Home
ಸುದ್ದಿಜಾಲ

Best Smartphones: 25,000ರೂ ಒಳಗೆ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

ಮೊಬೈಲ್‌ ಖರೀದಿಸುವಾಗ ಸ್ಮಾರ್ಟ್‌ಫೋನ್‌ನ ವಿನ್ಯಾಸ ಮಾತ್ರವಲ್ಲ ಅದರ ಬೆಲೆಯೂ ಕೂಡ ಗಣನೆಗೆ ಬರಲಿದೆ. ಆದರಿಂದ ಬೆಲೆಗೆ ಸೂಕ್ತವಾಗುವಂತಹ ಸ್ಮಾರ್ಟ್‌ಫೋನ್‌ಗಳ ಆಯ್ಕೆ ಮಾಡುವುದಕ್ಕೆ ಗ್ರಾಹಕರು ಮುಂದಾಗುತ್ತಾರೆ. ಭಾರತದಲ್ಲಿ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಆಯ್ಕೆಗಳಲ್ಲಿದ್ದು, ಯಾವ ಫೋನ್‌ ಖರೀದಿಗೆ ಸೂಕ್ತ ಎನ್ನುವ ಪ್ರಶ್ನೆ ಸಹಜವಾಗಿಯೇ ಬರಲಿದೆ.

ಹೌದು, ಸ್ಮಾರ್ಟ್‌ಫೋನ್‌ ಖರೀದಿಸುವವರಿಗೆ ಹಲವು ಆಯ್ಕೆಯ ಫೋನ್‌ಗಳು ಲಭ್ಯವಿದೆ. ಅದರಲ್ಲೂ ಫೆಬ್ರವರಿ ತಿಂಗಳಿನಲ್ಲಿ ನೀವು ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಕಾಣಬಹುದಾಗಿದೆ. ಸದ್ಯ ಮಾರುಕಟ್ಟೆಯಲ್ಲಿ 25,000ರೂ ಒಳಗಿನ ಬೆಲೆಯಲ್ಲಿ ಸಖತ್‌ ಸೌಂಡ್‌ ಮಾಡುತ್ತಿರುವ ಫೋನ್‌ಗಳು ಯಾವುವು? ಫೆಬ್ರವರಿಯಲ್ಲಿ 25,000ರೂ ಒಳಗೆ ನೀವು ಖರೀದಿಸಬಹುದಾದ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Best Smartphones: 25,000ರೂ ಒಳಗೆ ಖರೀದಿಸಬಹುದಾದ ಅತ್ಯುತ್ತಮ ಫೋನ್‌ಗಳು!

ಐಕ್ಯೂ ನಿಯೋ 7 5G
ಪ್ರಸ್ತುತ ದಿನಗಳಲ್ಲಿ 25,000ರೂ ಒಳಗೆ ಖರೀದಿಸಬಹುದಾದ ಬೆಸ್ಟ್‌ ಫೋನ್‌ಗಳಲ್ಲಿ ಐಕ್ಯೂ ನಿಯೋ 7 5G ಕೂಡ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 8200 5G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ವ್ಯವಸ್ಥೆಯನ್ನು ಹೊಂದಿದ್ದು, 64MP ಮುಖ್ಯ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಸಹ ನೀಡಲಾಗಿದ್ದು, 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

Poco X6 5G

25,000ರೂ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸುವವರಿಗೆ ಇದು ಸೂಕ್ತವಾಗಿದೆ. ಇನ್ನು ಪೊಕೊ X6 ಪ್ರೊ 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಒಳಗೊಂಡಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಆಗಿದೆ. ಇನ್ನು ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಇದಕ್ಕೆ ಪೂರಕವಾಗಿ 67W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಮಾಡಲಿದೆ.

Best Smartphones: 25,000ರೂ ಒಳಗೆ ಖರೀದಿಸಬಹುದಾದ ಅತ್ಯುತ್ತಮ ಫೋನ್‌ಗಳು!

ಒನ್‌ಪ್ಲಸ್‌ ನಾರ್ಡ್‌ CE 3 5G
ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್ ಕೂಡ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ ಅನ್ನು ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಪಡೆದಿದೆ. ಇದು ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 782G SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12 GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 80W ಚಾರ್ಜಿಂಗ್‌ನೊಂದಿಗೆ ಬರುತ್ತದೆ.

ಮೊಟೊರೊಲಾ ಎಡ್ಜ್‌ 40 ನಿಯೋ 5G
ಮೊಟೊರೊಲಾ ಎಡ್ಜ್ 40 ನಿಯೋ ಕೂಡ ಮಧ್ಯಮ ಶ್ರೇಣಿಯ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲ ದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

Best Mobiles in India

English summary
Best Smartphones you can buy under Rs 25000 in February 2024 in India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+