Home
ಸುದ್ದಿಜಾಲ

20,000ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಪ್ರಸ್ತುತ ಹಲವು ಆಯ್ಕೆಗಳು ಲಭ್ಯವಿದೆ. ವಿವಿಧ ಬೆಲೆ ವಿಭಾಗಗಳಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಕಾಣಬಹುದು. ಇದರಲ್ಲಿ ಮಿಡ್‌ ರೇಂಜ್‌ ಸ್ಮಾರ್ಟ್‌ಫೋನ್‌ಗಳಿಗೆ ಮೊದಲಿನಿಂದಲೂ ಭಾರಿ ಕ್ರೇಜ್‌ ಇದೆ. ಅದರಲ್ಲೂ ಜನಪ್ರಿಯ ಬ್ರ್ಯಾಂಡ್‌ ಸ್ಮಾರ್ಟ್‌ಫೋನ್‌ಗಳಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ.

ಹೌದು, ಮಧ್ಯಮ ಬೆಲೆ ವಿಭಾಗದಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಬಿಸಿ ದೋಸೆಯಂತೆ ಮಾರಾಟವಾಗುತ್ತಿವೆ. ಇವುಗಳಲ್ಲಿ ಒನ್‌ಪ್ಲಸ್‌, ರಿಯಲ್‌ಮಿ, ವಿವೋ ಕಂಪೆನಿಯ ಫೋನ್‌ಗಳು ಬೇಡಿಕೆ ಪಡೆದುಕೊಂಡಿದೆ. ಹಾಗಾದ್ರೆ ಪ್ರಸ್ತುತ ಮಾರುಕಟ್ಟೆಯಲ್ಲಿ 20,000ರೂ. ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

20,000ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G

ಒನ್‌ಪ್ಲಸ್‌ ನಾರ್ಡ್‌ CE 3 ಲೈಟ್‌ 5G ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ HM6 ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ಸೂಪರ್‌ ವೂಕ್‌ ವೈರ್ಡ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 8GB RAM + 128GB ಸ್ಟೋರೇಜ್ ಆಯ್ಕೆಗೆ 19,999ರೂ. ಬೆಲೆ ಹೊಂದಿದೆ.

ವಿವೋ T2

ವಿವೋ T2 5G ಸ್ಮಾರ್ಟ್‌ಫೋನ್‌ 6.38-ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ, ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಪ್ರಸ್ತುತ ವಿವೋ T2 5G ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 18,999ರೂ. ಆಗಿದೆ.

20,000ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ರಿಯಲ್‌ಮಿ 10 ಪ್ರೊ 5G

ರಿಯಲ್‌ಮಿ 10 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸೆನ್ಸಾರ್‌ ಹೊಂದಿದೆ. ಜೊತೆಗೆ 33W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದರ ಆರಂಭಿಕ ಬೆಲೆ 18,999ರೂ.ಆಗಿದೆ.

ಶಿಯೋಮಿ ರೆಡ್ಮಿ ನೋಟ್‌ 12

ರೆಡ್ಮಿ ನೋಟ್‌ 12 ಫೋನ್ 6.67 ಇಂಚಿನ FHD+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 685 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಆಗಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಹೊಂದಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಪಡೆದಿದೆ. ಪ್ರಸ್ತುತ ಇದರ ಬೆಲೆ 17,999ರೂ. ಆಗಿದೆ.

ಐಕ್ಯೂ Z7

ಐಕ್ಯೂ Z7 ಸ್ಮಾರ್ಟ್‌ಫೋನ್ 6.28 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 920 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಿಹಿಸಲಿದೆ. ಈ ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಹೊಂದಿದ್ದು, 44W ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 18,999ರೂ.ಬೆಲೆಯಲ್ಲಿ ಲಭ್ಯವಿದೆ.

Best Mobiles in India

English summary
Best Smartphones you can buy for Under 20,000 in May 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+