ಕಡಿಮೆ ಬೆಲೆಯಲ್ಲಿ ಅಧಿಕ ಬ್ಯಾಟರಿ ಬ್ಯಾಕಪ್‌ ನೀಡುವ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ!

|

ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಪ್ರತಿಯೊಬ್ಬರೂ ಅತ್ಯಗತ್ಯ ಡಿವೈಸ್‌ ಆಗಿ ಗುರುತಿಸಿಕೊಂಡಿದೆ. ಪ್ರತಿಯೊಬ್ಬರೂ ಕೂಡ ಸ್ಮಾರ್ಟ್‌ಫೋನ್‌ ಹೊಂದುವುದಕ್ಕೆ ಬಯಸುತ್ತಾರೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ತಮ್ಮದೇ ಆದ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಇನ್ನು ಸ್ಮಾರ್ಟ್‌ಫೋನ್‌ ಪ್ರಿಯರು ಸ್ಮಾರ್ಟ್‌ಫೋನ್‌ ಖರೀದಿಸುವಾಗ ಬ್ಯಾಟರಿ ಬ್ಯಾಕಪ್‌, ಕ್ಯಾಮೆರಾ ಫೀಚರ್ಸ್‌ಗಳ ಕಡೆಗೆ ಹೆಚ್ಚಿನ ಗಮನ ನೀಡುತ್ತಾರೆ. ಅದರಲ್ಲೂ ಹೆಚ್ಚಿನ ಬ್ಯಾಟರಿ ಬ್ಯಾಕಪ್‌ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಹೆಚ್ಚಿದೆ.

ಸ್ಮಾರ್ಟ್‌ಫೋನ್‌

ಹೌದು, ಟೆಕ್‌ ವಲಯದಲ್ಲಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಇನ್ನು ಇತ್ತಿಚಿನ ಸ್ಮಾರ್ಟ್‌ಫೋನ್‌ಗಳು ಮಲ್ಟಿ-ಟಾಸ್ಕಿಂಗ್‌ ಬೆಂಬಲಿಸುವುದರಿಂದ ಉತ್ತಮವಾದ ಬ್ಯಾಟರಿ ಬ್ಯಾಕಪ್‌ನ ಅಗತ್ಯವಿರುತ್ತದೆ. ಆದರಿಂದ ಅಧಿಕ ಬ್ಯಾಟರಿ ಬ್ಯಾಕಪ್‌ ಹೊಂದಿರುವ ಸ್ಮಾರ್ಟ್‌ಫೋನ್‌ಗಳು ಗ್ರಾಹಕರ ಗಮನ ಸೆಳೆಯುತ್ತಿವೆ. ಇನ್ನು ಭಾರತದ ಸ್ಮಾರ್ಟ್‌ಫೋನ್‌ ಆರುಕಟ್ಟೆಯಲ್ಲಿ ಅಧಿಕ ಬ್ಯಾಟರಿ ಬ್ಯಾಕಪ್‌ ನೀಡುವ ಸ್ಮಾರ್ಟ್‌ಫೋನ್‌ಗಳಿಗೆ. ಸದ್ಯ ಭಾರತದಲ್ಲಿ 20,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಅಧಿಕ ಬ್ಯಾಟರಿ ಬ್ಯಾಕಪ್‌ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರಿಯಲ್‌ಮಿ 8 5G

ರಿಯಲ್‌ಮಿ 8 5G

ನೀವು 20,000ರೂ ಗಿಂತ ಕಡಿಮೆ ಬೆಲೆಯಲ್ಲಿ ಅಧಿಕ ಬ್ಯಾಟರಿ ಬ್ಯಾಕಪ್‌ ನೀಡುವ ಸ್ಮಾರ್ಟ್‌ಫೋನ್‌ ಬೇಕೆಂದರೆ ಇದು ಅತ್ಯುತ್ತಮ ಆಯ್ಕೆಯಾಗಿದೆ. ಇನ್ನು ಈ ಫೋನ್‌ 6.5-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್‌ ಹೊಂದಿದ್ದು, 18W ಕ್ವಿಕ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕೇವಲ 5 ಪರ್ಸೆಂಟ್ ಚಾರ್ಜ್‌ನಲ್ಲಿ 34.2 ಗಂಟೆಗಳ ಸ್ಟ್ಯಾಂಡ್ ಬೈ ಟೈಂ ಅನ್ನು ನೀಡಲಿದೆ. ಆದರೆ ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಸಕ್ರಿಯಗೊಳಿಸಿದಾಗ ಮಾತ್ರ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ 16,499ರೂ ಆಗಿದೆ.

ರೆಡ್ಮಿ ನೋಟ್ 10 ಟಿ 5G

ರೆಡ್ಮಿ ನೋಟ್ 10 ಟಿ 5G

ರೆಡ್ಮಿ ನೋಟ್ 10 ಟಿ 5G ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.ಇದರ ಬೆಲೆ ಸದ್ಯ ಅಮೆಜಾನ್‌ನಲ್ಲಿ 14,999ರೂ ಆಗಿದೆ.

ಮೋಟೋ G60

ಮೋಟೋ G60

ಮೊಟೊರೊಲಾ ಕಂಪೆನಿ ಮೋಟೋ ಜಿ 60 ಕೂಡ ಉತ್ತಮ ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 6,000mAh ಬ್ಯಾಟರಿ ಬ್ಯಾಕಪ್‌ ಹೊಂದಿದ್ದು, 20 ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಹೊಂದಿದೆ. ಈ ಫೋನ್‌ 6.8-ಇಂಚಿನ ಫುಲ್-ಎಚ್‌ಡಿ+ ಐಪಿಎಸ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಸದ್ಯ ಈ ಫೋನ್‌ ಬೆಲೆ 19,199ರೂ,ಆಗಿದೆ.

ಪೊಕೊ ಎಂ3 ಪ್ರೊ 5G

ಪೊಕೊ ಎಂ3 ಪ್ರೊ 5G

ಪೊಕೊ ಎಂ3 ಪ್ರೊ 5ಜಿ ಸ್ಆರ್ಟ್‌ಫೋನ್‌ 6.53 ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು,18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಸದ್ಯ ಇದರ ಬೆಲೆ 16,499ರೂ ಬೆಲೆಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 32 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 32 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 32 5 ಜಿ ಸ್ಮಾರ್ಟ್‌ಫೋನ್‌ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಹೊಂದಿದೆ. ಇನ್ನು ಈ ಫೋನ್‌ 5,000mAh ಬ್ಯಾಟರಿ ಹೊಂದಿದ್ದು, 19 ಗಂಟೆಗಳ ಕಾಲಿಂಗ್ ಸಮಯ (ಎಲ್ ಟಿಇ ನೆಟ್ವರ್ಕ್) ಅಥವಾ 20 ಗಂಟೆಗಳ ವೀಡಿಯೋ ಪ್ಲೇಬ್ಯಾಕ್ ನೀಡುತ್ತದೆ. ಇದರ ಬೆಲೆ 20,999ರೂ, ಆಗಿದೆ.

Best Mobiles in India

English summary
Here are five smartphones with at least a 5,000mAh battery under Rs 20,000 in India.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X