Best Smartphones: ಭಾರತದಲ್ಲಿ 15,000ರೂ ಒಳಗೆ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!
15,000ರೂ ಕ್ಕಿಂತ ಕಡಿಮೆ ಬೆಲೆಯಲ್ಲಿ ಯಾವುದಾದರೂ ಅತ್ಯುತ್ತಮ ಸ್ಮಾರ್ಟ್‌ಫೋನ್ ಖರೀದಿಸಬೇಕು ಅನ್ನೋ ಯೋಚನೆಯಲ್ಲಿದ್ದೀರಾ. ಲಭ್ಯವಿರುವ ಹಲವು ಸ್ಮಾರ್ಟ್‌ಫೋನ್‌ಗಳಲ್ಲಿ ಯಾವುದು ಸೂಕ್ತ ಅನ್ನೋ ಚಿಂತೆ ಸಾಮಾನ್ಯ. ಹಾಗಂತ ಯೋಚಿಸಬೇಕಾದ ಅಗತ್ಯವಿಲ್ಲ, ಏಕೆಂದರೆ 15,000ರೂ ಕ್ಕಿಂತ ಕಡಿಮೆ ಬೆಲೆಗೆ ಲಭ್ಯವಾಗುವ ದಿ ಬೆಸ್ಟ್ (Best Smartphones)ಮೊಬೈಲ್‌ಗಳ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ.
ಹೌದು, ಭಾರತದ ಮೊಬೈಲ್ ಲೋಕದಲ್ಲಿ 15,000ರೂ ಕ್ಕಿಂತ ಕಡಿಮೆ ಬೆಲೆಗೆ ಹಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ದೊರೆಯಲಿವೆ. ಇವುಗಳಲ್ಲಿ 5G ಸ್ಮಾರ್ಟ್‌ಫೋನ್‌ಗಳು ಕೂಡ ದೊರೆಯಲಿವೆ. ಅದರಲ್ಲಿ ಶಿಯೋಮಿ ರಿಯಲ್‌ಮಿ, ವಿವೋದಂತಹ ಜನಪ್ರಿಯ ಬ್ರ್ಯಾಂಡ್ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ. ಹಾಗಾದ್ರೆ ಜನವರಿ 2024ರಲ್ಲಿ 15,000ರೂ ಕ್ಕಿಂತ ಕಡಿಮೆ ಬೆಲೆಗೆ ಸೇಲ್ ಆಗುವ ಮೂಲಕ ಸದ್ದು ಮಾಡುತ್ತಿರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ ರೆಡ್ಮಿ 12 5G
ಜನವರಿ 2024ರಲ್ಲಿ 15,000ರೂ ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳಲ್ಲಿ ಶಿಯೋಮಿ ರೆಡ್ಮಿ 12 5G ದಿ ಬೆಸ್ಟ್ ಎನಿಸಿದೆ. ಈ ಸ್ಮಾರ್ಟ್‌ಫೋನ್ ಪ್ರಸ್ತುತ ಅಮೆಜಾನ್ ತಾಣದಲ್ಲಿ 11,999ರೂ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ರೆಡ್ಮಿ 12 5G ಫೋನ್ 6.79 ಇಂಚಿನ FHD ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದ್ದು, 50 ಮೆಗಾಪಿಕ್ಸೆಲ್ ಸೆನ್ಸಾರ್ ಮೆನ್ ಕ್ಯಾಮೆರಾ ಹೊಂದಿದೆ.
ಟೆಕ್ನೋ ಪೋವಾ 5 ಪ್ರೊ
ಟೆಕ್ನೋ ಪೋವಾ 5 ಪ್ರೊ ಮೊಬೈಲ್ ಪ್ರಸ್ತುತ ಕೇವಲ 14,999ರೂ ಬೆಲೆಯಲ್ಲಿ ದೊರೆಯಲಿದೆ. ಈ ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 68W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ 11x 5G
ರಿಯಲ್‌ಮಿ 11X 5G ಸ್ಮಾರ್ಟ್‌ಫೋನ್ ಭಾರತದಲ್ಲಿ 14,482ರೂ ಬೆಲೆಗೆ ದೊರೆಯುತ್ತಿದೆ. ಇದು 6.72 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 6GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾ 64MP ಸೆನ್ಸಾರ್‌ನಲ್ಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ವಿವೋ T2x
ವಿವೋ T2x 5G ಸ್ಮಾರ್ಟ್‌ಫೋನ್ ಜನವರಿ ತಿಂಗಳಿನಲ್ಲಿ 13,099ರೂ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಇದು 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








