೆ 4,100 ಎಮ್ಎಹೆಚ್ ಬ್ಯಾಟರಿಯೊಂದಿಗೆ ಬರುತ್ತದೆ ಮತ್ತು ಇದು 33 ಡಬ್ಲ್ಯೂ ಫ್ಲ್ಯಾಶ್‌ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
There are quite a few smartphone options available in the mid-range segment (under Rs 25,000) that pack 8GB RAM.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X