ಕಡಿಮೆ ಬೆಲೆಯಲ್ಲಿ 6000mAh ಬ್ಯಾಟರಿ ಮೊಬೈಲ್ ಖರೀದಿಸಲು ಇದುವೇ ಬೆಸ್ಟ್ ಟೈಮ್!
ಜನಪ್ರಿಯ ಇ ಕಾಮರ್ಸ್ ತಾಣ ಎನಿಸಿರುವ ಫ್ಲಿಪ್‌ಕಾರ್ಟ್ ನಲ್ಲಿ ಈಗ ಬ್ಲ್ಯಾಕ್ ಫ್ರೈಡ್ ಸೇಲ್ ಶುರು ಆಗಿದೆ. ಈ ಸೇಲ್‌ನಲ್ಲಿ ಮೊಬೈಲ್‌ಗಳು ಹಾಗೂ ಸ್ಮಾರ್ಟ್ ಗ್ಯಾಡ್ಜೆಟ್ಸ್‌ಗಳು ಸಿಕ್ಕಾಪಟ್ಟೆ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿವೆ. ಬೊಂಬಾಟ್ ಡಿಸ್ಕೌಂಟ್ ಬೆಲೆಯಲ್ಲಿ ಬಿಗ್ ಬ್ಯಾಟರಿ, ಬಿಗ್ ಸ್ಟೋರೇಜ್ ಇರುವ ಫೋನ್ ಖರೀದಿಸಲು ಬಯಸುವ ಗ್ರಾಹಕರಿಗೆ ಈ ಸೇಲ್ ಉತ್ತಮ. ಇದೀಗ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಟೊರೊಲಾ G64 5G (Motorola G64 5G) ಮೊಬೈಲ್ ಭರ್ಜರಿ ಕೊಡುಗೆಯ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಮೊಟೊರೊಲಾ G64 5G (Motorola G64 5G) ಫೋನ್ ಶೇ. 16% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್‌ನ 8GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 14,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಲಭ್ಯವಾಗಲಿವೆ.

ಅಂದಹಾಗೆ ಮೊಟೊರೊಲಾ G64 5G ಮೊಬೈಲ್ 8GB + 128GB ಸ್ಟೋರೇಜ್ ಹಾಗೂ 12 GB RAM + 256 GB ವೇರಿಯಂಟ್ ಸೌಲಭ್ಯ ಪಡೆದಿದ್ದು, ಹಾಗೆಯೇ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇದು 16 ಮೆಗಾಪಿಕ್ಸಲ್ ಸೆಲ್ಫಿ ಕ್ಯಾಮೆರಾ ಸಹ ಪಡೆದುಕೊಂಡಿದೆ. ಹಾಗಾದರೇ ಮೊಟೊರೊಲಾ G64 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ವಿನ್ಯಾಸ ಹೇಗಿದೆ
ಮೊಟೊರೊಲಾ G64 5G ಮೊಬೈಲ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCD ಅನ್ನು ಡಿಸ್‌ಪ್ಲೇ ಹೊಂದಿದ್ದು, ಈ ಫೋನಿನ ಡಿಸ್‌ಪ್ಲೇಯು 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ. ಇದಲ್ಲದೆ ಸ್ಕ್ರೀನ್ ಕಡಿಮೆ ಅಂಚಿನ ರಚನೆ ಹೊಂದಿದ್ದು, ಈ ಡಿಸ್‌ಪ್ಲೇ 120 Hz ರಿಫ್ರೆಶ್ ರೇಟ್ ಸೌಲಭ್ಯ ಒಳಗೊಂಡಿದೆ. ಅಲ್ಲದೇ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ಸಪೋರ್ಟ್ ಕೂಡಾ ಒಳಗೊಂಡಿದೆ.
ಯಾವ ಪ್ರೊಸೆಸರ್ ಇದೆ
ಮೊಟೊರೊಲಾ G64 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಸಪೋರ್ಟ್ ಆಗಿ ಆಂಡ್ರಾಯ್ಡ್ 14 ಓಎಸ್ ಕೆಲಸ ಮಾಡಲಿದೆ. ಹಾಗೆಯೇ ಇದು 8GB + 128GB ಸ್ಟೋರೇಜ್ ಹಾಗೂ 12 GB RAM + 256 GB ಆಂತರೀಕ ಸ್ಟೋರೇಜ್ ಆಯ್ಕೆಗಳನ್ನು ಕೂಡಾ ಒಳಗೊಂಡಿದ್ದು, 24GB ವರೆಗೂ RAM ಬೂಸ್ಟ್ ಸೌಲಭ್ಯ ಸಹ ಇದೆ.
ಕ್ಯಾಮೆರಾ ಕಮಾಲ್ ಏನು?
ಮೊಟೊರೊಲಾ G64 5G ಮೊಬೈಲ್ ಮೂರು ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಎರಡನೇ ಹಾಗೂ ಮೂರನೇ ಕ್ಯಾಮೆರಾಗಳು ಕ್ರಮವಾಗಿ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಹಾಗೂ 8 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇವೆ. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಬಿಗ್ ಬ್ಯಾಟರಿ ಸೌಲಭ್ಯ
ಮೊಟೊರೊಲಾ G64 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಹೊಂದಿದ್ದು, ಪ್ರಮುಖ ಹೈಲೈಟ್ ಎನಿಸಿದೆ. ಇದಕ್ಕೆ ಪೂರಕವಾಗಿ 33W ಟರ್ಬೋ ಪವರ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ. ಇನ್ನು ಈ ಮೊಬೈಲ್ ಐಸ್ ಲಿಲಾಕ್, ಮಿಂಟ್ ಗ್ರೀನ್ ಮತ್ತು ಪರ್ಲ್ ಬ್ಲೂ ಕಲರ್ ಆಯ್ಕೆಗಳಲ್ಲಿ ಖರೀದಿಗೆ ದೊರೆಯುತ್ತದೆ.


Click it and Unblock the Notifications








